ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಂದೇ ದಿನದಲ್ಲಿ 580 ಸಿಎಪಿಎಫ್ ಸಿಬ್ಬಂದಿಗೆ ಕೊರೊನಾ ಸೋಂಕು

|
Google Oneindia Kannada News

ನವದೆಹಲಿ, ಏಪ್ರಿಲ್ 29: ಒಂದೇ ದಿನದಲ್ಲಿ 580 ಸಿಎಪಿಎಫ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ತಿಳಿದುಬಂದಿದೆ.

ಒಂದೇ ದಿನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಬರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಮತ್ತು ಇತರ ಎರಡು ಕೇಂದ್ರ ಪಡೆಗಳ 580 ಕ್ಕೂ ಹೆಚ್ಚು ಸಿಬ್ಬಂದಿ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವು ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ ಸೋಂಕಿತರು ಪತ್ತೆ, 3645 ಮಂದಿ ಸಾವು

ಇನ್ನೂ ಬಾರ್ಡರ್ ಸೆಕ್ಯುರಿಟಿ ಫೋರ್ಸ್(ಬಿಎಸ್ಎಫ್) ನ 132 ಸಿಬ್ಬಂದಿಗೆ ಮತ್ತು ಪ್ರಮುಖ ನಕ್ಸಲ್ ವಿರೋಧಿ ಕಾರ್ಯಾಚರಣೆ ಪಡೆ ಕೇಂದ್ರ ರಿಸರ್ವ್ ಪೊಲೀಸ್ ಪಡೆ(ಸಿಆರ್ಪಿಎಫ್)ಯ 119 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Over 580 CAPF, Central Forces Personnel Infected By COVID-19 In 24-Hour Span

ಕಳೆದ 24 ಗಂಟೆಗಳಲ್ಲಿ ಸಂಗ್ರಹಿಸಲಾದ ಮಾಹಿತಿಯ ಪ್ರಕಾರ, ನೇಪಾಳ ಮತ್ತು ಭೂತಾನ್ ಗಡಿ ಕಾವಲು ಪಡೆ ಸಶಸ್ತ್ರ ಸೀಮಾ ಬಲ(ಎಸ್‌ಎಸ್‌ಬಿ) ದಲ್ಲಿ ಗರಿಷ್ಠ 149 ಸಿಬ್ಬಂದಿಗೆ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯ 146 ಸಿಬ್ಬಂದಿಗೆ ಪಾಸಿಟಿವ್ ಬಂದಿದೆ.

ಈ ಎರಡು ಪಡೆಗಳು ದೇಶದ ಪ್ರಮುಖ ನಾಗರಿಕ ವಿಮಾನ ನಿಲ್ದಾಣಗಳ ಭದ್ರತೆ ಮತ್ತು ಇತರ ನಿರ್ಣಾಯಕ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟವಾಗಿದ್ದು, 3,79,257 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 3645 ಮಂದಿ ಸಾವನ್ನಪ್ಪಿದ್ದಾರೆ, 2,69,507 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಒಟ್ಟು 1,83,76,524 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೆ 1,50,86,878 ಮಂದಿ ಗುಣಮುಖರಾಗಿದ್ದಾರೆ. 30,84,814 ಪ್ರಕರಣಗಳು ಸಕ್ರಿಯವಾಗಿವೆ.

English summary
More than 580 personnel of the central armed police forces (CAPFs) and two other central forces under the command of the Union home ministry have been detected positive for coronavirus infection in a 24-hour span, officials said on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X