12,000ಕ್ಕೂ ಹೆಚ್ಚು ಎನ್‌ಜಿಒಗಳ ವಿದೇಶಿ ಧನಸಹಾಯ ಪರವಾನಗಿ ರದ್ದು
ನವದೆಹಲಿ, ಜನವರಿ 1: ವಿದೇಶಗಳಿಂದ ಹಣವನ್ನು ಪಡೆಯುವುದಕ್ಕೆ ಪಡೆದಿರುವ ಫಾರಿನ್ ಕಾಂಟ್ರಿಬ್ಯೂಷನ್ ರೆಗ್ಯುಲೇಷನ್ ಆಕ್ಟ್(FCRA) ಅಡಿ 6,000 ಎನ್‌ಜಿಒ ಮತ್ತು ಇತರ ಸಂಸ್ಥೆಗಳ ಪರವಾನಗಿಯು ರಾತ್ರೋರಾತ್ರಿ ಮುಗಿದಿದೆ ಎಂದು ಗೃಹ ಸಚಿವಾಲಯ ಶನಿವಾರ ಬೆಳಗ್ಗೆ ತಿಳಿಸಿದೆ.
ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ಅಂತಹ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಕೆಲವೇ ದಿನಗಳ ಅಂತರದಲ್ಲಿ ಈ ಬಗ್ಗೆ ಸಚಿವಾಲಯ ತಿಳಿಸಿದೆ. ಗೃಹ ಸಚಿವಾಲಯದ ಮೂಲಗಳ ಪ್ರಕಾರ, 6,000ಕ್ಕೂ ಹೆಚ್ಚು ಎನ್‌ಜಿಒಗಳು ಅಥವಾ ಸಂಸ್ಥೆಗಳು ತಮ್ಮ ಪರವಾನಗಿಗಳನ್ನು ನವೀಕರಿಸಲು ಅರ್ಜಿ ಸಲ್ಲಿಸಿಲ್ಲ.
"ಶುಕ್ರವಾರದ ಗಡುವು ಮುಗಿಯುವುದಕ್ಕೂ ಮೊದಲು ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿತ್ತು. ಆದರೆ ಅನೇಕರು ಅರ್ಜಿ ಸಲ್ಲಿಸಿಲ್ಲ, ಅರ್ಜಿ ಸಲ್ಲಿಸದಿದ್ದರೆ ಅನುಮತಿ ನೀಡುವುದು ಹೇಗೆ," ಎಂದು ಅಧಿಕಾರಿಯೊಬ್ಬರು ಪ್ರಶ್ನಿಸಿದರು.

ಪರವಾನಗಿ ನವೀಕರಿಸಲು ಅರ್ಜಿ ಸಲ್ಲಿಕೆಯಾಗಿಲ್ಲ:
ಒಟ್ಟಾರೆ, ಆಕ್ಸ್‌ಫ್ಯಾಮ್ ಇಂಡಿಯಾ ಟ್ರಸ್ಟ್, ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ಲೆಪ್ರಸಿ ಮಿಷನ್ ಸೇರಿದಂತೆ 12,000ಕ್ಕೂ ಹೆಚ್ಚು ಎನ್‌ಜಿಒಗಳ ಪರವಾನಗಿ ಮುಗಿದಿದ್ದು, ಇಂದಿನಿಂದ ತಮ್ಮ ಎಫ್‌ಸಿಆರ್‌ಎ ಪರವಾನಗಿಗಳನ್ನು ಕಳೆದುಕೊಂಡಿವೆ.
ಈ ಪಟ್ಟಿಯಲ್ಲಿ ಕ್ಷಯರೋಗ ಅಸೋಸಿಯೇಷನ್ ಆಫ್ ಇಂಡಿಯಾ, ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ ಮತ್ತು ಇಂಡಿಯಾ ಇಸ್ಲಾಮಿಕ್ ಕಲ್ಚರಲ್ ಸೆಂಟರ್ ಸೇರಿವೆ. ಆಕ್ಸ್‌ಫ್ಯಾಮ್ ಇಂಡಿಯಾವು ಎಫ್‌ಸಿಆರ್‌ಎ ಪ್ರಮಾಣಪತ್ರಗಳ ಅವಧಿ ಮುಗಿದಿರುವ ಎನ್‌ಜಿಒಗಳ ಪಟ್ಟಿಯಲ್ಲಿದೆ ಮತ್ತು ನೋಂದಣಿ ರದ್ದುಗೊಂಡವರ ಪಟ್ಟಿಯಲ್ಲಿಲ್ಲ.
ಭಾರತದಲ್ಲಿ ಈಗ ಕೇವಲ 16,829 ಎನ್‌ಜಿಒಗಳು ಎಫ್‌ಸಿಆರ್‌ಎ ಪರವಾನಗಿಯನ್ನು ಹೊಂದಿವೆ, ಅದನ್ನು ನಿನ್ನೆ ಮಾರ್ಚ್ 31, 2022ರವರೆಗೆ ನವೀಕರಿಸಲಾಗಿದೆ. ಪಿಟಿಐ ಸುದ್ದಿ ಸಂಸ್ಥೆ ಪ್ರಕಾರ, 22,762 ಎನ್‌ಜಿಒಗಳು ವಿದೇಶಿ ಕೊಡುಗೆಗಳ ನಿಯಂತ್ರಣ ಕಾಯ್ದೆಯಡಿ ನೋಂದಾಯಿಸಲ್ಪಟ್ಟಿವೆ. ವಿದೇಶಿ ನಿಧಿಯನ್ನು ಸ್ವೀಕರಿಸಲು ಪರವಾನಗಿ ಹೊಂದಿರಬೇಕಾಗಿರುತ್ತದೆ.
ಭಾರತದಾದ್ಯಂತ ಬಡವರು, ರೋಗಿಗಳು ಮತ್ತು ನಿರ್ಗತಿಕರಿಗೆ ಆಶ್ರಯವನ್ನು ನಿರ್ವಹಿಸುವ ಗುಂಪನ್ನು ತೊರೆದ ನಂತರ ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ಪರವಾನಗಿಯನ್ನು ನವೀಕರಿಸದಿರಲು ಗೃಹ ಸಚಿವಾಲಯ ನಿರ್ಧರಿಸಿತ್ತು. ತನ್ನ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಸ್ವೀಕರಿಸಿಲ್ಲ ಗೃಹ ಸಚಿವಾಲಯ ಎಂದು ಹೇಳಿದೆ.
ಮದರ್ ತೆರೇಸಾ ಚಾರಿಟಿ ಅವರ ನವೀಕರಣವನ್ನು ತಿರಸ್ಕರಿಸಲಾಗಿದೆ, ಈ "ವಿಷಯವನ್ನು ಪರಿಹರಿಸುವವರೆಗೆ ಯಾವುದೇ FC (ವಿದೇಶಿ ಕೊಡುಗೆಗಳು) ಖಾತೆಗಳನ್ನು ನಿರ್ವಹಿಸದಂತೆ ನಾವು ನಮ್ಮ ಕೇಂದ್ರಗಳನ್ನು ಕೇಳಿದ್ದೇವೆ," ಎಂದು ದೃಢಪಡಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications