ಇದುವರೆಗೆ ರಾಜ್ಯಗಳಿಗೆ 25.87 ಕೋಟಿ ಕೊರೊನಾ ಲಸಿಕೆ ಪೂರೈಕೆ
ನವದೆಹಲಿ, ಜೂನ್ 12: ಇದುವರೆಗೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 25.87 ಕೋಟಿ ಕೊರೊನಾ ಲಸಿಕೆ ಡೋಸ್‌ಗಳನ್ನು ನೀಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಲಸಿಕೆ ನೀಡಿಕೆಗಾಗಿ ಇನ್ನು 1,12,41,187 ಡೋಸ್ ಕೋವಿಡ್ ಲಸಿಕೆ ಲಭ್ಯವಿದೆ ಎಂದು ಸಚಿವಾಲಯ ಹೇಳಿದೆ. ಇನ್ನು 10,81,300 ಲಸಿಕೆ ಡೋಸ್ ಗಳು ಬರುತ್ತಿದ್ದು ಇವುಗನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇನ್ನು ಮೂರು ದಿನದಲ್ಲಿ ಸಿಗಲಿದೆ ಎಂದು ಹೇಳಿದೆ.
ಇಟಲಿಯಲ್ಲಿ 60 ವರ್ಷದ ಒಳಗಿನವರಿಗೆ ಅಸ್ಟ್ರಾಜೆನೆಕಾ ಲಸಿಕೆ ನಿಷೇಧ
ಉಚಿತ ದರ ಹಾಗೂ ರಾಜ್ಯಗಳಿಂದ ನೇರ ಖರೀದಿ ಹಂತದಲ್ಲಿ ಈವರೆಗೂ 25,87,41,810 ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ. 24,76,58,855 ಡೋಸ್ ವ್ಯರ್ಥ ಡೋಸ್ ಕೂಡಾ ಇದರಲ್ಲಿ ಸೇರಿದೆ ಎಂದು ಇಂದು ಬೆಳಗ್ಗೆ ಮಾಹಿತಿ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಒಂದೇ ದಿನ 30 ಲಕ್ಷ ಫಲಾನುಭವಿಗಳಿಗೆ ಕೊರೊನಾ ಲಸಿಕೆಭಾರತದಲ್ಲಿ ಒಂದೇ ದಿನ 30 ಲಕ್ಷ ಫಲಾನುಭವಿಗಳಿಗೆ ಕೊರೊನಾ ಲಸಿಕೆ
24,96,00,304 ಮಂದಿಗೆ ಕೊರೊನಾ ಲಸಿಕೆ: ಭಾರತದಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಫುಟ್ನಿಕ್ ವಿ ಲಸಿಕೆಗಳನ್ನು ನೀಡಲಾಗುತ್ತಿದೆ. 147 ದಿನಗಳಲ್ಲಿ 24,96,00,304 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿರುವುದಾಗಿ ತಿಳಿದುಬಂದಿದೆ.