ಭಯೋತ್ಪಾದಕರ ದಾಳಿ: ಪ್ರಧಾನಿ ಮೋದಿಗೆ ರಾಗಾ, ಖರ್ಗೆ ಪತ್ರ
ನವದೆಹಲಿ, ಏಪ್ರಿಲ್ 29: ಜಮ್ಮು ಮತ್ತು ಕಾಶ್ಮೀರ ಪಹಲ್ಗಾಮ್‌ದಲ್ಲಿ ನಡೆದ ಭಾರತೀಯ ಹತ್ಯೆ ವಿರುದ್ಧ ಭಾರತ ಒಂದಾಗಿ ನಿಲ್ಲಬೇಕಿದೆ. ನಾವು ಯಾವಾಗಲೂ ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ನಿಲ್ಲುತ್ತೇವೆ ಎಂದು ತೋರಿಸಿದೆ. ಇದು ನಿರ್ಣಾಯಕ ನನ್ನಿವೇಶವಾದ್ದರಿಂದ ಕೇಂದ್ರ ಸರ್ಕಾರ ಕೂಡಲೇ ವಿಶೇಷ ಉಭಯ ಸಂಸತ್ ಅಧಿವೇಶನ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ನಾಯಕರು ಪತ್ರ ಬರೆದಿದ್ದಾರೆ.
ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ. ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವಂತೆ ಅವರು ಮನವಿ ಮಾಡಿದ್ದಾರೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ಭಯೋತ್ಪಾದಕ ಕ್ರೂರ ದಾಳಿ ನಡೆದಿದೆ. ಸಾಮೂಹಿಕ ಸಂಕಲ್ಪ ಮತ್ತು ಇಚ್ಛಾಶಕ್ತಿಯ ಪ್ರಬಲ ಪ್ರದರ್ಶನ ಮಾಡಬೇಕಿದೆ. ಅದಕ್ಕೆ ತಕ್ಕತೆ ಚರ್ಚಿಸಲು ಅಧಿವೇಶನವನ್ನು ಕರೆಯಬೇಕೆಂಬುದು ನಮ್ಮ ಆಶಯ. ಏಕತೆ ಮತ್ತು ಒಗ್ಗಟ್ಟು ಅತ್ಯಗತ್ಯವಾಗಿದೆ. ಈ ಕ್ಷಣದಲ್ಲಿ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವುದು ಮುಖ್ಯವೆಂದು ವಿರೋಧ ಪಕ್ಷಗಳು ನಂಬಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ತಿಳಿಸಿದ್ದಾರೆ.
ಭಯೋತ್ಪಾದಕರ ದಾಳಿ ಸಂದರ್ಭದಲ್ಲಿ ನಾವು ಒಟ್ಟಿಗೆ ನಿಲ್ಲಬೇಕಿದೆ. ಈ ನಿರ್ಣಾಯಕ ಸಮಯದಲ್ಲಿ ಭಾರತ ಒಗ್ಗಟ್ಟು ತೋರಿಸಬೇಕು ಎಂದು ಪತ್ರದಲ್ಲಿ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ದಾಳಿ ಬಳಿಕ ಪ್ರಧಾನಿ ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲೂ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಹೇಳಿದ್ದರು. ಇದೀಗ ವಿಶೇಷ ಅಧಿವೇಶನ ನಡೆದರೆ ಮಹತ್ವದ ವಿಚಾರಗಳು ಚರ್ಚೆಗೆ ಬರಲಿವೆ. ಇದೇ ವೇಳೆ ಕೇಂದ್ರ ಬಿಜೆಪಿ ಸರ್ಕಾರ ಎಲ್ಲ ಸಹಕಾರದೊಂದಿಗೆ ಪಾಕ್ ವಿರುದ್ಧ ಮಹತ್ವದ ನಿರ್ರಧಾ ಪ್ರಕಟಿಸಬಹುದು.
My letter to PM Modi requesting a special session of both houses of Parliament to be convened at the earliest.
— Rahul Gandhi (@RahulGandhi) April 29, 2025
At this critical time, India must show that we always stand together against terrorism. pic.twitter.com/7AIXGqBqTl
ಕೇಂದ್ರ ವಿಪಕ್ಷಗಳು ನಿಮ್ಮೊಂದಿಗಿದ್ದೇವೆ ಎನ್ನುವ ಮೂಲಕ ದೇಶ ಭದ್ರತೆ ವಿಚಾರ ಬಂದಾಗ ನಾವೆಲ್ಲರು ಒಂದು ಎಂಬಂತೆ ಸಂದೇಶ ಸಾರಿದ್ದರು. ಇದು ಸಾಕಷ್ಟು ಮೆಚ್ಚುಗೆಗೆ ವ್ಯಕ್ತವಾಗಿದೆ. ಇತ್ತ ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕರು, ಪಾಕ್ ಮೇಲೆ ಯುದ್ಧ ಅನಗತ್ಯ, ಹಿಂದೂ ಹೆಸರು ಕೇಳಿಕೊಂಡು ಉಗ್ರರು ಶೂಟ್ ಮಾಡಿಲ್ಲ. ಹೀಗೆ ಸಿಎ ಸಿದ್ದರಾಮಯ್ಯ ಆದಿಯಾಗಿ ಅನೇಕರು ನಾಯಕರು ನೀಡಿದ ವಿವಿಧ ರೀತಿಯ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications