ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ

|
Google Oneindia Kannada News

ನವದೆಹಲಿ, ನವೆಂಬರ್ 08; 2021ನೇ ಸಾಲಿನ ಪದ್ಮ ಪ್ರಶಸ್ತಿ ಸಮಾರಂಭ ನವದೆಹಲಿಯಲ್ಲಿ ನಡೆಯುತ್ತಿದೆ. 7 ಪದ್ಮವಿಭೂಷಣ, 10 ಪದ್ಮಭೂಷಣ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತಿದೆ.

ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

 ಪದ್ಮ ಪ್ರಶಸ್ತಿಗೆ ವೈದ್ಯರ ಹೆಸರು ಶಿಫಾರಸು ಮಾಡಲಿದೆ ದೆಹಲಿ ಸರ್ಕಾರ ಪದ್ಮ ಪ್ರಶಸ್ತಿಗೆ ವೈದ್ಯರ ಹೆಸರು ಶಿಫಾರಸು ಮಾಡಲಿದೆ ದೆಹಲಿ ಸರ್ಕಾರ

Padma Awards 2021 Ceremony In New Delhi

7 ಪದ್ಮವಿಭೂಷಣ, 10 ಪದ್ಮಭೂಷಣ, 102 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ. ಪ್ರಶಸ್ತಿ ಪಡೆದವರಲ್ಲಿ 29 ಮಹಿಳೆಯರು, ಒಬ್ಬರು ತೃತೀಯ ಲಿಂಗಿ ಸೇರಿದ್ದಾರೆ.

ರಾಜ್ಯದ 8 ಸಾಧಕರಿಗೆ ಪದ್ಮಶ್ರೀ, ಪೇಜಾವರ ಶ್ರೀಗಳಿಗೆ ಪದ್ಮ ವಿಭೂಷಣರಾಜ್ಯದ 8 ಸಾಧಕರಿಗೆ ಪದ್ಮಶ್ರೀ, ಪೇಜಾವರ ಶ್ರೀಗಳಿಗೆ ಪದ್ಮ ವಿಭೂಷಣ

ಪದ್ಮವಿಭೂಷಣ ಪ್ರಶಸ್ತಿ; ಜಪಾನ್‌ನ ಮಾಜಿ ಪ್ರಧಾನಿ ಶಿಂಬೊ ಅಬೆ, ಕರ್ನಾಟಕದ ಡಾ. ಬಿ. ಎಂ. ಹೆಗ್ಡೆ, ಗಾಯಕ ಎಸ್‌. ಪಿ. ಬಾಲಸುಬ್ರಮಣ್ಯಂ (ಮರಣೋತ್ತರ), ನರಿಂದರ್ ಸಿಂಗ್ ಕಪಾನಿ (ಮರಣೋತ್ತರ), ಮೌಲಾನಾ ವಹೀದುದ್ದೀನ್ ಖಾನ್, ಬಿ. ಬಿ. ಲಾಲ್, ಸುದರ್ಶನ್ ಸಾಹೋ ಪದ್ಮವಿಭೂಷಣ ಪ್ರಶಸ್ತಿ ಪಡೆದ ಸಾಧಕರು.

ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಗೌರವಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಗೌರವ

ಪದ್ಮಭೂಷಣ; ಕೃಷ್ಣನ್ ನಾಯರ್ ಶಾಂತಾ ಕುಮಾರಿ ಚಿತ್ರಾ, ತರುಣ್ ಗೊಗಯ್ (ಮರಣೋತ್ತರ), ಚಂದ್ರ ಶೇಖರ ಕಂಬಾರ, ಸುಮಿತ್ರಾ ಮಹಾಜನ್, ನೃಪೇಂದ್ರ ಮಿಶ್ರಾ, ರಾಮ್ ವಿಲಾಸ್ ಪಾಸ್ವಾನ್ (ಮರಣೋತ್ತರ), ಕೇಶುಭಾಯ್ ಪಟೇಲ್ (ಮರಣೋತ್ತರ), ಕಲ್ಬೆ ಸಾದಿಕ್ (ಮರಣೋತ್ತರ), ರಜನಿಕಾಂತ್ ದೇವಿದಾಸ್ ಶ್ರಾಫ್, ತರ್‌ಲೋಚನ್ ಸಿಂಗ್ ಪದ್ಮಭೂಷಣ ಪ್ರಶಸ್ತಿ ಪಡೆದವರು.

ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರು; 102 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ. ಕರ್ನಾಟಕದ ಮಾತಾ ಬಿ. ಮಂಜಮ್ಮ ಜೋಗತಿ (ಕಲೆ), ರಂಗಸ್ವಾಮಿ ಲಕ್ಷ್ಮಿನಾರಾಯಣ ಕಶ್ಯಪ್ (ಸಾಹಿತ್ಯ ಮತ್ತು ಶಿಕ್ಷಣ), ಕೆ. ವೈ. ವೆಂಕಟೇಶ್ (ಕ್ರೀಡೆ) ಪದ್ಮಶ್ರೀ ಪ್ರಶಸ್ತಿ ಪಡೆದ ಸಾಧಕರು.

ಪದ್ಮಶ್ರೀ ಪ್ರಶಸ್ತಿ ಪಡೆದ ಹಾಜಬ್ಬ; ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಹರೇಕಳ ಹಾಜಬ್ಬಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ಹಾಜಬ್ಬ ನೀಡುತ್ತಿದ್ದಾರೆ. ತಾನು ಪಡೆಯದ ಶಿಕ್ಷಣವನ್ನು ಊರಿನ ಮಕ್ಕಳು ಪಡೆಯಬೇಕು ಎಂದು ಹರೇಕಳ ಹಾಜಬ್ಬ ಕಿತ್ತಲೆ ಹಣ್ಣು ಮಾರಿ ಉಳಿಸಿದ ಹಣದಲ್ಲಿ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ.

hajabba

2004ರಲ್ಲಿ ಕನ್ನಡದ ಪತ್ರಿಕೆಯೊಂದು ಹಾಜಬ್ಬರನ್ನು ವರ್ಷದ ವ್ಯಕ್ತಿ ಎಂದು ಪಶಸ್ತಿ ನೀಡಿ ಗೌರವಿಸಿತು. ಬಳಿಕ ಅವರ ಬಗ್ಗೆ ಎಲ್ಲರಿಗೂ ತಿಳಿಯಿತು. ಸಿಎನ್‌ಎನ್-ಐಬಿಎನ್ ರಿಯಲ್ ಹಿರೋ ಎಂಬ ಪ್ರಶಸ್ತಿಯನ್ನು ಹಾಜಬ್ಬಗೆ ನೀಡಿದೆ.

ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಸರ್ಕಲ್‌ನಲ್ಲಿ ಕಿತ್ತಲೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವು ದುಡಿದ ಹಣದಿಂದಲೇ ಊರಿನಲ್ಲಿ ಶಾಲೆ ನಿರ್ಮಿಸಿದ್ದಾರೆ. ಕಿತ್ತಲೆ ಹಣ್ಣು ಮಾರುವಾಗ ವಿದೇಶಿ ಮಹಿಳೆ ಪ್ರಶ್ನೆಗೆ ಉತ್ತರ ನೀಡಲು ಹಾಜಬ್ಬಗೆ ಸಾಧ್ಯವಾಗಿರಲಿಲ್ಲ. ತನ್ನ ಊರಿನ ಮಕ್ಕಳು ಹೀಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹಾಜಬ್ಬ ಶಾಲೆ ತೆರೆದಿದ್ದರು.

ಬ್ಯಾಂಡ್ಮಿಟನ್ ಆಟಗಾರ್ತಿ ಪಿ. ವಿ. ಸಿಂಧು, ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್, ನಿವೃತ್ತ ಏರ್ ಮಾರ್ಷಲ್ ಡಾ. ಪದ್ಮಾ ಬಂಡೋಪಾದ್ಯಾಯ, ಹಿಂದೂಸ್ತಾನಿ ಗಾಯಕ ಚಾನುಲಾಲ್ ಮಿಶ್ರಾ, ಬಾಲಿವುಡ್ ನಟಿ ಕಂಗನಾ ರನೌಟ್ ಸೇರಿದಂತೆ ಹಲವು ಪ್ರಶಸ್ತಿ ಸ್ವೀಕರಿಸಿದರು.

ಮರಣೋತ್ತರವಾಗಿ ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ಜಾರ್ಜ್‌ ಫರ್ನಾಂಡೀಸ್‌ಗೆ ಪ್ರಶಸ್ತಿ ನೀಡಲಾಯಿತು.

English summary
119 Padma awards to be presented by president of India Ram Nath Kovind. Ceremony underway at New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X