ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಮ್ಮ ಯೋಧರು ಸಾಯುತ್ತಿರುವಾಗ ಟಿ-20 ಪಂದ್ಯ ಬೇಕೇ?: ಕೇಂದ್ರದ ವಿರುದ್ಧ ಚಾಟಿ ಬೀಸಿದ ಓವೈಸಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 19: "ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ನಮ್ಮ 9 ಯೋಧರು ಹುತಾತ್ಮರಾಗಿದ್ದಾರೆ, ಇಂಥ ಸಂದರ್ಭದಲ್ಲಿ ನೀವು ಪಾಕಿಸ್ತಾನದೊಂದಿಗೆ ಟಿ-20 ಪಂದ್ಯವನ್ನು ಆಡುತ್ತೀರಾ," ಎಂದು ಅಖಿಲ ಭಾರತ ಮಜ್ಲಿಸ್-ಇ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನೆ ಮಾಡಿದ್ದಾರೆ.

"ನಮ್ಮ ಭಾರತೀಯ ಯೋಧರು ಸತ್ತಿದ್ದಾರೆ. ನೀವು ಟಿ-20 ಪಂದ್ಯವನ್ನು ಆಡುತ್ತೀರಾ? ಪಾಕಿಸ್ತಾನವು ಭಾರತದ ಜನರ ಜೀವದೊಂದಿಗೆ ಕಾಶ್ಮೀರದಲ್ಲಿ ಪ್ರತಿದಿನ 20-20 ಪಂದ್ಯವನ್ನು ಆಡುತ್ತಿದೆ" ಎಂದು ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಐಸಿಸಿ ಟಿ-20 ವಿಶ್ವಕಪ್: ಭಾರತ-ಪಾಕಿಸ್ತಾನದ ನಡುವೆ ಪಂದ್ಯವೇ ಬೇಡ ಎಂದ ಸಚಿವರು!ಐಸಿಸಿ ಟಿ-20 ವಿಶ್ವಕಪ್: ಭಾರತ-ಪಾಕಿಸ್ತಾನದ ನಡುವೆ ಪಂದ್ಯವೇ ಬೇಡ ಎಂದ ಸಚಿವರು!

ಭಾರತವನ್ನು ಉದ್ದೇಶಿಸಿ ಮಾತನಾಡುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎರಡು ವಿಷಯಗಳ ಬಗ್ಗೆ ಮಾತ್ರ ಯಾವುದೇ ಕಾರಣಕ್ಕೂ ಪ್ರಸ್ತಾಪಿಸುವುದಿಲ್ಲ. ದೇಶದಲ್ಲಿನ ತೈಲಬೆಲೆ ಏರಿಕೆ ಹಾಗೂ ಲಡಾಖ್ ಗಡಿಯಲ್ಲಿ ಚೀನಾ ಕುಳಿತುಕೊಂಡಿರುವ ಬಗ್ಗೆ ಪ್ರಧಾನಿ ಎಲ್ಲಿಯೂ ಮಾತನಾಡುವುದಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಯಪಡುತ್ತಾರೆ," ಎಂದು ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.

"ಇಂಧನ ಬೆಲೆ ಏರಿಕೆ ಬಗ್ಗೆ ಮಾತನಾಡಲ್ಲ ಮೋದಿ"

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇಂಧನ ದರಗಳು ದೇಶಾದ್ಯಂತ ಸತತ ನಾಲ್ಕನೇ ದಿನವಾದ ಭಾನುವಾರವೂ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿದೆ. ಇತ್ತೀಚಿನ ಏರಿಕೆಯೊಂದಿಗೆ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 105.84 ರೂಪಾಯಿ ಮತ್ತು ಡೀಸೆಲ್ ಬೆಲೆ 94.57 ರೂಪಾಯಿ ಆಗಿದೆ.

ಕಣಿವೆ ರಾಜ್ಯದಲ್ಲಿ ನಾಗರಿಕರ ಹತ್ಯೆಗೆ ಕೇಂದ್ರದ ವೈಫಲ್ಯ ಕಾರಣ

ಕಣಿವೆ ರಾಜ್ಯದಲ್ಲಿ ನಾಗರಿಕರ ಹತ್ಯೆಗೆ ಕೇಂದ್ರದ ವೈಫಲ್ಯ ಕಾರಣ

ಜಮ್ಮು ಕಾಶ್ಮೀರದಲ್ಲಿ ಬಿಹಾರದ ಬಡ ಕಾರ್ಮಿಕರನ್ನು ಕೊಲ್ಲಲಾಗುತ್ತಿದೆ, ಉದ್ದೇಶಪೂರಿತವಾಗಿ ಹತ್ಯೆಯನ್ನು ಮಾಡಲಾಗುತ್ತಿದೆ. ಗುಪ್ತಚರ ಇಲಾಖೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ?. ನಾಗರಿಕರ ಮೇಲೆ ನಡೆಯುತ್ತಿರುವ ಸರಣಿ ದಾಳಿ ಮತ್ತು ಹತ್ಯೆಯು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯ ಎಂದು ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಕಳೆದ ಎರಡು ದಿನಗಳಲ್ಲಿ ಮೂರು ಕಡೆ ಉಗ್ರರು ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಿದ್ದಾರೆ. ಶನಿವಾರ ಬಿಹಾರ ಮೂಲಕ ಗೋಲ್ ಗಪ್ಪಾ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಮೂಲದ ವಲಸೆ ಕಾರ್ಮಿಕರನ್ನು ಉಗ್ರರು ಕೊಂದು ಹಾಕಿದ್ದಾರೆ. ಭಾನುವಾರ ಬಿಹಾರ ಮೂಲದ ರಾಜಾ ರಿಷಿದೇವ್ ಮತ್ತು ಯೋಗೇಂದ್ರ ರಿಷಿದೇವ್ ಎಂಬ ಇಬ್ಬರು ಕಾರ್ಮಿಕರನ್ನು ಅನಂತನಾಗ್‌ನಲ್ಲಿ ಹತ್ಯೆ ಮಾಡಲಾಗಿತ್ತು.

ಪಾಕಿಸ್ತಾನದ ಜೊತೆಗೆ ಪಂದ್ಯ ಬೇಡ ಎಂದ ಸಚಿವ ಗಿರಿರಾಜ್ ಸಿಂಗ್

ಪಾಕಿಸ್ತಾನದ ಜೊತೆಗೆ ಪಂದ್ಯ ಬೇಡ ಎಂದ ಸಚಿವ ಗಿರಿರಾಜ್ ಸಿಂಗ್

ಐಸಿಸಿ ಪುರುಷರ ಟಿ-20 ವಿಶ್ವಕಪ್ 2021ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ರದ್ದುಗೊಳಿಸಬೇಕು ಎಂದು ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್ ಬೇಡಿಕೆ ಇಟ್ಟಿದ್ದಾರೆ. ಎರಡು ದೇಶಗಳ ನಡುವಿನ ಉದ್ವಿಗ್ನ ಸಂಬಂಧದಿಂದಾಗಿ ಈ ಪಂದ್ಯವನ್ನು ಮರುಪರಿಶೀಲಿಸಬೇಕು ಎಂದು ಕೋರಿದ್ದಾರೆ. ಎರಡು ರಾಷ್ಟ್ರಗಳ ನಡುವಿನ ಮೊದಲ ಪಂದ್ಯಕ್ಕಾಗಿ ಈಗಾಗಲೇ ಅಕ್ಟೋಬರ್ 24ರ ದಿನಾಂಕವನ್ನು ನಿಗದಿಪಡಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ಪಂದ್ಯವನ್ನು ನಡೆಸಬೇಕೇ ಎಂಬ ಪ್ರಶ್ನೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. "ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಉತ್ತಮವಾಗಿಲ್ಲದ ಕಾರಣ ಪಂದ್ಯವನ್ನು ಮರುಪರಿಶೀಲಿಸಬೇಕು ಎಂದು ನಾನು ಭಾವಿಸುತ್ತೇನೆ" ಎಂದಿದ್ದಾರೆ.

ಭಾರತ-ಪಾಕಿಸ್ತಾನ ಪಂದ್ಯದ ಬಗ್ಗೆ ವಿರಾಟ್ ಕೊಹ್ಲಿ ಸ್ಪಷ್ಟನೆ

ಭಾರತ-ಪಾಕಿಸ್ತಾನ ಪಂದ್ಯದ ಬಗ್ಗೆ ವಿರಾಟ್ ಕೊಹ್ಲಿ ಸ್ಪಷ್ಟನೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಸುತ್ತಲಿನ ಪ್ರಚೋದನೆಯನ್ನು ತಗ್ಗಿಸುವ ನಿಟ್ಟಿನಲ್ಲಿ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ. "ಪಾಕಿಸ್ತಾನ ವಿರುದ್ಧದ ನಮ್ಮ ಪಂದ್ಯವನ್ನು ನಾವು ಕ್ರಿಕೆಟ್ ನ ಮತ್ತೊಂದು ಆಟದಂತೆ ನೋಡುತ್ತೇವೆಯೇ ಹೊರತೂ ಅದರ ಸುತ್ತಲೂ ಹೆಚ್ಚು ಪ್ರಚಾರವಿದೆ ಎಂದು ನನಗೆ ತಿಳಿದಿದೆ. ಅದಕ್ಕಿಂತ ಹೆಚ್ಚಾಗಿ ಟಿಕೆಟ್ ಮಾರಾಟ ಮತ್ತು ಬೇಡಿಕೆಯ ಬಗ್ಗೆ ಗೊತ್ತಿದೆ," ಎಂದು ಹೇಳಿದ್ದಾರೆ.

ಕಳೆದ 2019ರಲ್ಲಿ ಇಂಗ್ಲೆಂಡಿನಲ್ಲಿ ನಡೆದ ಒಡಿಐ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಅಂದಿನಿಂದ ಇತ್ತೀಚಿನವರೆಗೂ ಉಭಯ ತಂಡಗಳ ನಡುವೆ ಯಾವುದೇ ಪಂದ್ಯಗಳು ನಡೆದಿಲ್ಲ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚಾದ ಕಾರಣ ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧಗಳನ್ನೂ ಸ್ಥಗಿತಗೊಳಿಸಲಾಗಿತ್ತು.

English summary
"Our Soldiers Have Died. How You Play T20?" Asaduddin Owaisi Slams PM Narendra Modi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X