ಎಲ್ಲಾ ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಎಷ್ಟಿದೆ?: ಕೇಂದ್ರ ಮಾಹಿತಿ
ನವದೆಹಲಿ, ಮೇ 05: ಎಲ್ಲಾ ರಾಜ್ಯಗಳಲ್ಲಿ ಇರುವ ಕೊರೊನಾ ಲಸಿಕೆ ಎಷ್ಟು ಎನ್ನುವ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 94.47 ಲಕ್ಷ ಕೋವಿಡ್-19 ಲಸಿಕೆಯ ಡೋಸ್‌ಗಳು ಲಭ್ಯವಿದೆ. ಮುಂದಿನ ಮೂರು ದಿನಗಳೊಳಗೆ ಹೆಚ್ಚುವರಿಯಾಗಿ 36 ಲಕ್ಷಗಳಷ್ಟು ಡೋಸ್‌ಗಳನ್ನು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 16,04,94,188 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
ಕೇಂದ್ರ ಸರ್ಕಾರವು ಈವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಯ 17.02 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಿದೆ ಎಂದು ತಿಳಿಸಿದೆ.
ಸದ್ಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಲಸಿಕೆಯ 94,47,614 ಡೋಸ್‌ಗಳು ಲಭ್ಯವಿದೆ. ವ್ಯರ್ಥದ ಪ್ರಮಾಣವೂ ಸೇರಿದಂತೆ ಈವರೆಗೆ ಒಟ್ಟು 16 ಕೋಟಿಗೂ ಹೆಚ್ಚು ಡೋಸ್‌ಗಳನ್ನು ಬಳಸಲಾಗಿದೆ' ಎಂದು ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications