ಯೋಧನ ಹಠಾತ್ ಗುಂಡಿನ ದಾಳಿಗೆ ನಾಲ್ವರು ಬಲಿ
ಪಾಟ್ನಾ, ಜನವರಿ 12: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಯೋಧನೊಬ್ಬ ಔರಂಗಾಬಾದ್ ನಲ್ಲಿ ತನ್ನ ಸಹೋದ್ಯೋಗಿಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಯೋಧರು ಮೃತಪಟ್ಟಿದ್ದಾರೆ. ಶೂಟೌಟ್ ನ ಹಿಂದಿನ ಕಾರಣ ತಿಳಿದುಬಂದಿಲ್ಲ.
ಮೂಲಗಳ ಪ್ರಕಾರ, ಇಬ್ಬರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಇದೇ ದಿನ ಬೆಳಗ್ಗೆಯಷ್ಟೇ, ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್ ಪಿಎಫ್ ಯೋಧನೊಬ್ಬನ ರೈಫಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದಾಗಿ ವರದಿಯಾಗಿತ್ತು. ಅದರ ಬೆನ್ನಲ್ಲೇ ಔರಂಗಾಬಾದ್ ನಲ್ಲಿ ಈ ಘಟನೆ ನಡೆದಿರುವುದು ಆತಂಕಕ್ಕೀಡು ಮಾಡಿದೆ.











Click it and Unblock the Notifications