Pahalgam Attack: ಉಗ್ರರ ಬಗ್ಗೆ ಮಾಹಿತಿ ಕೊಟ್ಟವರಿಗೆ 20ಲಕ್ಷ ಬಹುಮಾನ: ಕೇಂದ್ರ ಸರ್ಕಾರ ಘೋಷಣೆ

Pahalgam Attack: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಜೀವಗಳನ್ನು ಬಲಿತೆಗೆದುಕೊಂಡ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಷ್ಟು ಹಾಗೂ ಘೋಷಣೆ ಮಾಡಿದವರು ಯಾರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿನ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು 20 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ.

Pahalgam Attack 20 Lakh Reward for Providing Information on Terrorists Central govt announcement

ಇನ್ನು ಜಮ್ಮು ಕಾಶ್ಮೀರದ ಪಹಲ್ಗಾಮ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ ಹತ್ತು ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಅಧಿಕೃತ ಘೋಷಣೆ ಮಾಡಲಾಗಿದೆ. ಮಂಗಳವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ ಪಹಲ್ಗಾಮಕ್ಕೆ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮಂಜುನಾಥ್ ರಾವ್ ಹಾಗೂ ಬೆಂಗಳೂರಿನ ಸಾಫ್ಟ್ ವೇರ್ ಇಂಜಿನಿಯರ್ ಭರತ್ ಭೂಷಣ್ ಮೃತಪಟ್ಟಿದ್ದು, ಇವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಮಧ್ಯರಾತ್ರಿ 1 ಗಂಟೆಗೆ ಬೆಂಗಳೂರಿಗೆ ಮಂಜುನಾಥ್ ಮೃತದೇಹ ಜಮ್ಮು ಮತ್ತು ಕಾಶ್ಮೀರದ ಆನಂತನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಬಲಿಯಾಗಿದ್ದಾರೆ.

ಮಂಜುನಾಥ್ ಮೃತದೇಹ ಜಮ್ಮು ಕಾಶ್ಮೀರದಿಂದ ಬುಧವಾರ ಸಂಜೆ 6 ಗಂಟೆಗೆ ರವಾನಿಸಲಾಗಿದೆ. ಮಧ್ಯರಾತ್ರಿ 1 ಗಂಟೆಗೆ ಮಂಜುನಾಥ್ ಮೃತದೇಹ ಬೆಂಗಳೂರು ತಲುಪಲಿದೆ. ನಂತರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ರಸ್ತೆ ಮಾರ್ಗವಾಗಿ ಮೃತದೇಹವನ್ನು ಕೊಂಡೊಯ್ಯಲು ಯೋಚಿಸಲಾಗಿದೆ.

ಮಂಜುನಾಥ್ ಪತ್ನಿ ಪಲ್ಲವಿಗೆ ಲಾಡ್ ಸಾಂತ್ವನ ಈಗಾಗಲೇ ಜಮ್ಮು ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್ ಲಾಡ್, ಕನ್ನಡಿಗರನ್ನು ಭೇಟಿಯಾಗಿದ್ದಾರೆ. ಮೃತ ಮಂಜುನಾಥ್ ಪತ್ನಿ ಪಲ್ಲವಿಯವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+