ಚಂದ್ರಯಾನ-2: ಆ ಅಮೋಘ ಕ್ಷಣಕ್ಕೆ ನೀವೂ ಪ್ರತ್ಯಕ್ಷ ಸಾಕ್ಷಿಯಾಗಬಹುದು!
ಶ್ರೀಹರಿಕೋಟ, ಜುಲೈ 18: ತಾಂತ್ರಿಕ ಸಮಸ್ಯೆಯಿಂದ ರದ್ದಾಗಿದ್ದ ಚಂದ್ರಯಾನ-2 ಕ್ಕೆ ಜುಲೈ 22 ರಂದು ಮತ್ತೆ ಮುಹೂರ್ತ ನಿಗದಿಯಾಗಿದ್ದು, ಸೋಮವಾರ ಮಧ್ಯಾಹ್ನ 2:43 ಕ್ಕೆ ಬಾಹುಬಲಿ ನಭಕ್ಕೆ ಚಿಮ್ಮಲಿದೆ.
ಈ ಅಮೋಘ ಕ್ಷಣವನ್ನು ಕಣ್ತುಂಬಿಸಿಕೊಳ್ಳುವ ಅವಕಾಶವನ್ನು ಇಸ್ರೋ ಜನಸಾಮಾನ್ಯರಿಗೂ ನೀಡಿದೆ. ಹೌದು, ನೀವೂ ಬಾಹುಬಲಿ ಉಡ್ಡಯನಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಬಹುದು!
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜುಲೈ 22 ಮಧ್ಯಾಹ್ನ 2:43ಕ್ಕೆ ಚಂದ್ರಯಾನ-2 ಉಡಾವಣೆಯಾಗಲಿದೆ. ಇಲ್ಲಿನ ಗ್ಯಾಲರಿಯಲ್ಲಿ 5000 ಮಂದಿ ಕುಳಿತುಕೊಂಡು ವೀಕ್ಷಿಸಬಹುದಾದ ಸಾಮರ್ಥ್ಯವಿದೆ. ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಂಡವರಿಗೆ ಇಲ್ಲಿ ಕುಳಿತು ನೇರವಾಗಿ ಉಡಾವಣೆಯ ಪ್ರಕ್ರಿಯೆಯನ್ನು ವೀಕ್ಷಿಸಲು ಅವಕಾಶ ನೀಡಲಾಗುತ್ತದೆ. ಇಷ್ಟು ಕಾಲ ಕೇವಲ ಸೀಮಿತ ಗಣ್ಯರಿಗಷ್ಟೇ ಈ ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರು ಜನಸಾಮಾನ್ಯರಿಗೂ ಈ ಅವಕಾಶ ಕಲ್ಪಿಸಲಾಗಿದೆ.

ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಸಿಕೊಳ್ಳಲು ಬಯಸುವವರು ಈ ಲಿಂಕ್(https://www.shar.gov.in/VSCREGISTRATION/index.jsp) ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಆಸಕ್ತರು ಜುಲೈ 19 ರಂದು ಸಂಜೆ 6 ಗಂಟೆಯ ಒಳಗೆ ತಮ್ಮ ಹೆಸರನ್ನು ನೋಂದಾಯಿಸಲು ಕೋರಲಾಗಿದೆ.
ಇದುವರೆಗೂ ಯಾವ ದೇಶವೂ ಹೋಗಿರದ ಚಂದ್ರನ ಮೇಲ್ಮೈ ಗೆ ತೆರಳಿ ಅಧ್ಯಯನ ನಡೆಸುವ ಚಂದ್ರಯಾನ-2 ಜುಲೈ 15 ರಂದು ಆಗಸಕ್ಕೆ ಚಿಮ್ಮಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಾದ ತಾಂತ್ರಿಕ ಅಡಚಣೆಯಿಂದ ಉಡಾವಣೆಯನ್ನು ಇಸ್ರೋ ರದ್ದುಗೊಳಿಸಿತ್ತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications