ಕಾಶ್ಮೀರ ಕಗ್ಗಂಟನ್ನು ಮೋದಿ ಕೈಗೆ ಕೊಟ್ಟರಾ ಮುಫ್ತಿ?
ಶ್ರೀನಗರ, ಮೇ 6: ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿಯವರೇ ಏನಾದರೂ ಕ್ರಮ ಕೈಗೊಳ್ಳಬೇಕೆಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ತಿಳಿಸಿದ್ದಾರೆ.
ಕಾಶ್ಮೀರದಲ್ಲಿ ಉಲ್ಬಣಿಸುತ್ತಿರುವ ಪ್ರಕ್ಷುಬ್ದ ಪರಿಸ್ಥಿತಿ ಹಾಗೂ ಅಲ್ಲಿನ ನಾಗರಿಕರೇ ಸೇನೆಯ ಮೇಲೆ ತಿರುಗಿಬಿದ್ದ ಉದಾಹರಣೆಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರದಲ್ಲಿರುವ ಸರ್ಕಾರವನ್ನು ಬರಖಾಸ್ತು ಮಾಡಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲು ಉದ್ದೇಶಿಸಿದೆ ಎಂಬ ಗಾಳಿ ಸುದ್ದಿ ಹರಡಿದೆ. ಈ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಮುಫ್ತಿ ಹೀಗೆ ಉತ್ತರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಭಾರತ- ಪಾಕಿಸ್ತಾನ ನಡುವಿನ ಸಂಬಂಧವನ್ನು ಸುಧಾರಿಸಲು ಶ್ರಮಿಸಿದ್ದಾರೆ. ಎರಡು ವರ್ಷಗಳ ಹಿಂದೆ ಕ್ರಿಸ್ಮಸ್ ವೇಳೆ ಏಕಾಏಕಿ ಪಾಕಿಸ್ತಾನಕ್ಕೆ ತೆರಳಿದ್ದೇ ಅದಕ್ಕೆ ಸಾಕ್ಷಿ. ಆದರೆ, ಪ್ರಧಾನಿ ಮೋದಿಯವರ ಈ ಪ್ರಯತ್ನಕ್ಕೆ ಪಾಕಿಸ್ತಾನದಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ವಿಷಾದಿಸಿದರು.












Click it and Unblock the Notifications