Good News: ಹೊಸದಾಗಿ ಮದುವೆಯಾದ ದಂಪತಿಗಳಿಗೆ ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನಕ್ಕೆ ಅವಕಾಶ!

ಮದುವೆಯ ಸೀಸನ್‌ ಬಂದಿರುವುದರಿಂದ ಟಿಟಿಡಿ ನವ ದಂಪತಿಗಳಿಗೆ ವಿಶೇಷ ಅವಕಾಶ ಕಲ್ಪಿಸಿದೆ. ಇತ್ತೀಚೆಗೆ ಮದುವೆಯಾದ ದಂಪತಿಗಳಿಗೆ ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಪಡೆಯುವ ಅವಕಾಶವನ್ನು ನೀಡಲಾಗಿದೆ.

ಟಿಟಿಡಿ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ದೇವಸ್ಥಾನ ಸೇರಿದಂತೆ ದೇವಾಲಯಗಳನ್ನು ನಿರ್ವಹಿಸುವ ಸ್ವತಂತ್ರ ಟ್ರಸ್ಟ್ ಆಗಿದೆ. ಇದು ಹೊಸದಾಗಿ ಮದುವೆಯಾದ ದಂಪತಿಗಳಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಟಿಕೆಟ್‌ಗಳನ್ನು ನೀಡಲಿದೆ. ಈ ಟಿಕೆಟ್‌ಗಳನ್ನು ಪಡೆಯುವ ಮೂಲಕ ದಂಪತಿಗಳು ತಿಮ್ಮಪ್ಪನ ಆಶೀರ್ವಾದ ಪಡೆಯಬಹುದು.

Opportunity for newly married couples to have a special darshan of Tirupati Thimmappa!

ದಂಪತಿಗಳು ತಮ್ಮ ಮದುವೆಯಾದ ತಕ್ಷಣ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುವುದು ಒಂದು ಆಚರಣೆಯಾಗಿದೆ. ಮದುವೆಯು ಜೀವನದ ಹೊಸ ಹಂತದ ಆರಂಭವನ್ನು ಸೂಚಿಸುವುದರಿಂದ, ಹೊಸ ಪ್ರಯಾಣವನ್ನು ಪ್ರಾರಂಭಿಸುವ ಮೊದಲು ವೆಂಕಟೇಶ್ವರನ ಆಶೀರ್ವಾದವನ್ನು ಪಡೆಯುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಹೀಗಾಗಿ ಬಹುತೇಕ ದಂಪತಿಗಳು ಮದುವೆಯಾದ ಬಳಿಕ ತಿರುಮಲ ದೇವಸ್ಥಾನಕ್ಕೆ ತೆರಳುವುದು ವಾಡಿಕೆ. ಹೀಗಾಗಿ ದಂಪತಿಗಳು ತಮ್ಮ ಮದುವೆಯ ಉಡುಪು ಧರಿಸಿ ದೇವರ ದರ್ಶನ ಪಡೆಯುತ್ತಾರೆ.

ಶ್ರೀವಾರಿ ಕಲ್ಯಾಣೋತ್ಸವದ ಭಾಗವಾಗಲು ಭಕ್ತ ದಂಪತಿಗಳು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಇದು ವಿವಾಹಿತ ದಂಪತಿಗಳ ಜೀವನದಲ್ಲಿ ಅದೃಷ್ಟ, ಪ್ರೀತಿ, ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಒಂದು ವಾರದ ಹಿಂದೆ ವಿವಾಹವಾದ ದಂಪತಿಗಳು ತಿರುಮಲದಲ್ಲಿ ಕಲ್ಯಾಣೋತ್ಸವಂ ಸೇವೆಗೆ ಅರ್ಜಿ ಸಲ್ಲಿಸಬಹುದಾಗಿದೆ. ತಿರುಮಲ ತಿರುಪತಿ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ನವವಿವಾಹಿತ ದಂಪತಿಗಳಿಗೆ ದಿನಕ್ಕೆ 20 ಟಿಕೆಟ್‌ಗಳನ್ನು ಕಾಯ್ದಿರಿಸುತ್ತದೆ. ಟಿಕೆಟ್‌ನ ಬೆಲೆ 1000 ರೂಪಾಯಿ. ಟಿಕೆಟ್‌ಗಳು ಮದುವೆ ಸಮಾರಂಭಗಳು ಮತ್ತು ವಿಶೇಷ ದರ್ಶನ ಎರಡಕ್ಕೂ ಮಾನ್ಯವಾಗಿರುತ್ತವೆ.

ಈ ಟಿಕೆಟ್ ಪಡೆಯಲು ಕೆಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಮೊದಲನೆಯದಾಗಿ ನವವಿವಾಹಿತ ದಂಪತಿಗಳು ಸಿಆರ್‌ಒ ಕಚೇರಿಯಲ್ಲಿರುವ ಲಕ್ಕಿ ಡಿಪ್ ಕೌಂಟರ್‌ಗೆ ಹೋಗಬೇಕು. ಅಲ್ಲಿ ವಧು ಮತ್ತು ವರರು ತಮ್ಮ ಮದುವೆಯ ಚಿತ್ರಗಳನ್ನು ಪುರಾವೆಗಾಗಿ ಪ್ರಸ್ತುತಪಡಿಸಬೇಕಾಗುತ್ತದೆ. ಅದಲ್ಲದೆ ಅವರು ದೇವಸ್ಥಾನಕ್ಕೆ ಭೇಟಿ ನೀಡುವ ಒಂದು ವಾರದ ಮೊದಲು ಮಾತ್ರ ಮದುವೆಯಾಗಿರಬೇಕು. ಇವುಗಳೊಂದಿಗೆ ಅವರ ಆಧಾರ್ ಕಾರ್ಡ್ ಅನ್ನು ಸಹ ಗುರುತಿನ ಪುರಾವೆಯಾಗಿ ಸಲ್ಲಿಸಬೇಕಾಗುತ್ತದೆ. ಪ್ರಕ್ರಿಯೆ ಮುಗಿದ ನಂತರ ನವವಿವಾಹಿತರು ನೇರವಾಗಿ ಕಲ್ಯಾಣೋತ್ಸವದ ಟಿಕೆಟ್ ಪಡೆಯಬಹುದು.

Opportunity for newly married couples to have a special darshan of Tirupati Thimmappa!

ತಿರುಪತಿ ಬಾಲಾಜಿ ದೇವಾಲಯವು ಭೂಮಿಯ ಮೇಲಿನ ಅತ್ಯಂತ ಜನಪ್ರಿಯ ದೇವಾಲಯವಾಗಿದ್ದು, ವರ್ಷದ ಯಾವುದೇ ದಿನ ಈ ದೇವಾಲಯಕ್ಕೆ ಭೇಟಿ ನೀಡಬಹುದು. ಲಕ್ಷಾಂತರ ಜನ ನಿತ್ಯ ತಿರುಪತಿಗೆ ಭೇಟಿ ನೀಡುತ್ತಾರೆ. ಇಲ್ಲಿ ಭಕ್ತರು ತಮ್ಮೆಲ್ಲಾ ಇಚ್ಚೆಯನ್ನು ಈಡೇರಿಸುವಂತೆ ಭಗವಂತನಲ್ಲಿ ಬೇಡಿಕೊಳ್ಳುತ್ತಾರೆ. ವಿಜಯನಗರ ಸಾಮ್ರಾಜ್ಯದ ಅಂತ್ಯದ ನಂತರ, ದೇವಾಲಯವು ಜುಲೈ 1656 ರಲ್ಲಿ ಗೋಲ್ಕೊಂಡದ ಕೈಗೆ ಹೋಯಿತು. 19ನೇ ಶತಮಾನದ ಪೂರ್ವಾರ್ಧದಲ್ಲಿ ಬ್ರಿಟೀಷರು ದೇವಾಲಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದರು ಮತ್ತು ದೇವಾಲಯದ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಲಿಲ್ಲ.

1933 ರಲ್ಲಿ ಟಿಟಿಡಿ ಕಾಯಿದೆಯ ಪರಿಣಾಮವಾಗಿ ತಿರುಮಲ ತಿರುಪತಿ ದೇವಸ್ಥಾನಗಳ ರಚನೆಯಾಯಿತು. ಇಲ್ಲಿನ ವೆಂಕಟೇಶ್ವರ ಸ್ವಾಮಿಯ ಮುಖ್ಯ ವಿಗ್ರಹವು ತುಂಬಾ ವಿಶಿಷ್ಟ ಮತ್ತು ಶಕ್ತಿಯುತವಾಗಿದೆ ಎಂದು ಹೇಳಲಾಗುತ್ತದೆ. ಆಕರ್ಷಕ ವಿಗ್ರಹವು ಹಲವಾರು ಪವಾಡದ ಲಕ್ಷಣಗಳನ್ನು ಹೊಂದಿದೆ. ಪ್ರತಿದಿನವೂ, ವಿಗ್ರಹವನ್ನು ಹೂವುಗಳಿಂದ, ಉಡುಪುಗಳಿಂದ ಮತ್ತು ಆಭರಣಗಳಿಂದಭವ್ಯವಾದ ಅಲಂಕರಿಸಲಾಗುತ್ತದೆ. ನಿತ್ಯ ವಿಶೇಷ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಇದರಿಂದಾಗಿ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ಅಧಿಕ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+