Plane Crash: ವಿಮಾನ ದುರಂತದಲ್ಲಿ 242 ಜನರು ಸಾವು: ಅಧಿಕೃತ ಮಾಹಿತಿ
ಅಹಮದಾಬಾದ್, ಜೂನ್ 12: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ಈ ಏರ್ ಇಂಡಿಯಾ ವಿಮಾನದಲ್ಲಿ 242 ಜನರು ಪ್ರಯಾಣಿಕರು ಸಹ ಮೃತಪಟ್ಟಿದ್ದಾರೆ. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, 50 ಕ್ಕೂ ಹೆಚ್ಚು ಬ್ರಿಟಿಷ್ ಪ್ರಜೆಗಳು ಸೇರಿದಂತೆ ಹಲವು ಪ್ರಯಾಣಿಕರು ಇದ್ದರು. ಲಂಡನ್ ಕಡೆಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಯಿತು.
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 242 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿಯಿಂದ ತಿಳಿದು ಬಂದಿದೆ. ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ 242 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಅಹಮದಾಬಾದ್ ನಗರ ಪೊಲೀಸ್ ಆಯುಕ್ತರು ಯಾರೂ ಬದುಕುಳಿದಿಲ್ಲ ಎಂದು ಹೇಳಿದ್ದಾರೆ. ಕಚೇರಿಗಳನ್ನು ಹೊಂದಿರುವ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿರುವುದರಿಂದ ಕೆಲವು ಸ್ಥಳೀಯರು ಸಹ ಸಾವನ್ನಪ್ಪಿರಬಹುದು ಎಂದು ತಿಳಿಸಿದ್ದಾರೆ. ಸಾವಿನ ಸಂಖ್ಯೆಗಳ ಬಗ್ಗೆ ನಿಖರವಾದ ಅಂಕಿಅಂಶಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

242 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಮಧ್ಯಾಹ್ನ 1.17 ಕ್ಕೆ ಲಂಡನ್'ಗೆ ಹೊರಟಾಗ ಈ ಘಟನೆ ಸಂಭವಿಸಿದೆ. ಅಹಮದಾಬಾದ್‌ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಕಾಣಿಸಿಕೊಂಡಿದೆ. ವಿಮಾನ ಪತನಗೊಂಡ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗುತ್ತಿದೆ.
ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಬ್ಬರು ಸಚಿವರು ಅಹಮದಾಬಾದ್ ಗೆ ತೆರಳುವಂತೆ ಹೇಳಿದ್ದಾರೆ. ಅಲ್ಲದೇ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಸೂಚಿಸಿದ್ದಾರೆ. ಇನ್ನೂ ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ಏರ್ ಇಂಡಿಯಾ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಹಮದಾಬಾದ್‌ಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಫೋನ್ನಲ್ಲಿ ಮಾತುಕತೆ ನಡೆಸಿ ಮಾಹಿತಿ ಪಡೆದಿದ್ದಾರೆ. ಇನ್ನೂ ನಿಯಂತ್ರಣ ಕಳೆದು ಕೊಂಡು ಏರ್ ಇಂಡಿಯಾ ವಿಮಾನವೂ ಹಾಸ್ಟೆಲ್ ಮೇಲೆ ಬಿದಿದ್ದು, ಊಟಕ್ಕೆ ಹಾಸ್ಟೆಲ್ ಬಂದಿದ್ದ ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದು, ವಿಮಾನ ಅಪಘಾತದ ನಂತರ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಅಹಮದಾಬಾದ್‌ಗೆ ತಲುಪಿಸುವಂತೆ ಅವರು ಸೂಚಿಸಿದ್ದಾರೆ. ಇತ್ತ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ಬಗ್ಗೆ ತಿಳಿದು ತೀವ್ರ ಆಘಾತವಾಯಿತು. ಪ್ರಯಾಣಿಕರು ಮತ್ತು ಅವರ ಕುಟುಂಬದವರ ಜೊತೆ ನಾವಿದ್ದೇವೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಹಮದಾಬಾದ್ ವಿಮಾನ ದುರ್ಘಟನೆ ಸಂಬಂಧಿಸಿದಂತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಅಹಮದಾಬಾದ್‌ನಲ್ಲಿ ಸಂಭವಿಸಿದ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ಏರ್ ಇಂಡಿಯಾದಿಂದ ಹಾಟ್‌ಲೈನ್ ಸಂಖ್ಯೆ ಬಿಡುಗಡೆ
ಅಹಮದಾಬಾದ್‌ನಿಂದ ಇಂದು ಮಧ್ಯಾಹ್ನ ಹೊರಟ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಇವರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಪ್ರಯಾಣಿಸುತ್ತಿದ್ದರು. ಅಲ್ಲದೇ ಹೆಚ್ಚಿನ ಮಾಹಿತಿ ನೀಡಲು ನಾವು 1800 5691 444 ಎಂಬ ಪ್ರಯಾಣಿಕರ ಹಾಟ್‌ಲೈನ್ ಸಂಖ್ಯೆಯನ್ನು ಸಹ ಸ್ಥಾಪಿಸಿದ್ದೇವೆ ಎಂದು ಏರ್ ಇಂಡಿಯಾ ತಿಳಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications