ಜಾಸ್ತಿ ಮಕ್ಕಳನ್ನು ಮಾಡಿಕೊಂಡರೆ ಮಾತ್ರ ಆಂಧ್ರದಲ್ಲಿ ಈ ಸೌಲಭ್ಯ: ಸಿಎಂ ಚಂದ್ರಬಾಬು ನಾಯ್ಡು
ಉತ್ತರ ಭಾರತದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಇಳಿಕೆಯಾಗುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಉತ್ತರ ಭಾರತದಲ್ಲಿ ಜನಸಂಖ್ಯಾ ನಿಯಂತ್ರಣ ಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡದೆ ಇರುವುದು ಸಹ ಉತ್ತರ ಭಾರತದಲ್ಲಿ ಜನಸಂಖ್ಯೆ ನಿಯಂತ್ರಣ ಆಗದೆ ಇರುವುದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ದಕ್ಷಿಣ ಭಾರತದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿಕೊಂಡು ಬರಲಾಗಿದೆ. ಈ ಕಾರಣಕ್ಕೆ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ನಿಯಂತ್ರಣವಾಗಿದೆ. ಆದರೆ, ಈ ರೀತಿ ಇರುವಾಗಲೇ ಜನಸಂಖ್ಯೆ ಕಡಿಮೆ ಆಗಿರುವುದೇ ದಕ್ಷಿಣ ಭಾರತಕ್ಕೆ ಸವಾಲಾಗಿದೆ. ಇದೀಗ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೆಚ್ಚು ಮಕ್ಕಳನ್ನು ಮಾಡಿಕೊಂಡರೆ ಮಾತ್ರ ವಿಶೇಷ ಸೌಲಭ್ಯ ಅಂತ ಹೇಳಿದ್ದಾರೆ. ಚಂದ್ರಬಾಬು ನಾಯ್ಡು ಅವರು ಯಾಕೆ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಿ ಅಂತ ಹೇಳುತ್ತಿದ್ದಾರೆ ಅನ್ನೋದನ್ನ ನೋಡೋಣ...
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಕ್ಕಳನ್ನು ಮಾಡಿಕೊಳ್ಳುವ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ಇನ್ಮುಂದೆ ಇಬ್ಬರಿಗಿಂತ ಹೆಚ್ಚು ಮಕ್ಕಳಿದ್ದರಷ್ಟೇ ಆಂಧ್ರಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕೆ ಅವಕಾಶ ನೀಡುವುದಾಗಿ ಅವರು ಹೇಳಿದ್ದಾರೆ. ಇದು ದೇಶದಾದ್ಯಂತ ಭಾರೀ ಸಂಚನಕ್ಕೆ ಕಾರಣವಾಗಿದೆ. ಚಂದ್ರಬಾಬು ನಾಯ್ಡು ಅವರು ಈ ಹಿಂದೆಯೂ ಜನಸಂಖ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟಿದ್ದರು.

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆ ಹೆಚ್ಚಳದ ಬಗ್ಗೆ ಭಾರೀ ಚರ್ಚೆ ನಡೆದಿದೆ. ಅದಕ್ಕೆ ಮುಖ್ಯ ಕಾರಣ ಮುಂದಿನ ದಿನಗಳಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ವಿಭಜನೆಯಾಗುವುದು. ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ವಿಂಗಡಣೆ ಆಗಲಿದೆ. ಈ ರೀತಿ ಆದರೆ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚು ಲೋಕಸಭಾ ಕ್ಷೇತ್ರಗಳು ಸಿಗಲಿದ್ದು. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಡಿಮೆ ಲೋಕಸಭಾ ಕ್ಷೇತ್ರಗಳು ಸಿಗಲಿವೆ. ಇದರಿಂದ ದಕ್ಷಿಣ ಭಾರತದ ಪ್ರಾತಿನಿಧ್ಯ ಹಾಗೂ ಪ್ರಮುಖ್ಯತೆ ಇಳಿಕೆಯಾಗುವ ಆತಂಕ ಹೆಚ್ಚಾಗಿದೆ. ಈ ಎಲ್ಲಾ ಕಾರಣಗಳಿಗೆ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಹೆಚ್ಚಳವಾಗಬೇಕು ಅಂತ ಕೆಲವು ರಾಜಕಾರಣಿಗಳು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ರೀತಿ ಅಭಿಪ್ರಾಯ ವ್ಯಕ್ತಪಡಿಸುತ್ತಿರುವವರಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ಸಹ ಸೇರಿದ್ದಾರೆ.
ನಿಮ್ಮ ಹಿರಿಯರೂ ಈ ರೀತಿ ಯೋಚಿಸಿದ್ದರೆ: ಈ ಹಿಂದಿನ ತಲೆಮಾರಿನವರು ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳುತ್ತಿದ್ದರು. ಈಗ ಜನ ಒಂದು ಮಗು ಸಾಕು ಎನ್ನುವ ಅಭಿಪ್ರಾಯಕ್ಕೆ ಬರುತ್ತಿದ್ದಾರೆ. ನೀವು ಒಂದೇ ಮಗುವನ್ನು ಮಾಡಿಕೊಳ್ಳುತ್ತಿದ್ದೀರಿ. ನಿಮ್ಮ ಹಿಂದಿನ ತಲೆಮಾರು (ಪೋಷಕರು)ಸಹ ಇದೇ ರೀತಿ ಯೋಚನೆ ಮಾಡಿದ್ದರೆ. ನೀವು ಇಂದು ಈ ಜಗತ್ತನ್ನೇ ನೋಡುತ್ತಿರಲಿಲ್ಲ. ಒಂದು ಮಗುವನ್ನು ಮಾತ್ರ ಮಾಡಿಕೊಳ್ಳದೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುವ ಬಗ್ಗೆ ಯೋಚನೆ ಮಾಡಿ ಅಂತ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ.

ಮುಂದೆ 2 ಮಕ್ಕಳಿಗಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸುವುದಕ್ಕೆ ಸಾಧ್ಯ. ಅಲ್ಲದೆ ನೀವು ಸರಪಂಚ್, ಪುರಸಭೆ ಕೌನ್ಸಿಲರ್ ಹಾಗೂ ಪಾಲಿಕೆ ಮೇಯರ್ ಆಗಬೇಕೆಂದರೆ ಇಬ್ಬರಿಗಿಂತ ಹೆಚ್ಚು ಮಕ್ಕಳು ಇರಬೇಕು ಅಂತ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ.












Click it and Unblock the Notifications