ಮುಂಗಾರು ಬಿರುಸು; ಜುಲೈ 13ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಸೂಚನೆ
ನವದೆಹಲಿ,
ಜುಲೈ 09: ಜೂನ್ ಮೊದಲಲ್ಲಿ ಆರಂಭವಾಗಿ ನಂತರ ಕ್ಷೀಣಿಸಿದ್ದ ಮುಂಗಾರು, ತಿಂಗಳ ಬಿಡುವಿನ ನಂತರ ಗುರುವಾರದಿಂದ ಮತ್ತೆ ಚುರುಕು ಪಡೆದುಕೊಂಡಿದೆ. ಜುಲೈ 12ರವರೆಗೂ ಕೆಲವು ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. id="toptextpromo"> id='are-slot-1' class='oiad oi-axt oiadv'>ಕೇರಳ,
ತಮಿಳುನಾಡು, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ ಎರಡನೇ ವಾರದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಮುಂದೆ ಓದಿ... id='are-slot-2' class='oiad oi-axt oiadv'>
ಕರ್ನಾಟಕ, ಕೇರಳಕ್ಕೆ ಆರೆಂಜ್ ಅಲರ್ಟ್
ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಹಾಗೂ ಕೇರಳದ ಕರಾವಳಿ ಪ್ರದೇಶಗಳಲ್ಲಿ ಜುಲೈ 9ರಿಂದ ಜುಲೈ 12ರವರೆಗೂ ಹೆಚ್ಚಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳ ಕಾಲ ಈ ಪ್ರದೇಶಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಪಡೆಯಲಿವೆ ಎಂದು ಹೇಳಿದೆ. ಹೀಗಾಗಿ ಕೇರಳ, ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈಗಾಗಲೇ ಕೇರಳದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.

ಜುಲೈ 10ರಂದು ತಮಿಳುನಾಡಿನಲ್ಲಿ ಅತಿ ಹೆಚ್ಚಿನ ಮಳೆ
ತಮಿಳುನಾಡು, ಆಂಧ್ರ ಕರಾವಳಿ, ರಾಯಲಸೀಮೆ, ತೆಲಂಗಾಣ ಹಾಗೂ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 10ರಂದು ತಮಿಳುನಾಡಿನಲ್ಲಿ ಅತಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಿದೆ. ಕರ್ನಾಟಕದಲ್ಲಿ ಜುಲೈ 1ರಿಂದ ಜುಲೈ 8ರವರೆಗೂ 258.7 ಎಂಎಂ ಮಳೆ ದಾಖಲಾಗಿರುವುದಾಗಿ ಮಾಹಿತಿ ನೀಡಿದೆ.

ಕರ್ನಾಟಕದ ಮಳೆ ಮಾಹಿತಿ
ರಾಜ್ಯದಲ್ಲಿ ಈಗಾಗಲೇ ಮುಂಗಾರು ಮತ್ತೆ ಚುರುಕಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಚಾಮರಾನಗರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
Recommended Video

ಮುಂದಿನ ಐದು ದಿನಗಳ ಕಾಲ ಮಳೆ
ಮುಂದಿನ ಐದು ದಿನಗಳ ಕಾಲ ಮಧ್ಯ ಪ್ರದೇಶ, ವಿಧರ್ಬಾ, ಛತ್ತೀಸ್‌ಗಡ, ಒಡಿಶಾದಲ್ಲಿ ಭಾರೀ ಮಳೆಯಾಗಲಿದೆ. ಜುಲೈ 8 ಹಾಗೂ 9ರಂದು ವಿದರ್ಭಾ ಹಾಗೂ ಛತ್ತೀಸ್‌ಗಡದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಲಿದೆ ಎಂದು ತಿಳಿಸಿದೆ.
ಜುಲೈ 9ರ ನಂತರ ಜಮ್ಮು, ಕಾಶ್ಮೀರ, ಲಡಾಖ್, ಪಂಜಾಬ್ ನಲ್ಲಿ ಸಾಧಾರಣ ಮಳೆಯಾಗಲಿದೆ. ಜುಲೈ 11 ಹಾಗೂ 12ರಂದು ಹೆಚ್ಚಿನ ಮಳೆಯಾಗುವುದು ಎಂದು ಸೂಚನೆ ನೀಡಿದೆ. ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಜುಲೈ 10ರಂದು ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.












Click it and Unblock the Notifications