ಮಸೀದಿಗಳನ್ನು ಗುರಿಯಾಗಿಸಿ ಭಾರತ ಸೇನೆಯಿಂದ ದಾಳಿ: ಜಗತ್ತಿನ ಮುಂದೆ ಸುಳ್ಳು ಕತೆ ಕಟ್ಟುತ್ತಿರುವ ಪಾಕಿಸ್ತಾನ
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಮಧ್ಯರಾತ್ರಿ ನಡೆದ ದಾಳಿಯಲ್ಲಿ ಎಂಟು ಜನರು ಮೃತಪಟ್ಟಿದ್ದು, 36 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ತಿಳಿಸಿದೆ. ಈ ದಾಳಿಯಲ್ಲಿ ಎರಡು ಮಸೀದಿಗಳು ಸೇರಿವೆ ಎಂದು ಪಾಕಿಸ್ತಾನದ ಮಿಲಿಟರಿ ಸುಳ್ಳು ಮಾಹಿತಿ ನೀಡಿದೆ.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪಾಕಿಸ್ತಾನದ ಮಿಲಿಟರಿ, 'ಭಾರತ ದಾಳಿ ಮಾಡಿದ ಎಲ್ಲಾ ಸ್ಥಳಗಳು ನಾಗರಿಕ ಸ್ಥಳಗಳಾಗಿವೆ. ಈ ದಾಳಿಯಲ್ಲಿ ಎರಡು ಮಸೀದಿಗಳೂ ಸೇರಿವೆ' ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ತಿಳಿಸಿದ್ದಾರೆ.

ಭಯೋತ್ಪಾದಕರ ಶಿಬಿರಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ ಎಂದು ಭಾರತ ಹೇಳಿದೆ. ಜಗತ್ತಿಗೆ ಭಾರತವು ಸುಳ್ಳು ಮಾಹಿತಿಯನ್ನು ನೀಡುತ್ತಿದೆ ಎಂದು ಆಸಿಫ್ ಆರೋಪಿಸಿದ್ದಾರೆ.
ಭಾರತ ಸೇನೆಗೆ ಸೇರಿದ ಮೂರು ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಹೇಳಿಕೊಂಡಿದ್ದಾರೆ. ಭಾರತದ ಆಕ್ರಮಣಕ್ಕೆ ಪಾಕಿಸ್ತಾನ ಸೂಕ್ತವಾಗಿ ಪ್ರತ್ಯುತ್ತರ ನೀಡಿದೆ ಎಂದು ತರಾರ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.
ಭಾರತ ನಡೆಸಿದ ಕ್ಷಿಪಣಿ ದಾಳಿಯಲ್ಲಿ 8 ನಾಗರಿಕರು ಸಾವನ್ನಪ್ಪಿದ್ದು, 36 ಜನರು ಗಾಯಗೊಂಡಿದ್ದಾರೆ ಎಂದು ಪಾಕ್ ತಿಳಿಸಿದೆ.
ಕಳೆದ ತಿಂಗಳು ಕಾಶ್ಮೀರದ ಪೆಹಲ್‌ಗಾಮ್‌ನಲ್ಲಿ ಭಯೋತ್ಪಾದಕರು ಭಾರತೀಯ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದಾರೆ, ಅಮಾನುಷ ದಾಳಿಯಲ್ಲಿ 25 ನಾಗರಿಕರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿಕಾರವಾಗಿ ಭಾರತ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ದಾಳಿ ನಡೆಸಿದೆ.
ಭಾರತ ದಾಳಿ ನಡೆಸಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಭಾರತ ದಾಳಿ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪಾಕಿಸ್ತಾನ ಪ್ರಧಾನಿ ಶಹಬಾಜ್ ಶರೀಫ್, 'ಭಾರತ ನಡೆಸಿರುವ ಈ ಯುದ್ಧ ಕೃತ್ಯಕ್ಕೆ ಬಲವಾಗಿ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಎಲ್ಲ ಹಕ್ಕಿದೆ. ನಾವು ಭಾರತಕ್ಕೆ ತಕ್ಕ ಉತ್ತರವನ್ನು ನೀಡಲಿದ್ದೇವೆ' ಎಂದು ಹೇಳಿದ್ದಾರೆ.
'ಇಡೀ ರಾಷ್ಟ್ರವು ಪಾಕಿಸ್ತಾನದ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ನಮ್ಮ ರಾಷ್ಟ್ರದ ಚೈತನ್ಯವು ಪ್ರಬಲವಾಗಿದೆ' ಎಂದು ತಿಳಿಸಿದ್ದಾರೆ. ನಾವು ಮತ್ತು ನಮ್ಮ ಪಡೆಗಳು ಶತ್ರು ರಾಷ್ಟ್ರವನ್ನು ಹೇಗೆ ಎದುರಿಸಬೇಕೆಂದು ತಿಳಿದಿದ್ದೇವೆ ಎಂದು ಅವರು ಹೇಳಿದ್ದಾರೆ.












Click it and Unblock the Notifications