Breaking: ಜಾರ್ಖಂಡ್‌: 10 ಜನರಿಂದ ಎಂಜಿನಿಯರ್‌ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ, ಅಕ್ಟೋಬರ್‌ 22: 26 ವರ್ಷದ ಎಂಜಿನಿಯರ್‌ ಮೇಲೆ 10 ಜನರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಸಂತ್ರಸ್ತೆಯು ಬೆಂಗಳೂರು ಮೂಲಕ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾಳೆ.

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗುರುವಾರ ಸಂಜೆ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆಯು ತನ್ನ ಸ್ನೇಹಿತನೊಂದಿಗೆ ಇದ್ದಳು. ಹತ್ತು ಜನರ ಗುಂಪೊಂದು ಆಕೆಯನ್ನು ಅಪಹರಿಸಿತು. ಆ ನಂತರ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Out with friend, 26-year-old woman allegedly sexual harassment in Jharkhand

ಯುವತಿಯು 26 ವರ್ಷದವಳು. ಗುರುವಾರ ಸಂಜೆ ತನ್ನ ಸ್ನೇಹಿತನೊಂದಿಗೆ ಏರೋಡ್ರಮ್‌ ಪ್ರದೇಶಕ್ಕೆ ತೆರಳಿದ್ದಳು. ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ, ದುಷ್ಕರ್ಮಿಗಳು ತಡೆದಿದ್ದಾರೆ. ಆಕೆಯ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಆ ನಂತರ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ಪ್ರಕರಣ ಗಂಭೀರವಾಗಿದೆ. ಇದರ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಪಶ್ಚಿಮ ಸಿಂಗ್‌ಭೂಮ್ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.

ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಮನೆಯಿಂದಲೇ ಕೆಲಸ(ವರ್ಕ್‌ ಫ್ರಂ ಹೋಮ್‌) ಮಾಡುತ್ತಿದ್ದಾರೆ. ಜಿಂಕ್‌ಪಾನಿ ಪ್ರದೇಶದ ನಿವಾಸಿಗಳಾಗಿರುವ ಅವರು ಬೆಂಗಳೂರು ಮೂಲದ ಟೆಕ್‌ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿದ್ದಾರೆ. ಜಿಲ್ಲಾ ಕೇಂದ್ರವಾದ ಚೈಬಾಸಾದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+