Operation Sindoor: ಉಗ್ರರ ಸಂಹಾರ.. ಭಾರತದ ತಂಟೆಗೆ ಬಂದ ಪಾಕ್‌ಗೆ ತಕ್ಕ ಉತ್ತರ ಎಂದ ಅಮಿತ್ ಶಾ
ನವದೆಹಲಿ, ಮೇ 07: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಇದೀಗ ಭಾರತ ಪಾಕಿಸ್ತಾನಕ್ಕೆ ತಕ್ಕ ಉತ್ತರವನ್ನ ನೀಡಿದೆ. 26 ಭಾರತಿಯರನ್ನ ಕೊಂದ ಪಾಕ್ ವಿರುದ್ಧ ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ಮಾಡಿದೆ. ಪಾಕಿಸ್ತಾನದ 9 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 20 ಕ್ಕೂ ಹೆಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಮೇಲಿನ ದಾಳಿಯ ಕುರಿತು, ಭಾರತೀಯ ಸೇನೆಯು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ''ಜೈ ಹಿಂದ್, ನ್ಯಾಯ ಸಿಕ್ಕಿದೆ (Justice is Served. Jai Hind!)'' ಎಂದು ಉಲ್ಲೇಖಿಸಿದೆ. ಈ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಮೊದಲು, ''ಸೈನ್ಯವು ದಾಳಿ ಮಾಡಲು ಸಿದ್ಧವಾಗಿದೆ, ಗೆಲ್ಲಲು ತರಬೇತಿ ಪಡೆದಿದೆ'' ಎಂದು ಪೋಸ್ಟ್ ಮಾಡಿತ್ತು. ಇದೀಗ ಭಾರತದ ತಂಟೆಗೆ ಬಂದ ಪಾಕಿಗಳಿಗೆ ಭಾರತೀಯ ಸೇನೆ ತಿರುಗೇಟು ನೀಡಿದೆ.

ಪಾಕಿಸ್ತಾನದ ಮೇಲಿನ ದಾಳಿ ಕುರಿತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಪ್ರತಿಕ್ರಿಯಿಸಿ, ನಮ್ಮ ಭಾರತೀಯ ಸೇನೆ ಬಗ್ಗೆ ನಾವು ಹೆಮ್ಮೆ ಪಡಬೇಕು. ಪಹಲ್ಗಾಮ್ ದಾಳಿಗೆ ತಕ್ಕ ಉತ್ತರ ಕೊಟ್ಟಿದ್ದೇವೆ ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಭಾರತ ನೀಡಿದ ಪ್ರತಿಕ್ರಿಯೆಯಾಗಿದೆ, ಭಾರತ ಮತ್ತು ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರ ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಅದರ ಮೂಲದಿಂದಲೇ ನಿರ್ಮೂಲನೆ ಮಾಡಲು ಭಾರತ ದೃಢವಾಗಿ ಬದ್ಧವಾಗಿದೆ. ದೇಶದ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆಪಡುತ್ತೇನೆ ಮತ್ತು ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಭಾರತ ಬದ್ಧವಾಗಿದೆ ಎಂದು ಅಮಿತ್ ಶಾ ಅವರು ಹೇಳಿದರು.












Click it and Unblock the Notifications