ರಾಜ್ಯಸಭೆಗೆ ಸದಸ್ಯರ ಆಯ್ಕೆ ಹೇಗೆ? ಮತ ಲೆಕ್ಕಾಚಾರ ಹೇಗಿರುತ್ತೆ?

Posted By:
Subscribe to Oneindia Kannada

ರಾಜ್ಯಸಭಾ ಸದಸ್ಯರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಮತ ಲೆಕ್ಕಾಚಾರ ಹೇಗೆ ನಡೆಯುತ್ತದೆ ಎಂಬುದರ ವಿವರಣೆ ಇಲ್ಲಿದೆ...

ರಾಜ್ಯಸಭಾ ಸದಸ್ಯರನ್ನು ನೇರವಾಗಿ ಜನರು ಆಯ್ಕೆ ಮಾಡುವುದಿಲ್ಲ. ಸಾರ್ವಜನಿಕರು ಆಯ್ಕೆ ಮಾಡಿದ ಜನಪ್ರತಿನಿಧಿಗಳಾದ ಶಾಸಕರು(ಎಂಎಲ್ಎ) ರಾಜ್ಯಸಭೆಗೆ ಸದಸ್ಯರನ್ನು ಆಯ್ಕೆ ಮಾಡುತ್ತದೆ. ರಾಜ್ಯ ಆಸೆಂಬ್ಲಿಯಲ್ಲಿ ಹೆಚ್ಚಿನ ಸ್ಥಾನ ಹೊಂದಿರುವ ಪಕ್ಷದ ಸಹಜವಾಗಿ ಹೆಚ್ಚು ಸದಸ್ಯರನ್ನು ತನ್ನ ಪಕ್ಷದಿಂದ ರಾಜ್ಯಸಭೆಗೆ ಕಳಿಸಬಹುದು. ಮತ ಲೆಕ್ಕಾಚಾರ ಹೇಗಿರುತ್ತೆ?

ಒಟ್ಟು ಮತಗಳು / (ರಾಜ್ಯಸಭಾ ಸ್ಪರ್ಧೆಗಿರುವ ಸ್ಥಾನಗಳು +1) +1

ಉದಾ: ರಾಜ್ಯಸಭಾ ಸ್ಥಾನ ಗೆಲ್ಲಲು ಕರ್ನಾಟಕದ ಅಭ್ಯರ್ಥಿಗೆ (240/4+1) +1 ಅಂದರೆ 45ಮತಗಳು ಬೇಕು.

ನಾಮ ನಿರ್ದೇಶನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 12 ಸದಸ್ಯರನ್ನು ನಾಮನಿರ್ದೇಶಿತರಾಗಿ ರಾಷ್ಟ್ರಪತಿಗಳು ಆಯ್ಕೆ ಮಾಡಬಹುದಾಗಿದೆ. ಉಳಿದ ಸದಸ್ಯರನ್ನು ವಿವಿಧ ರಾಜ್ಯಗಳ ವಿಧಾನಸಭೆ ಮತ್ತು ಪರಿಷತ್ತಿನ ಸದಸ್ಯರು ಆಯ್ಕೆ ಮಾಡುತ್ತಾರೆ. ದೇಶದ ಪ್ರತಿ ನಿಗದಿಗೊಳಿಸಿದ ಸದಸ್ಯರು ರಾಜ್ಯಸಭೆಗೆ ಆಯ್ಕೆ ಆಗಲು ಅವಕಾಶವಿರುತ್ತದೆ. [ರಾಜ್ಯಸಭೆ ಚುನಾವಣಾ ವೇಳಾಪಟ್ಟಿ 2016]

Oneindia Explainer : Rajya sabha Election -How members are elected

ಭಾರತದ ಶಾಸಕಾಂಗ ವ್ಯವಸ್ಥೆಯ ಮೇಲ್ಮನೆ ಎಂದು ಕರೆಯುವ ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 250. ಇದರಲ್ಲಿ 238 ಸದಸ್ಯರು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಿಂದ ಆಯ್ಕೆಯಾದರೆ. 12 ಮಂದಿ ನಾಮನಿರ್ದೇಶಿತ ಸದಸ್ಯರಾಗಿದ್ದು, ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ರಾಷ್ಟ್ರಪತಿ ನೇರವಾಗಿ ಆಯ್ಕೆ ಮಾಡುತ್ತಾರೆ. ಉಳಿದ ಸದಸ್ಯರನ್ನು ರಾಜ್ಯ ವಿಧಾನಸಭೆ ಮತ್ತು ವಿಧಾನಪರಿಷತ್ತುಗಳಿಂದ ಆಯ್ಕೆ ಮಾಡಲಾಗುತ್ತದೆ. [ರಾಜ್ಯಸಭೆ ಚುನಾವಣೆ 2016 : ಅಭ್ಯರ್ಥಿಗಳ ಆಸ್ತಿ ವಿವರಗಳು]

ಸದಸ್ಯರ ಅವಧಿ: ರಾಜ್ಯಸಭೆಗೆ ಆಯ್ಕೆಯಾದ ಸದಸ್ಯರ ಅವಧಿ 6 ವರ್ಷ. ಇದರಲ್ಲಿ ರಾಜ್ಯಸಭೆಯ 1/3ರಷ್ಟು ಸದಸ್ಯರು 2 ವರ್ಷಗಳಿಗೊಮ್ಮೆ ನಿವೃತ್ತಿ ಹೊಂದುತ್ತಾರೆ. 30 ವರ್ಷ ಕನಿಷ್ಠ ವಯೋಮಿತಿ ಇರುವ ಅಭ್ಯರ್ಥಿಗಳು ಸ್ಪರ್ಧಿಸಬಹುದು. [ಕರ್ನಾಟಕದಿಂದ ವೆಂಕಯ್ಯ ಬದಲಿಗೆ ನಿರ್ಮಲಾ]

ಲೋಕಸಭೆಯ ಸಮನಾದ ಅಧಿಕಾರವನ್ನು ರಾಜ್ಯಸಭೆ ಹೊಂದಿದ್ದು, ಕೆಲವು ವಿಷಯಗಳಲ್ಲಿ ಲೋಕಸಭೆಯು ರಾಜ್ಯಸಭೆಯ ನಿರ್ಣಯವನ್ನು ತಿರಸ್ಕರಿಸಬಹುದಾಗಿದೆ. ಕೆಲವು ಪ್ರಮುಖ ವಿಷಯಗಳ ಬಗ್ಗೆ ಜಂಟಿ ಸದನಗಳ ಬೈಠಕ್ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ
[ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ]

ರಾಜ್ಯಸಭೆ ಬಲಾಬಲ :

ಎನ್ ಡಿಎ : 64;
ಜನತಾ ಪರಿವಾರ : 16
ಯುಪಿಎ : 71;
ಇತರೆ ಪಕ್ಷ : 74
ಒಟ್ಟು : 245

ಕರ್ನಾಟಕ ಅಸೆಂಬ್ಲಿ: 224 ಸದಸ್ಯರ ಅಸೆಂಬ್ಲಿಯಲ್ಲಿ 124 ಸ್ಥಾನ ಬಲ ಹೊಂದಿರುವ ಕಾಂಗ್ರೆಸ್ ಗೆ ಇಬ್ಬರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಅವಕಾಶವಿದೆ. ಕಾಂಗ್ರೆಸ್ ಬೆಂಬಲದಿಂದ ಜೆಡಿಎಸ್ (40) ಕೂಡಾ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬಿಜೆಪಿ 46 ಸದಸ್ಯರ ಬಲ ಹೊಂದಿದೆ.[ವೋಟಿಗಾಗಿ ನೋಟು: ಯಾರು, ಏನು ಹೇಳಿದರು?]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Oneindia Explainer : Members to Rajya sabha of Upper House are elected by MLAs. we elect the MLAs and the MLAs elect the Rajya Sabha members. Twelve members are nominated by the President of India having special knowledge in various areas like Arts, Science etc.
Please Wait while comments are loading...