INDIA ಮೈತ್ರಿಕೂಟಕ್ಕೆ 10 ಸ್ಥಾನಗಳಲ್ಲಿ ಭರ್ಜರಿ ಜಯ: ಬಿಜೆಪಿಗೆ 2 ಸ್ಥಾನಕ್ಕೆ ತೃಪ್ತಿ
ಕೇಂದ್ರ ಚುನಾವಣೆಯ ಫಲಿತಾಂಶ ಬಂದ ಮೇಲೆ ದೇಶದಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಇಂಡಿ ಮೈತ್ರಿಕೂಟಗಳು ಭರ್ಜರಿ ಸಾಧನೆ ಮಾಡಿವೆ. ದೇಶದಲ್ಲಿ ನಡೆದ ಒಟ್ಟು 13 ಉಪಚುನಾವಣೆಗಳಲ್ಲಿ ಇಂಡಿಯಾ ಮೈತ್ರಿ ಕೂಟ 13ರಲ್ಲಿ 10 ಸ್ಥಾನಗಳನ್ನು ಗೆದ್ದು ಬೀಗಿದೆ. ಇನ್ನು ದಾಖಲೆಯ ಮೂರನೇ ಬಾರಿಗೆ ಅಧಿಕಾರ ಗದ್ದುಗೆ ಏರಿದ ಬಿಜೆಪಿ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.
ಜಲಂಧರ್ ಪಶ್ಚಿಮಕ್ಕೆ ನಡೆದ ಚುನಾವಣೆಯಲ್ಲಿ ಆಪ್ ಪಕ್ಷದ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಎಎಪಿ ಪಕ್ಷದ ಮೋಹಿಂದ್ ಭಾಗತ್ 23 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಎಲ್ಲ ನಾಲ್ಕೂ ಸ್ಥಾನಗಳನ್ನು ಗೆದ್ದು ಬೀಗಿದೆ.

ಸಿಎಂ ಪತ್ನಿಗೆ ಜಯ
ಹಿಮಾಚಲ್ ಪ್ರದೇಶದಲ್ಲಿ ನಡದ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯ ಮಂತ್ರಿಯ ಪತ್ನಿ ಕಮಲೇಶ್ ಠಾಕೂರ್ ಡೆಹ್ರಾ ಕ್ಷೇತ್ರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್ ನಾಲಗರ್‌ದಲ್ಲಿ ಜಯ ದಾಖಲಿಸಿದರೆ, ಬಿಜೆಪಿ ಹಮೀರ್ಪುರ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಚುನಾವಣೆಯಲ್ಲಿ ಪತ್ನಿಯ ಗೆಲುವಿನ ಬಳಿಕ ಮಾತನಡಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖು, ಸರ್ಕಾರ ಬೀಳಿಸುವ ಸಂಚು ಹೂಡಿದವರಿಗೆ ಮತದಾರ ಉತ್ತಮ ಪ್ರತಿಕ್ರಿಯೆ ನೀಡಿದ್ದಾನೆ ಎಂದು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ 2022ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 40 ಸ್ಥಾನಗಳನ್ನು ಗೆದ್ದಿತ್ತು. ಈಗ ಪಕ್ಷ ಮತ್ತಷ್ಟು ಜನರಿಗೆ ಹತ್ತಿರವಾಗಿದೆ ಎಂದಿದ್ದಾರೆ.

ಹಿಮಾಚಲ ಪ್ರದೇಶದ ಜನ ಜಾಗ್ರುತರಾಗಿದ್ದಾರೆ. ಯಾವುದು ಸರಿ ಹಾಗೂ ಯಾವುದು ತಪ್ಪು ಎನ್ನುವುದು ಅವರಿಗೆ ಅರ್ಥವಾಗಿದೆ. ಮೂವರು ಪಕ್ಷೇತರ ಶಾಸಕರು ರಾಜೀನಾಮೆ ನೀಡುವ ಯಾವುದೇ ಕಾರಣವಿರಲಿಲ್ಲ. ಅವರು ಕೇವಲ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬಹುದಿತ್ತು, ಈಗ ಅವರು ತಮ್ಮ ಪಾಠವನ್ನು ಕಲಿತ್ತಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಡಿಎಂಕೆ ಅಭ್ಯರ್ಥಿಗೆ ಜಯ
ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಿಂದ ಡಿಎಂಕೆಯ ಅಣ್ಣಿಯುರ್ ಶಿವ ಅವರು ಸುಮಾರು 60,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಉತ್ತರಾಖಂಡದಲ್ಲಿ ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಗೆದ್ದಿದ್ದರೆ, ಮಧ್ಯಪ್ರದೇಶದ ಅಮರವಾರ್ ಕ್ಷೇತ್ರವನ್ನು ಬಿಜೆಪಿಯ ಕಮಲೇಶ್ ಪ್ರತಾಪ್ ಶಾಹಿ ಗೆದ್ದಿದ್ದಾರೆ. ಬಿಹಾರದ ಪುರ್ನಿಯಾದಲ್ಲಿ ರುಪೌಲಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿ ಶಂಕರ್ ಸಿಂಗ್ ಅವರು ಜೆಡಿಯುನ ಕಲಾಧರ್ ಪ್ರಸಾದ್ ಮಂಡಲ್ ಅವರನ್ನು 8,246 ಮತಗಳ ಅಂತರದಿಂದ ಸೋಲಿಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications