ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಗಳಿಗೆ ಈವರೆಗೆ ಕೇಂದ್ರದಿಂದ 48.78 ಕೋಟಿ ಕೊರೊನಾ ಲಸಿಕೆ ವಿತರಣೆ

|
Google Oneindia Kannada News

ನವದೆಹಲಿ, ಜುಲೈ 31: ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದಿಂದ ಈವರೆಗೆ 48.78 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ.

ಶನಿವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 45,82,60,052 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 68,57,590 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.

 ವಿದೇಶಗಳಿಗೆ ಇದುವರೆಗೂ 6.4 ಕೋಟಿ ಲಸಿಕೆ ರವಾನೆ: ಕೇಂದ್ರ ವಿದೇಶಗಳಿಗೆ ಇದುವರೆಗೂ 6.4 ಕೋಟಿ ಲಸಿಕೆ ರವಾನೆ: ಕೇಂದ್ರ

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್‌ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

Over 48.78 Crore Corona Vaccine Doses Provided To States Says Centre

ಈವರೆಗೆ ಕೇಂದ್ರವು ರಾಜ್ಯಗಳಿಗೆ 48.78 (48,78,63,410) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 3,14,57,081 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 46,15,18,479 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ದೇಶದಲ್ಲಿ ಭಾವಚಿತ್ರವುಳ್ಳ ಗುರುತಿನ ಚೀಟಿ ಇಲ್ಲದಿದ್ದರೂ 3.83 ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಭಾವಚಿತ್ರವುಳ್ಳ ಗುರುತು ಚೀಟಿ ದಾಖಲೆಯು ಇಲ್ಲದ ಜನರಿಗೆ ಕೋವಿನ್ ಅಪ್ಲಿಕೇಷನ್ ಮೂಲಕ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಚಿವೆ ಭಾರತಿ ಪವಾರ್ ಮಾಹಿತಿ ನೀಡಿದ್ದಾರೆ.

ಫೋಟೊ ಗುರುತಿನ ಚೀಟಿ ಇಲ್ಲದವರಿಗೆ ಲಸಿಕೆ ನೀಡಲುಸರ್ಕಾರ ಮಾರ್ಗಸೂಚಿ ಹೊರಡಿಸಿತ್ತು, ಡಿಜಿಟಲ್ ತಂತ್ರಜ್ಞಾನದ ಸೌಲಭ್ಯವಿರುವ ಜನರು ಲಸಿಕೆ ಕೇಂದ್ರದಲ್ಲಿಯೇ ಹೆಸರು ನೋಂದಣಿ ಮಾಡಿಸಬಹುದಿತ್ತು ಎಂದು ಅವರು ತಿಳಿಸಿದ್ದಾರೆ.

ಭಾರತದಲ್ಲಿ ಲಸಿಕೆ ಪಡೆದಿರುವ ಎಲ್ಲಾ ಫಲಾನುಭವಿಗಳಿಗೂ ಕೋ-ವಿನ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಲೋಕಸಭೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಬಯೋಲಾಜಿಕಲ್ ಇ ಕಂಪನಿಯು ತನ್ನ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸುವ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ. ದೇಶದ 94 ಕೋಟಿ ವಯಸ್ಕ ಜನರಿಗೆ ಲಸಿಕೆ ನೀಡಲು ಬಯೋಲಾಜಿಕಲ್ ಇ ಕಂಪನಿಯ ಲಸಿಕಾ ಉತ್ಪಾದನೆಯು ಮಹತ್ವದ ಪಾತ್ರ ವಹಿಸಲಿದೆ.

ಇನ್ನು, ರಷ್ಯಾದ ಸ್ಪುಟ್ನಿಕ್ ಲಸಿಕೆಯ 32 ಲಕ್ಷ ಡೋಸ್ ಭಾರತಕ್ಕೆ ಅಮದು ಆಗಿದೆ. ಇದರ ಪೈಕಿ ಇದುವರೆಗೂ 4.23 ಲಕ್ಷ ಡೋಸ್ ಲಸಿಕೆಯನ್ನು ಮಾತ್ರ ಜನರಿಗೆ ನೀಡಲಾಗಿದೆ.

ಸ್ಪುಟ್ನಿಕ್ ಲಸಿಕೆಯಲ್ಲಿ 2 ನೇ ಡೋಸ್ ಲಸಿಕೆಯನ್ನು ಮೊದಲ ಡೋಸ್ ನೀಡಿದ ವಯಲ್ ನಿಂದಲೇ ನೀಡಲು ಸಾಧ್ಯವಿಲ್ಲ. ಹೀಗಾಗಿ ಮೊದಲ ಡೋಸ್ ಲಸಿಕೆ ನೀಡಿದ್ದಷ್ಟೇ ಪ್ರಮಾಣದಲ್ಲಿ 2 ನೇ ಡೋಸ್ ಲಸಿಕೆಯ ದಾಸ್ತಾನು ಬಂದ ಬಳಿಕ ಹೆಚ್ಚಿನ ಪ್ರಮಾಣದಲ್ಲಿ ಸ್ಪುಟ್ನಿಕ್ ಲಸಿಕೆ ನೀಡಲು ಹೈದರಾಬಾದ್ ನ ಡಾಕ್ಟರ್ ರೆಡ್ಡೀಸ್ ಲ್ಯಾಬೋರೇಟರಿ ಕಂಪನಿಯು ಸಿದ್ದತೆ ನಡೆಸುತ್ತಿದೆ.

ಭಾರತದಲ್ಲೇ ಸ್ಪುಟ್ನಿಕ್ ಲಸಿಕೆಯ ಉತ್ಪಾದನೆ ಕೂಡ ಆರಂಭವಾಗಿದೆ. ಸೆಪ್ಟೆಂಬರ್ ತಿಂಗಳಿನಿಂದ ಡಿಸೆಂಬರ್ ಅವಧಿಯಲ್ಲಿ 10 ಕೋಟಿ ಡೋಸ್ ಸ್ಪುಟ್ನಿಕ್ ಲಸಿಕೆಯು ಸಿಗುವ ವಿಶ್ವಾಸದಲ್ಲಿ ಕೇಂದ್ರ ಸರ್ಕಾರ ಇದೆ.

ಭಾರತ ಸರ್ಕಾರ ಈ ವರೆಗೂ ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ ಮಾಡಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದ್ದು, ಈ ವರ್ಷದ ಜನವರಿ 12 ರಿಂದ ಜುಲೈ 22ರ ಅವಧಿಯಲ್ಲಿ ಒಟ್ಟು 6.4 ಕೋಟಿ ಕೋವಿಡ್ ಲಸಿಕೆಗಳನ್ನು ವಿದೇಶಗಳಿಗೆ ಕಳುಹಿಸಿಕೊಟ್ಟಿದೆ.

ಲೋಕಸಭೆಯಲ್ಲಿ ಈ ಕುರಿತು ಲಿಖಿತ ಉತ್ತರ ನೀಡಿದ ನಾಗರಿಕ ವಿಮಾನಯನ ಸಚಿವ ವಿ.ಕೆ.ಸಿಂಗ್‌ ಅವರು, ಈ ಅವಧಿಯಲ್ಲಿ ಒಟ್ಟಾಗಿ 42.2 ಕೋಟಿ ಡೋಸ್‌ ಲಸಿಕೆಗಳನ್ನು ವಿಮಾನಗಳ ಮೂಲಕ ರವಾನಿಸಲಾಗಿದೆ. ಈ ಪೈಕಿ 35.8 ಕೋಟಿ ಡೋಸ್‌ ಲಸಿಕೆಗಳನ್ನು ದೇಶೀಯ ವಿಮಾನಗಳ ಮೂಲಕ ಕಳುಹಿಸಲಾಗಿದೆ.

ಇದೇ ಅವಧಿಯಲ್ಲಿ ದೇಶದಾದ್ಯಂತ ನೀಡಲಾಗಿರುವ ಲಸಿಕೆಯ ಪ್ರಮಾಣ 45 ಕೋಟಿಗೂ ಅಧಿಕವಾಗಿದೆ. ಇವರಲ್ಲಿ 18-44 ವರ್ಷದವರಿಗೆ ನೀಡಿದ 15.38 ಕೋಟಿ ಡೋಸ್‌ ಲಸಿಕೆಗಳು ಸೇರಿವೆ ಎಂದು ತಿಳಿಸಿದ್ದಾರೆ.

English summary
The Union Government is committed to accelerating the pace and expanding the scope of COVID-19 vaccination throughout the country. The new phase of universalisation of COVID-19 vaccination commenced from 21st June 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X