ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಸಿಕೆ ಪಡೆಯಲು ಇನ್ನು ಆನ್‌ಲೈನ್ ನೋಂದಣಿ ಕಡ್ಡಾಯವಲ್ಲ

|
Google Oneindia Kannada News

ನವದೆಹಲಿ, ಜೂನ್ 15: ಕೊರೊನಾ ಲಸಿಕೆ ಪಡೆದುಕೊಳ್ಳಲು ಆನ್‌ಲೈನ್‌ನಲ್ಲಿ ಪೂರ್ವ ನೋಂದಣಿ ಅಥವಾ ಬುಕ್ಕಿಂಗ್ ಮಾಡಿಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಘೋಷಣೆ ಮಾಡಿದೆ.

ಲಸಿಕೆಗೆ ನೋಂದಣಿ ಮಾಡಿಕೊಳ್ಳುವಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಸಮಸ್ಯೆಗಳು ಕಂಡುಬಂದ ಬೆನ್ನಲ್ಲೇ ಈ ಸ್ಪಷ್ಟೀಕರಣ ನೀಡಿದೆ. 18 ವರ್ಷ ಮೇಲ್ಪಟ್ಟವರು ತಮ್ಮ ಸಮೀಪದ ಲಸಿಕಾ ಕೇಂದ್ರಕ್ಕೆ ನೇರವಾಗಿ ಹೋಗಿ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಆ ದಿನವೇ ಲಸಿಕೆ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.

ಎಲ್ಲಾ ವಯಸ್ಕರಿಗೂ ಲಸಿಕೆ ನೀಡಿದ ದೇಶದ ಮೊದಲ ಹಳ್ಳಿ ಇದು...ಎಲ್ಲಾ ವಯಸ್ಕರಿಗೂ ಲಸಿಕೆ ನೀಡಿದ ದೇಶದ ಮೊದಲ ಹಳ್ಳಿ ಇದು...

ಲಸಿಕೆ ಪಡೆಯಲು ಕೋವಿನ್ ಆ್ಯಪ್ ಮೂಲಕ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ)ದಲ್ಲಿ ನೋಂದಣಿ ಮಾಡಿಕೊಳ್ಳುವುದು ನೋಂದಣಿಯ ಹಲವು ವಿಧಗಳಲ್ಲಿ ಒಂದಾಗಿದೆಯಷ್ಟೆ ಎಂದು ಕೇಂದ್ರ ವಿವರಣೆ ನೀಡಿದೆ.

Online Registration Not Mandatory To Get Covid Vaccine

ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮೀಣ ಪ್ರದೇಶಗಳಲ್ಲಿ, ಕೊಳೆಗೇರಿಗಳಲ್ಲಿ ವಾಸಿಸುತ್ತಿರುವವರಿಗೆ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವಲ್ಲಿ ನೆರವಾಗುತ್ತಿದ್ದಾರೆ. ಸಮೀಪದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆದುಕೊಳ್ಳುವಂತೆ ಮನವೊಲಿಸುತ್ತಿದ್ದಾರೆ. 1075 ಸಹಾಯವಾಣಿ ಮೂಲಕವೂ ನೋಂದಣಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕೇಂದ್ರ ತಿಳಿಸಿದೆ.

ಜೂನ್ 13ರಂದು ಕೋವಿನ್‌ನಲ್ಲಿ ನೋಂದಾಯಿಸಲಾದ 28.36 ಕೋಟಿ ಫಲಾನುಭವಿಗಳಲ್ಲಿ 16.45 ಕೋಟಿ (58%) ಫಲಾನುಭವಿಗಳನ್ನು ಸ್ಥಳದಲ್ಲೇ ನೋಂದಾಯಿಸಲಾಗಿದೆ ಎಂದು ತಿಳಿಸಿದೆ.

ಲಸಿಕಾ ಕೇಂದ್ರಗಳನ್ನು ಗ್ರಾಮೀಣ ಹಾಗೂ ನಗರ ಭಾಗಗಳೆಂದು ವರ್ಗೀಕರಣ ಮಾಡಲಾಗಿದ್ದು, ಒಟ್ಟು 69,995 ಲಸಿಕಾ ಕೇಂದ್ರಗಳಲ್ಲಿ 49,883 (71%) ಲಸಿಕಾ ಕೇಂದ್ರಗಳು ಗ್ರಾಮೀಣ ಪ್ರದೇಶಗಳಲ್ಲಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

English summary
Central government on Tuesday announced that pre-registration or prior booking of appointment is not mandatory to avail of the COVID-19 vaccines,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X