ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ 9ಲಕ್ಷ ಸೋಂಕಿತರು ಕೃತಕ ಆಮ್ಲಜನಕ ಬೆಂಬಲದಲ್ಲಿದ್ದಾರೆ:ಕೇಂದ್ರ

|
Google Oneindia Kannada News

ನವದೆಹಲಿ, ಮೇ 08: ದೇಶಾದ್ಯಂತ 9 ಲಕ್ಷ ಮಂದಿ ಕೊರೊನಾ ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ದೇಶಾದ್ಯಂತ 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದರೆ, 9,02,291 ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶನಿವಾರ ತಿಳಿಸಿದ್ದಾರೆ.

ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಮಾತುಕತೆ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಮಾತುಕತೆ

ವಿದೇಶಾಂಗ ಸಚಿವ ಎಸ್.ಜೈಶಂಕರ್, ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ, ಬಂದರು, ಹಡಗು ಮತ್ತು ಜಲಮಾರ್ಗ ಮತ್ತು ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ರಾಜ್ಯ ಸಚಿವರು, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ. ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಮತ್ತು ನೀತಿ ಆಯೋಗದ ಸದಸ್ಯ (ಆರೋಗ್ಯ) ಸದಸ್ಯ ವಿನೋದ್ ಕೆ ಪೌಲ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.

Over 9 Lakh Patients On Oxygen Support Across India, 1.7 Lakh On Ventilator, Says Harsh Vardhan

ಸಾಂಕ್ರಾಮಿಕ ಪರಿಸ್ಥಿತಿ ಕುರಿತು ಚರ್ಚಿಸಲು ಸಚಿವರ ತಂಡ(ಜಿಒಎಂ)ದ 25ನೇ ವರ್ಚುವಲ್ ಸಭೆ ಉದ್ದೇಶಿಸಿ ಮಾತನಾಡಿದ ಹರ್ಷವರ್ಧನ್ ಅವರು, ದೇಶಾದ್ಯಂತ ಶೇ. 1.34 ರಷ್ಟು ಕೋವಿಡ್ ಸೋಂಕಿತರು ಐಸಿಯುನಲ್ಲಿದ್ದಾರೆ, ಶೇ.0.39 ರಷ್ಟು ಪ್ರಕರಣಗಳು ವೆಂಟಿಲೇಟರ್ ಮತ್ತು ಶೇ. 3.70 ಕೋವಿಡ್ ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಹೇಳಿದರು.

ದೇಶಾದ್ಯಂತ ಒಟ್ಟು 4,88,861 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 1,70,841 ರೋಗಿಗಳು ವೆಂಟಿಲೇಟರ್‌ಗಳಲ್ಲಿದ್ದಾರೆ ಮತ್ತು 9,02,291 ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

English summary
While 1,70,841 COVID patients across the country are on ventilator, as many as 9,02,291 patients are on oxygen support, Union Health Minister Harsh Vardhan on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X