CBSE 12ನೇ ತರಗತಿ: ಮರುಮೌಲ್ಯಮಾಪನ, ಅಂಕ ಪರಿಶೀಲನೆಗೆ ಬರೋಬ್ಬರಿ 70,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲ್ಯಮಾಪನದ ಬಗ್ಗೆ ವಿದ್ಯಾರ್ಥಿಗಳಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಫಲಿತಾಂಶದ ಬಳಿಕ ಅಂಕಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಮಂಡಳಿಯು ನೀಡಿದ್ದ ಅವಕಾಶವನ್ನು ಬಳಸಿಕೊಂಡು ಬರೋಬ್ಬರಿ 70,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಈ ಬೆಳವಣಿಗೆಯು ಸಿಬಿಎಸ್‌ಇ ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಲೋಪಗಳನ್ನು ಹಾಗೂ ವಿದ್ಯಾರ್ಥಿಗಳಲ್ಲಿರುವ ಆತಂಕವನ್ನು ಮತ್ತೊಮ್ಮೆ ಎತ್ತಿತೋರಿಸಿದೆ.

ಒಟ್ಟು ಸ್ವೀಕೃತವಾಗಿರುವ ಅರ್ಜಿಗಳ ಪೈಕಿ 7,314 ವಿದ್ಯಾರ್ಥಿಗಳು ತಮ್ಮ ಅಂಕಗಳ ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನುಳಿದಂತೆ 63,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯ ಮರುಮೌಲ್ಯಮಾಪನಕ್ಕಾಗಿ ಆನ್‌ಲೈನ್ ಪೋರ್ಟಲ್ ಮೂಲಕ ಮನವಿ ಮಾಡಿದ್ದಾರೆ.

CBSE

ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಪಡೆಯಲು ಮತ್ತು ಉತ್ತರಗಳ ಮರುಮೌಲ್ಯಮಾಪನದಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಸಿಬಿಎಸ್‌ಇ ಕಳೆದ ಮಂಗಳವಾರವಷ್ಟೇ ತನ್ನ ಅಧಿಕೃತ ಪೋರ್ಟಲ್ ಅನ್ನು ತೆರೆದಿತ್ತು. ಪೋರ್ಟಲ್ ತೆರೆದ ಕೆಲವೇ ದಿನಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಅರ್ಜಿಗಳು ಹರಿದುಬಂದಿರುವುದು ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ಅಪನಂಬಿಕೆಯನ್ನು ಸೂಚಿಸುತ್ತದೆ.

ಸಿಬಿಎಸ್‌ಇ ವಿವಾದ

ಈ ಬಾರಿಯ ಫಲಿತಾಂಶದ ನಂತರ ಅಂಕಗಳ ಮೌಲ್ಯಮಾಪನದಲ್ಲಿ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬಂದಿದ್ದವು. ಅತ್ಯುತ್ತಮವಾಗಿ ಪರೀಕ್ಷೆ ಬರೆದಿದ್ದರೂ, ನಿರೀಕ್ಷೆಗಿಂತ ತೀರಾ ಕಡಿಮೆ ಅಂಕಗಳನ್ನು ನೀಡಲಾಗಿದೆ ಎಂದು ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿಂದೆಯೂ ಸಿಬಿಎಸ್‌ಇ ಪರೀಕ್ಷೆಗಳಲ್ಲಿ ಮೌಲ್ಯಮಾಪನದ ಗೊಂದಲಗಳು ಮತ್ತು ಗ್ರೇಸ್ ಮಾರ್ಕ್ಸ್ ಹಂಚಿಕೆಯ ವಿಚಾರಗಳು ದೊಡ್ಡ ವಿವಾದ ಸೃಷ್ಟಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಅದರಲ್ಲೂ ವಿಶೇಷವಾಗಿ, ಅಂಕಗಳನ್ನು ಒಟ್ಟುಗೂಡಿಸುವಲ್ಲಿ ನಡೆಯುವ ಸಣ್ಣ ತಪ್ಪುಗಳು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತಿವೆ. ಪದವಿ ಹಾಗೂ ಪ್ರತಿಷ್ಠಿತ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 12ನೇ ತರಗತಿಯ ಅಂಕಗಳೇ ನಿರ್ಣಾಯಕವಾಗಿರುತ್ತವೆ. ಪ್ರವೇಶ ಪಡೆಯಲು ಒಂದು ಅಂಕ ಕೂಡ ಮುಖ್ಯವಾಗಿರುವ ಈ ಸ್ಪರ್ಧಾತ್ಮಕ ಯುಗದಲ್ಲಿ, ಮಂಡಳಿಯ ಈ ರೀತಿಯ ಮೌಲ್ಯಮಾಪನ ಎಡವಟ್ಟುಗಳು ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿವೆ.

ಕಳೆದ ಕೆಲವು ವರ್ಷಗಳಿಂದ ಸಿಬಿಎಸ್‌ಇ ಮೌಲ್ಯಮಾಪನ ಪ್ರಕ್ರಿಯೆ ನಿರಂತರವಾಗಿ ಟೀಕೆಗೆ ಗುರಿಯಾಗುತ್ತಲೇ ಇದೆ. ಪರೀಕ್ಷೆಯ ನಂತರ ಉತ್ತಮ ಫಲಿತಾಂಶಕ್ಕಾಗಿ ಕಾಯುವ ವಿದ್ಯಾರ್ಥಿಗಳಿಗೆ ರಿಸಲ್ಟ್ ಬಂದಾಗ ತೀವ್ರ ನಿರಾಸೆಯಾಗುತ್ತಿದೆ. ಇದೇ ಕಾರಣಕ್ಕೆ ಮರುಮೌಲ್ಯಮಾಪನ ಮತ್ತು ಅಂಕಗಳ ಸ್ಕ್ಯಾನ್ಡ್ ಕಾಪಿ ಪಡೆಯಲು ಅರ್ಜಿ ಸಲ್ಲಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.

ಮುಂದಿನ ದಿನಗಳಲ್ಲಿ ಮಂಡಳಿಯು ಈ 70,000ಕ್ಕೂ ಹೆಚ್ಚು ಅರ್ಜಿಗಳನ್ನು ಎಷ್ಟು ವೇಗವಾಗಿ ಮತ್ತು ಪಾರದರ್ಶಕವಾಗಿ ವಿಲೇವಾರಿ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಪ್ರಕ್ರಿಯೆಗಳು ಈಗಾಗಲೇ ಶುರುವಾಗಿರುವುದರಿಂದ, ಸಿಬಿಎಸ್‌ಇ ಆದಷ್ಟು ಬೇಗ ಮರುಮೌಲ್ಯಮಾಪನದ ಅಂತಿಮ ಫಲಿತಾಂಶವನ್ನು ಪ್ರಕಟಿಸಬೇಕೆಂಬುದು ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರಮುಖ ಒತ್ತಾಯವಾಗಿದೆ.

ಇವೆಲ್ಲದರ ಜೊತೆಗೆ, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮಂಡಳಿಯು ಮುಂದಿನ ದಿನಗಳಲ್ಲಿ ತನ್ನ ಮೌಲ್ಯಮಾಪನ ಪ್ರಕ್ರಿಯೆಯನ್ನು ಇನ್ನಷ್ಟು ದೋಷರಹಿತವಾಗಿ ಮತ್ತು ಕಟ್ಟುನಿಟ್ಟಾಗಿ ಜಾರಿಗೆ ತರುವ ತುರ್ತು ಅಗತ್ಯವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+