• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎನ್‌ಕೌಂಟರ್‌: ಓರ್ವ ನಕ್ಸಲ್ ಹತ್ಯೆ, ಇಬ್ಬರು ಯೋಧರಿಗೆ ಗಾಯ

|

ನಾರಾಯಣ್‌ಪುರ್, ಏಪ್ರಿಲ್ 29: ಚತ್ತೀಸ್‌ಗಢದ ನಾರಾಯಣಪುರದಲ್ಲಿ ನಕ್ಸಲ್ ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಯೋಧರು ಹಾರಿಸಿದ ಗುಂಡಿಗೆ ಓರ್ವ ನಕ್ಸಲ್ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ನಾರಾಯಣಪುರದ ಛೋಟೆ ಡೊಂಗರ್ ಪೊಲೀಸ್ ಠಾಣೆಯ ಕರೆಮೆಟ್ಟಾ ಎಂಬ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಎನ್'ಕೌಂಟರ್ ನಡೆದಿದೆ.

ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲು ಐಇಡಿ ಸ್ಫೋಟಿಸಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವ ಇಬ್ಬರು ಯೋಧರನ್ನು ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದ್ದು, ಇದೀಗ ಆವರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಹತ್ಯೆಯಾಗಿರುವ ನಕ್ಸಲ್ ಮಹಿಳೆಯ ಮೃತದೇಹದ ಜೊತೆಗೆ 1 ಎಸ್ಎಲ್ಆರ್ ರೈಫಲ್, 12 ಬೋರ್ ರೈಫಲ್ಸ್ ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ.

English summary
One Naxal Killed and Two security force personnel sustained injuries in an exchange of fire in Cchattisgarh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X