Get Updates
Get notified of breaking news, exclusive insights, and must-see stories!

Padma Awards 2023: ಎಸ್.ಎಂ ಕೃಷ್ಣ, ಸುಧಾಮೂರ್ತಿ ಸೇರಿ 106 ಸಾಧಕರಿಗೆ ಪದ್ಮವಿಭೂಷಣ, ಪದ್ಮಶ್ರೀ ಪ್ರಶಸ್ತಿ ಪ್ರದಾನ

ಎಸ್.ಎಂ ಕೃಷ್ಣ, ಸುಧಾಮೂರ್ತಿ ಸೇರಿ 106 ಸಾಧಕರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದ ದ್ರೌಪದಿ ಮುರ್ಮು

ನವದೆಹಲಿ,ಮಾರ್ಚ್ 22:‌ 2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಾಹಿತಿ ಎಸ್‌.ಎಲ್‌.ಭೈರಪ್ಪ ಹಾಗೂ ಸುಧಾ ಮೂರ್ತಿ ಸೇರಿದಂತೆ ಒಟ್ಟು 106 ಮಂದಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ. ಈ ಬಾರಿ ಕರ್ನಾಟಕದ 8 ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

91 ವರ್ಷದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಪದ್ಮವಿಭೂಷಣ ಪ್ರಶಸ್ತಿಪ್ರಧಾನ ಮಾಡಲಾಗಿದೆ. ಇನ್ನು ಸಾಹಿತಿ ಭೈರಪ್ಪ ಹಾಗೂ ಸುಧಾಮೂರ್ತಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಉಳಿದಂತೆ ಕರ್ನಾಟಕದಿಂದ ವಿಜ್ಞಾನಿ ಖಾದರ್‌ವಲ್ಲಿ ದುಡೇಕುಲ, ಉಮ್ಮತ್ತಾಟ್‌ ನೃತ್ಯ ಕಲಾವಿದೆ ರಾಣಿ ಮಾಚಯ್ಯ, ತಮಟೆ ವಾದಕ ಮುನಿವೆಂಕಟಪ್ಪ, ರಶೀದ್‌ ಅಹಮದ್‌ ಖಾದ್ರಿ, ಎಸ್‌.ಸುಬ್ಬರಾಮನ್‌ ಅವರಿಗೂ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಇವರಲ್ಲದೇ ಖ್ಯಾತ ಗಾಯಕಿ ವಾಣಿ ಜಯರಾಂ ಹಾಗೂ ಆಸ್ಕರ್‌ ಪ್ರಶಸ್ತಿ ಗೆದ್ದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಅವರು ಸಹ ಪ್ರಶಸ್ತಿ ಸ್ವೀಕರಿಸಿದ್ದಾರೆ.

Former Union Minister SM Krishna Receives The Padmavibhushan From President Droupadi Murmu

ಷೇರು ಮಾರುಕಟ್ಟೆಯಲ್ಲಿ ಅಪ್ರತಿಮ ಸಾಧನೆ ಮೂಲಕ ದೇಶದ ಹೂಡಿಕೆ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಸಿದ ರಾಕೇಶ್ ಜುಂಜುನವಾಲ ಇತ್ತೀಚೆಗೆ ನಿಧನರಾಗಿದ್ದಾರೆ. ರಾಕೇಶ್ ಜುಂಜುನುವಾಲ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ರಾಕೇಶ್ ಜುಂಜುನವಾಲ್ ಪರವಾಗಿ ಅವರ ಪತ್ನಿ ರೇಖಾ ಜುಂಜುನವಾಲ ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ ಜುಂಜುನವಾಲ ಕುಟುಂಬಸ್ಥರು ಉಪಸ್ಥಿತರಿದ್ದರು.

ವಾಸ್ತುಶಿಲ್ಪ ಸಾಧನೆಯಲ್ಲಿ ಗುಜರಾತ್‌ನ ಬಾಲಕೃಷ್ಣ ದೋಶಿ(ಮರಣೋತ್ತರ), ಕಲಾ ಸಾಧನೆಗೈದ ಮಹಾರಾಷ್ಟ್ರದ ಝಾಕೀರ್ ಹುಸೈನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಕರ್ನಾಟಕ ಮಾಜಿ ಸಿಎಂ ಎಂಎಸ್ ಕೃಷ್ಣ, ಮೆಡಿಸಿನ್ ಕ್ಷೇತ್ರದಲ್ಲಿನ ಸಾಧನೆಗೆ ಪಶ್ಚಿಮ ಬಂಗಾಳದ ದಿಲೀಪ್ ಮಹಾಲಾನಬಿಸ್ (ಮರಣೋತ್ತರ), ವಿಜ್ಞಾನ ಹಾಗೂ ಎಂಜಿನೀಯರ್, ಅಮೆರಿಕದ ಶ್ರೀನಿವಾಸ್ ವರ್ಧನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್(ಮರಣೋತ್ತರ) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಛತ್ತೀಸ್​ಗಡದ ಜಾನಪದ ಕಲಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪಾಂಡವಾನಿ ಗಾಯಕಿ ಉಷಾ ಬಾರ್ಲೆ ಅವರು ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದರು. ಇನ್ನೂ ಸುಕಮ ಆಚಾರ್ಯ, ಜೋಧಯ್ಯಬಾಯಿ ಬೈಗಾ, ಪ್ರೇಮ್ಜಿತ್ ಬರಿಯಾ, ಮುನೀಶ್ವರ ಚಂದಾವರ, ಹೇಮಂತ್ ಚೌಹಾಣ್ ಭಾನುಭಾಯಿ ಚಿತಾರಾ, ಹೆಮೊಪ್ರೊವಾ ಚುಟಿಯಾ, ನರೇಂದ್ರ ಚಂದ್ರ ದೆಬ್ಬರ್ಮ (ಮರಣೋತ್ತರ),ಸುಭದ್ರಾ ದೇವಿ ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದರು.

ಖಾದರ್ ವಲ್ಲಿ ದೂದೇಕುಲ, ಹೇಂ ಚಂದ್ರ ಗೋಸ್ವಾಮಿ, ಪ್ರಿತಿಕಾನಾ ಗೋಸ್ವಾಮಿ, ರಾಧಾ ಚರಣ್ ಗುಪ್ತಾ, ಮೊಡಡುಗು ವಿಜಯ್ ಗುಪ್ತಾ, ಅಹ್ಮದ್ ಹುಸೇನ್ ಮತ್ತು ಮೊಹಮ್ಮದ್ ಹುಸೇನ್ (ಜೋಡಿ), ದಿಲ್ಶಾದ್ ಹುಸೇನ್, ಭಿಕು ರಾಮ್‌ಜಿ ಇದತೇ, ಸಿ ಐ ಇಸಾಕ್, ರತ್ತನ್ ಸಿಂಗ್ ಜಗ್ಗಿ, ಬಿಕ್ರಮ್ ಬಹದ್ದೂರ್ ಜಮಾತಿಯಾ ಅವರು ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದರು.

ಇನ್ನೂ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಒಟ್ಟು 106 ಮಂದಿಗೆ ಪದ್ಮಪುರಸ್ಕಾರದ ಗೌರವ ಸಿಕ್ಕಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಹಲವು ಗಣ್ಯರೂ ಈ ಕ್ಷಣಕ್ಕೆ ಸಾಕ್ಷಿಯಾದ್ರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+