ಚುನಾವಣಾ ಸಮೀಕ್ಷೆ; ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ!

ಜೈಪುರ, ಸೆಪ್ಟೆಂಬರ್ 05; ಈ ವರ್ಷದ ಅಂತ್ಯದೊಳಗೆ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ರಾಜಸ್ಥಾನ ಸಹ ಒಂದು. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ, ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿದ್ದಾರೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.

ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ರಾಜಸ್ಥಾನ ವಿಧಾನಸಭೆ (200 ಕ್ಷೇತ್ರಗಳು) ಚುನಾವಣೆ ಬಗ್ಗೆ SmallBoxIndia ಚುನಾವಣಾ ಪೂರ್ವ ಸಮೀಕ್ಷೆಯನ್ನು ನಡೆಸಿದೆ. ಜುಲೈ 22 ರಿಂದ ಆಗಸ್ಟ್ 24ರ ತನಕ 23,000 ಮಾದರಿಗಳ ಮೂಲಕ ಈ ಸಮೀಕ್ಷೆ ನಡೆಸಲಾಗಿದೆ ಎಂದು ಹೇಳಿದೆ.

Opinion Poll Congress May Get 108 Seats Rajasthan Assembly Elections 2023

SmallBoxIndia ಚುನಾವಣಾ ಪೂರ್ವ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಿದೆ. ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ. ವರದಿಯ ಪ್ರಕಾರ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷ 102-108 ಸೀಟುಗಳಲ್ಲಿ ಗೆಲುವು ಸಾಧಿಸಲಿದೆ.

ಸಮೀಕ್ಷೆಯ ವರದಿ; SmallBoxIndia ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಈಗ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆದರೆ ಕಾಂಗ್ರೆಸ್‌ 102-108, ಬಿಜೆಪಿ 78-84 ಮತ್ತು ಇತರರು 6-8 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ.

ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿದೆ. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಯೂ ಸಹ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರ ಪಡೆಯಲಿದೆ ಎಂದು ಅಂದಾಜಿಸಿದೆ.

ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ರಾಜಸ್ಥಾನದ ಪ್ರಭಾವಿ ಕಾಂಗ್ರೆಸ್ ನಾಯಕರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಸಹ ಇಬ್ಬರು ನಾಯಕರ ನಡುವೆ ಹೊಂದಾಣಿಕೆಯ ಕೊರತೆ ಇದೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಶಾಸಕರು ಸಹ ಎರಡು ಬಣಗಳಾಗಿ ಹಂಚಿ ಹೋಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲೆಟ್ ನಡುವೆ ಒಮ್ಮತ ಮೂಡಿಸಲು ಹಲವಾರು ಬಾರಿ ಸಭೆಗಳನ್ನು ನಡೆಸಿದ್ದಾರೆ. ಎಲ್ಲಾ ಅಸಮಾಧಾನ ಮರೆತು ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ರಾಹುಲ್ ಗಾಂಧಿ, ಕೆ. ಸಿ. ವೇಣುಗೋಪಾಲ್ ಸಹ ಇಬ್ಬರು ನಾಯಕರಿಗೆ ಸೂಚನೆಗಳನ್ನು ನೀಡಿದ್ದಾರೆ.

ರಾಜಸ್ಥಾನ ಚುನಾವಣೆಗೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆ ಎಲ್ಲರದ್ದು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಈ ಕುರಿತು ಹೇಳಿಕೆ ನೀಡಿದ್ದು, "ನಾವು ಯಾವತ್ತೂ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ. ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ. ಮೊದಲು ಭಿನ್ನಾಭಿಪ್ರಾಯವಿತ್ತು. ಈಗ ಎಲ್ಲಾ ನಾಯಕರು ಒಟ್ಟಾಗಿ ಹೋರಾಟ ಮಾಡುತ್ತಾರೆ" ಎಂದು ಹೇಳಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸಚಿನ್ ಪೈಲೆಟ್ ತಮ್ಮ ಸರ್ಕಾರದ ವಿರುದ್ಧ ಬಂಡಾಯ ಎದಿದ್ದರು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದಿದ್ದ ಅವರನ್ನು ಪಕ್ಷ ಉಪಮುಖ್ಯಮಂತ್ರಿ, ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿತ್ತು. ಆಗ ಅವರು ಪಕ್ಷ ತೊರೆಯಬಹುದು ಎಂಬ ಸುದ್ದಿಗಳು ಹಬ್ಬಿತ್ತು.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಸಚಿನ್ ಪೈಲೆಟ್ ಜೊತೆ ಮಾತುಕತೆ ನಡೆಸಿ ಅವರ ಮನವೊಲಿಕೆ ಮಾಡಿದ್ದಾರೆ. ಕಳೆದ ವಾರ ಎಐಸಿಸಿ ಪುನಾರಚನೆ ಸಂದರ್ಭದಲ್ಲಿ ಕೇಂದ್ರ ಕಾಂಗ್ರೆಸ್ ಸಮಿತಿಗೆ ಸಚಿನ್ ಪೈಲೆಟ್ ಸೇರಿಸಿಕೊಳ್ಳಲಾಗಿದೆ.

ರಾಜಸ್ಥಾನ ವಿಧಾನಸಭೆ ಚುನಾವಣೆ 2023ಕ್ಕೆ ಬಿಜೆಪಿ ಎರಡು ಸಮಿತಿಗಳನ್ನು ಈಗಾಗಲೇ ರಚನೆ ಮಾಡಿದೆ. ಚುನಾವಣಾ ನಿರ್ವಹಣಾ ಸಮಿತಿ ಮತ್ತು ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚನೆ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+