ರೈಲ್ವೆ ಸುರಕ್ಷಾ ವಿಭಾಗದಲ್ಲಿ 1 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ

ರೈಲ್ವೆ ಸುರಕ್ಷತೆಗೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ ವರೆಗೆ ಒಂದು ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಸರಕಾರವು ಸಂಸತ್ ನಲ್ಲಿ ಬುಧವಾರ ಮಾಹಿತಿ ನೀಡಿದೆ. ರೈಲ್ವೆ ಖಾತೆ ರಾಜ್ಯ ಸಚಿವ ರಜೇನ್ ಗೊಹೈನ್ ಲಿಖಿತ ಉತ್ತರ ನೀಡಿದ್ದು, ಖಾಲಿ ಹುದ್ದೆಗಳನ್ನು ವೇಗವಾಗಿ ತುಂಬಲು ಶ್ರಮಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಸುರಕ್ಷತಾ ವಿಭಾಗಗಳಿಗೆ ಸಂಬಂಧಿಸಿದಂತೆ ರೈಲ್ವೆಯ ಎಲ್ಲ ವಲಯವೂ ಸೇರಿ ಏಪ್ರಿಲ್, 2017ಕ್ಕೆ 1,28,942 ಹುದ್ದೆಗಳು ಖಾಲಿ ಇವೆ. ಚಾಲಕರೂ ಸೇರಿದಂತೆ ಲೋಕೋ ರನ್ನಿಂಗ್ ವಿಭಾಗದಲಿ 17,457 ಹುದ್ದೆಗಳಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Over 1 lakh safety-related posts in railways lying vacant

ರೈಲ್ವೆ ನೇಮಕಾತಿ ಮಂಡಳಿ ಮೂಲಕ ಕಳೆದ ಐದು ವರ್ಷಗಳಲ್ಲಿ ಸಹಾಯಕ ಲೋಕೋಪೈಲಟ್ ಹುದ್ದೆಗೆ 50,463 ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ನೇಮಕಾತಿ ಸಂದರ್ಭದಲ್ಲಿ ಲಿಖಿತ ಪರೀಕ್ಷೆಯ ಹಂತಕ್ಕೆ ಮೂರರಿಂದ ನಾಲ್ಕು ತಿಂಗಳು ಸಮಯ ತೆಗೆದುಕೊಳ್ಳುತ್ತದೆ. ಅಧಿಸೂಚನೆ ಹೊರಡಿಸಿದ ನಂತರ ಅಭ್ಯರ್ಥಿಗಳಿಗೆ ಮೂರು ವಾರಗಳ ಸಮಯ ಬೇಕಾಗುತ್ತದೆ. ಇಡೀ ನೇಮಕಾತಿ ಪ್ರಕ್ರಿಯೆಗೆ ಒಂದೂವರೆಯಿಂದ ಎರಡು ವರ್ಷ ತೆಗೆದುಕೊಳ್ಳುತ್ತಿದೆ ಎಂದು ಗೊಹೈನ್ ಹೇಳಿದ್ದಾರೆ.

ಇತ್ತೀಚೆಗೆ ರೈಲು ಅಪಘಾತಗಳಲ್ಲಿ ಹೆಚ್ಚಳವಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಎರಡು ವರ್ಷದಿಂದ ಆರು ತಿಂಗಳಿಗೆ ಇಳಿಸಲು ಸಾಧ್ಯವೇ ಎಂದು ಕೆಲ ದಿನಗಳ ಹಿಂದೆ ರೈಲ್ವೆ ನೇಮಕಾತಿ ಮಂಡಳಿಯು ಹಿರಿಯ ಅಧಿಕಾರಿಗಳ ಸಲಹೆ ಕೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+