ಕೇಂದ್ರೀಯ ವಿದ್ಯಾಲಯ, ನವೋದಯ ಶಾಲೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 58,000 ಕ್ಕೂ ಹೆಚ್ಚು ಬೋಧಕ ಹುದ್ದೆ ಖಾಲಿ: ಮಾಹಿತಿ ತಿಳಿಯಿರಿ
ನವದೆಹಲಿ, ಫೆಬ್ರವರಿ 06: ಶಿಕ್ಷಣ ಸಚಿವಾಲಯದ ಪ್ರಕಾರ, ದೇಶಾದ್ಯಂತ ಕೇಂದ್ರೀಯ ವಿದ್ಯಾಲಯಗಳು, ನವೋದಯ ಶಾಲೆಗಳು ಮತ್ತು ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 58,000 ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಇವೆ. ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರವಾಗಿ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕೇಂದ್ರೀಯ ವಿದ್ಯಾಲಯಗಳಲ್ಲಿ 12,099 ಬೋಧಕ ಮತ್ತು 1,312 ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ಸಚಿವರು ಮಾಹಿತಿ ನೀಡಿದರು.
ಜವಾಹರ ನವೋದಯ ವಿದ್ಯಾಲಯಗಳಲ್ಲಿ 3,271 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ವಸತಿ ಶಾಲೆಗಳಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳ ಸಂಖ್ಯೆ 1,756. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ, ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಹುದ್ದೆಗಳು ಖಾಲಿ ಇವೆ. ಅಲ್ಲಿ 6,180 ಬೋಧಕ ಹುದ್ದೆಗಳು ಮತ್ತು 15,798 ಬೋಧಕೇತರ ಹುದ್ದೆಗಳು ಇನ್ನೂ ಭರ್ತಿಯಾಗಬೇಕಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ) 4,425 ಬೋಧಕ ಹುದ್ದೆಗಳು ಖಾಲಿಯಿದ್ದರೆ, 5,052 ಬೋಧಕೇತರ ಹುದ್ದೆಗಳು ಖಾಲಿ ಇವೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ 2,089 ಬೋಧಕ ಹುದ್ದೆಗಳು ಮತ್ತು 3,773 ಬೋಧಕೇತರ ಹುದ್ದೆಗಳು ಖಾಲಿ ಇವೆ.
ಅದೇ ರೀತಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಅಂಡ್ ರಿಸರ್ಚ್‌ಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಸಂಖ್ಯೆ 353 ಮತ್ತು 625. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ 1,050 ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಇವೆ.

'ನಿವೃತ್ತಿ, ರಾಜೀನಾಮೆ, ಬಡ್ತಿ ಮತ್ತು ಹೊಸ ಸ್ಟ್ರೀಮ್‌ಗಳ ಉನ್ನತೀಕರಣ ಅಥವಾ ಮಂಜೂರಾತಿ ಮತ್ತು ವಿದ್ಯಾರ್ಥಿಗಳ ಬಲವನ್ನು ಹೆಚ್ಚಿಸುವ ಹೆಚ್ಚುವರಿ ಅಗತ್ಯತೆಯಿಂದಾಗಿ ಖಾಲಿ ಹುದ್ದೆಗಳು ಬಾಕಿ ಇದೆ' ಎಂದು ಸರ್ಕಾರ್ ಹೇಳಿದರು.
'ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ ಮತ್ತು ಸಂಬಂಧಪಟ್ಟ ಸಂಸ್ಥೆಯ ಸಂಬಂಧಿತ ನೇಮಕಾತಿ ನಿಯಮಗಳ ನಿಬಂಧನೆಗಳ ಪ್ರಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಿಸಲಾಗುತ್ತದೆ' ಎಂದು ಸರ್ಕಾರ್ ಹೇಳಿದರು.

ಬೋಧನೆ-ಕಲಿಕೆ ಪ್ರಕ್ರಿಯೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆವಿಎಸ್) ಮತ್ತು ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ಮೂಲಕ ತಾತ್ಕಾಲಿಕ ಅವಧಿಗೆ ಶಿಕ್ಷಕರನ್ನು ಗುತ್ತಿಗೆ ಆಧಾರದ ಮೇಲೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
'ಅಧ್ಯಾಪಕರ ಕೊರತೆಯನ್ನು ಪೂರೈಸುವ ಸಲುವಾಗಿ, HEI ಗಳು ಸಂದರ್ಶಕ ಅಥವಾ ಸಹಾಯಕ ಬೋಧಕವರ್ಗ, ವಿಶ್ರಾಂತ ಪ್ರಾಧ್ಯಾಪಕರನ್ನು ನೇಮಕ ಮಾಡುವ ಅವಕಾಶವನ್ನು ಹೊಂದಿವೆ' ಎಂದು ಅವರು ಹೇಳಿದರು.












Click it and Unblock the Notifications