ದೇಶದಲ್ಲಿ 24 ಗಂಟೆಯಲ್ಲಿ 20 ಲಕ್ಷ ಮಂದಿಗೆ ಕೊರೊನಾ ಲಸಿಕೆ

ನವದೆಹಲಿ, ಮಾರ್ಚ್ 09:ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20 ಲಕ್ಷ ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಮಾರ್ಚ್ 8 ರಂದು ದೇಶದಲ್ಲಿ ಬರೋಬ್ಬರಿ 20 ಲಕ್ಷ ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದ್ದು, ಇದುವರೆಗೆ ಒಂದು ದಿನದಲ್ಲಿ ಲಸಿಕೆ ಪಡೆದವರ ಅತಿ ಹೆಚ್ಚು ಸಂಖ್ಯೆಯಾಗಿದೆ.

ದೇಶಾದ್ಯಂತದ ಕಳೆದ ಜನವರಿ 16ರಿಂದ ಪ್ರಾರಂಭವಾದ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದ್ದು, ಒಂದೇ ದಿನದಲ್ಲಿ 2 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ನೀಡಲಾಯಿತು ಎಂದು ಸಚಿವಾಲಯ ತಿಳಿಸಿದೆ.

Over 20 Lakh Covid Vaccine Doses Administered In A Day

ದೇಶಾದ್ಯಂತ ಈವರೆಗೆ 2 ಕೋಟಿ 30 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ 19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಈ ಮಧ್ಯೆ, ಮಹಾರಾಷ್ಟ್ರ, ಕೇರಳ, ಪಂಜಾಬ್, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕದಲ್ಲಿ ಮತ್ತೆ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇಂದು ದೇಶದಲ್ಲಿ 15,388 ಹೊಸ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಯಲ್ಲಿ ಬರೋಬ್ಬರಿ 20 ಲಕ್ಷ ಮಂದಿಗೆ ಕೋವಿಡ್ ಲಸಿಕೆ ಹಾಕಲಾಗಿದ್ದು, 20,19,723 ಡೋಸ್ ಲಸಿಕೆಯನ್ನು ನೀಡಲಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,388 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,12,44,786ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ ಮಹಾಮಾರಿ ವೈರಸ್ ಗೆ 77 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 1,57,930ಕ್ಕೆ ಏರಿದೆ. ಈ ನಡುವೆ ನಿನ್ನೆ ಒಂದೇ ದಿನ 16, 596 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು ಈ ಮೂಲಕ ಇದುವರೆಗೆ ಒಟ್ಟೂ 1,08,99,394 ಜನರು ಸೋಂಕಿನಿಂದ ಗುಣ ಹೊಂದಿದ್ದಾರೆ. ಇದೀಗ ಪ್ರಸ್ತುತ 1,87,462 ಮಂದಿ ದೇಶದ ನಾನಾ ನಿಗದಿತ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+