Operation Mahadev: ಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರ ಎನ್‌ಕೌಂಟರ್ ಮಾಡಿದ ಭಾರತೀಯ ಸೇನೆ
ಶ್ರೀನಗರ, ಜುಲೈ 28: ಆಪರೇಷನ್ ಮಹಾದೇವ್ ಅಡಿಯಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿ ಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಮ್ಮುಕಾಶ್ಮೀರದ ಶ್ರೀನಗರದಲ್ಲಿ ಸೋಮವಾರ ಭಾರತೀಯ ಸೇನಾ ಸಿಬ್ಬಂದಿ ಮತ್ತು ಶಂಕಿತ ಪಹಲ್ಗಾಮ್ ಭಯೋತ್ಪಾದಕರ ನಡುವಿನ ಬೃಹತ್ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ತೀವ್ರವಾದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಸಂದೇಶದಲ್ಲಿ ತಿಳಿಸಿದೆ. ದಾಳಿಯ ಮಾಸ್ಟರ್ಮೈಂಡ್ ಹಾಶಿಮ್ ಮೂಸಾ ಸೇರಿ ಮೂವರನ್ನು ಹತ್ಯೆಗೈಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಸದೆಬಡಿಯುತ್ತಿದೆ.

ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ನಂಬಲಾದ ಮೂವರು ವಿದೇಶಿ ಭಯೋತ್ಪಾದಕರು ಸೋಮವಾರ ಶ್ರೀನಗರದ ಹೊರವಲಯದಲ್ಲಿರುವ ದಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿಯ ಲಿಡ್ವಾಸ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಸದೆಬಡಿಯುತ್ತಿದೆ. ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಕೊಂದ ಮೂವರು ಭಯೋತ್ಪಾದಕರನ್ನು ಭಾರತೀಯ ಪಡೆಗಳು ಕೊಂದಿವೆ.
ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಕೊಂದ ಮೂವರು ಭಯೋತ್ಪಾದಕರನ್ನು ಭಾರತೀಯ ಪಡೆಗಳು ಕೊಂದಿವೆ. ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಹತ್ಯೆಗೀಡಾದ ಭಯೋತ್ಪಾದಕರು ವಿದೇಶಿ ಪ್ರಜೆಗಳಾಗಿದ್ದು, ಬಹುಶಃ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಗೆ ಸೇರಿದವರಾಗಿದ್ದಾರೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡರು. ಭಾರತ ಆಪರೇಷನ್ ಸಿಂಧೂರ್ ಎಂಬ ಪ್ರತಿದಾಳಿ ನಡೆಸಿತು. ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಿಖರವಾದ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಭಾರತದ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದನಾ ದಾಳಿಗಳಲ್ಲಿ ಒಂದಾದ ಕಾಶ್ಮೀರದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮೂಸಾನನ್ನು ಭಾರತೀಯ ಸೇನೆಯ ವಿಶೇಷ ಪಡೆಗಳು ಇಂದು ಎನ್‌ಕೌಂಟರ್ ಮಾಡಿವೆ.
ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಹತ್ಯೆಗೀಡಾದ ಉಗ್ರರು ಪಾಕಿಸ್ತಾನಿಗಳು ಮತ್ತು ಲಷ್ಕರ್-ಎ-ತೈಬಾ ಗೆ ಸೇರಿದವರು ಎಂದು ಗುರುತಿಸಲಾಗಿದೆ ಎಂದು ಶ್ರೀನಗರದ ಎಸ್‌ಎಸ್‌ಪಿ ಜಿವಿ ಸುಂದೀಪ್ ಚಕ್ರವರ್ತಿ ಅವರು ಖಚಿತಪಡಿಸಿದ್ದಾರೆ. ಇನ್ನೂ ಈ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಆಸಿಫ್ ಫೌಜಿ, ಸುಲೇಮಾನ್ ಶಾ ಹಾಗೂ ಅಬು ತಲ್ಹಾ ಎನ್ನುವ ಉಗ್ರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications