ಭಾರತದಲ್ಲಿ ಕೇವಲ ಶೇ.49ರಷ್ಟು ಕೊರೊನಾ ಯೋಧರಿಗೆ ಲಸಿಕೆ

ನವದೆಹಲಿ, ಮೇ 21: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗ ಕಳೆದುಕೊಳ್ಳುತ್ತಿದೆ. ಮಾರ್ಚ್ ಏಪ್ರಿಲ್ ವೇಳೆಯಲ್ಲಿ ದಾಖಲೆ ಬರೆದ ಲಸಿಕೆ ವಿತರಣೆಯು ಮೇ ತಿಂಗಳಿನಲ್ಲಿ ಪಾತಾಳಕ್ಕೆ ಕುಸಿದಂತೆ ಕಾಣುತ್ತಿದೆ. ದೇಶದಲ್ಲಿ 3 ಕೋಟಿ ಲಸಿಕೆ ವಿತರಣೆ ಗುರಿಯ ಪೈಕಿ ಕೇವಲ ಶೇ.49ರಷ್ಟು ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗಿದೆ.

ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಆರೋಗ್ಯ ವಲಯದ ಸಿಬ್ಬಂದಿ ಮತ್ತು ಮೊದಲ ಶ್ರೇಣಿ ಕಾರ್ಮಿಕರಿಗೆ ಕೊರೊನಾವೈರಸ್ ಲಸಿಕೆ ವಿತರಣೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಭಾರತದಲ್ಲಿ ಈವರೆಗೂ 97,23,296 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,80,206 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,47,84,918 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,84,445 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

India: Only 49 Percent Health And Frontline Workers Vaccinated Till May 21st In 3 Crore Target

125 ದಿನಗಳಲ್ಲಿ 19 ಕೋಟಿ ಫಲಾನುಭವಿಗಳಿಗೆ ಲಸಿಕೆ:

ದೇಶದಲ್ಲಿ ಕೊರನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 125 ದಿನಗಳೇ ಕಳೆದಿವೆ. ಈವರೆಗೂ 19,18,10,604 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರ ರಾತ್ರಿ 8 ಗಂಟೆ ವೇಳೆಗೆ 14,56,088 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 12,73,785 ಜನರಿಗೆ ಮೊದಲ ಡೋಸ್ ಹಾಗೂ 1,82,303 ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+