Pahalgam Terror Attack: ಪ್ರಿಯಾಂಕಾ ಗಾಂಧಿ & ರಾಹುಲ್ ಗಾಂಧಿ ಹೇಳಿದ್ದೇನು ? ನೆಟ್ಟಿಗರು ಬ್ಯಾಗ್ ಎಲ್ಲಿ ಎಂದಿದ್ಯಾಕೆ ?!
Pahalgam Terror Attack: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ದಲ್ಲಿ ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ಮಾಡಿದ್ದು. ಕೇಂದ್ರ ಸರ್ಕಾರವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ದಾಳಿಗೆ ಸಂಬಂಧಿಸಿದಂತೆ ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ಸ್ಫೋಟಿಸುವುದು ಹಾಗೂ ಧ್ವಂಸ ಮಾಡುವಂತಹ ಕಠಿಣ ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳುತ್ತಿದೆ. ಇಡೀ ದೇಶದ ಜನರ ಕಣ್ಣುಗಳು ಇದೀಗ ಜಮ್ಮು ಮತ್ತು ಕಾಶ್ಮೀರದ ಮೇಲಿದೆ. ಭಾರತದ ಮುಕುಟಕ್ಕೆ ಆಗಿರುವ ಗಾಯಕ್ಕೆ ಪ್ರತೀಕಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಏನು ಹೇಳಿದ್ದಾರೆ ಅಂತ ಜನ ಹುಡುಕುತ್ತಿದ್ದಾರೆ. ಕೆಲವು ನೆಟ್ಟಿಗರು ಬ್ಯಾಗ್ ಎಲ್ಲಿ ಮೇಡಂ ಅಂತ ಪ್ರಿಯಾಂಕಾ ಗಾಂಧಿ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಯಾಕಿ ಚರ್ಚೆ ಹಾಗೂ ಪಹಲ್ಗಾಮ್ ಬಗ್ಗೆ ಇವರಿಬ್ಬರು ಹೇಳಿರುವುದೇನು ಎನ್ನುವ ವಿವರ ಇಲ್ಲಿದೆ.
ಕಾಶ್ಮೀರದ ಪಹಲ್ಗಾಮ್‌ದಲ್ಲಿ ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ಮಾಡಿದ್ದಾರೆ. ಈ ದುರಂತದಲ್ಲಿ ಕನ್ನಡಿಗರು ಸೇರಿದಂತೆ 26 ಜನ ಮೃತಪಟ್ಟಿದ್ದಾರೆ. ಈ ದಾಳಿಗೆ ಕೇಂದ್ರ ಸರ್ಕಾರ ಪ್ರತೀಕಾರ ತೆಗೆದುಕೊಳ್ಳುವುದಾಗಿ ಹೇಳಿದೆ. ಈ ರೀತಿ ಇರುವಾಗಲೇ ವಿರೋಧ ಪಕ್ಷಗಳು ಯಾವ ರೀತಿ ರಿಯಾಕ್ಟ್ ಮಾಡುತ್ತಿವೆ ಎನ್ನುವುದು ಈ ಬಾರಿ ಹೆಚ್ಚು ಚರ್ಚೆಯಾಗುತ್ತಿದೆ. ಈ ವಿಷಯದಲ್ಲಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಪ್ರಿಯಾಂಕಾ ಗಾಂಧಿ ಅವರನ್ನು ಸಹ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ಅದೇನು ಎನ್ನುವ ವಿವರ ನೋಡೋಣ...

ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್‌ನಲ್ಲಿ ಏನಿದೆ ?
ಪಹಲ್ಗಾಮ್ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡಿನ ಕೃತ್ಯವಾಗಿದೆ. ನಿರಾಯುಧ ಮತ್ತು ಮುಗ್ಧ ಜನರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದು ಮಾನವೀಯತೆಯ ವಿರುದ್ಧದ ಅಪರಾಧ. ಇದು ಸಂಪೂರ್ಣ ಸ್ವೀಕಾರಾರ್ಹವಲ್ಲ. ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದ್ದು, ಅದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ಮುಂದುವರಿದು ವರದಿಗಳ ಪ್ರಕಾರ, ಈ ದಾಳಿಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ಅಗಲಿದವರ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ರಾಹುಲ್ ಗಾಂಧಿ ಹೇಳಿದ್ದೇನು?
ಭಯೋತ್ಪಾದನೆಯ ವಿರುದ್ಧ ಇಡೀ ದೇಶ ಒಗ್ಗಟ್ಟಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಪೊಳ್ಳು ಹೇಳಿಕೆ ನೀಡುವ ಬದಲು, ಸರ್ಕಾರ ಈಗ ಹೊಣೆಗಾರಿಕೆಯನ್ನು ತೆಗೆದುಕೊಂಡು ಭವಿಷ್ಯದಲ್ಲಿ ಇಂತಹ ಅನಾಗರಿಕ ಘಟನೆಗಳು ಸಂಭವಿಸದಂತೆ ಮತ್ತು ಅಮಾಯಕ ಭಾರತೀಯರು ಈ ರೀತಿ ಪ್ರಾಣ ಕಳೆದುಕೊಳ್ಳದಂತೆ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮುಂದುವರಿದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಅತ್ಯಂತ ಖಂಡನೀಯ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ ರಾಹುಲ್ ಗಾಂಧಿ ಅವರು, ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ಜಮ್ಮು ಮತ್ತು ಕಾಶ್ಮೀರ ಪಿಸಿಸಿ ಅಧ್ಯಕ್ಷ ತಾರಿಕ್ ಕರ್ರಾ ಅವರೊಂದಿಗೆ ಮಾತನಾಡಿದೆ. ಪರಿಸ್ಥಿತಿಯ ಬಗ್ಗೆ ಮಾಹಿತಿ ಸಿಕ್ಕಿದೆ. ಈ ದಾಳಿಯಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ ನ್ಯಾಯ ಸಿಗಬೇಕು ಮತ್ತು ನಮ್ಮ ಸಂಪೂರ್ಣ ಬೆಂಬಲ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಬ್ಯಾಗ್ ಎಲ್ಲಿ ಮೇಡಂ ಎಂದು ಪ್ರಶ್ನಿಸಿದ ನೆಟ್ಟಿಗರು!
ಇನ್ನು ಕೆಲವರು ಪ್ರಿಯಾಂಕಾ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ಬ್ಯಾಗ್ ಎಲ್ಲಿ ಮೇಡಂ ಅಂತ ಕೇಳುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಪ್ಯಾಲೆಸ್ತೀನ್ ಹಾಗೂ ಬಾಂಗ್ಲಾದೇಶದಲ್ಲಿ ನಡೆದಿದ್ದ ದಾಳಿಗಳನ್ನು ವಿರೋಧಿಸಿ ಹಾಗೂ ಬೆಂಬಲ ಸೂಚಿಸಿ, ಸಂಸತ್ತಿಗೆ ಪ್ಯಾಲೆಸ್ತೀನ್ ಹಾಗೂ ಬಾಂಗ್ಲಾದೇಶ ಎಂದು ಬರೆದ ಬ್ಯಾಗ್ ತೆಗೆದುಕೊಂಡು ಬಂದಿದ್ದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿದ್ದರು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ. ಇದಕ್ಕೆ ಬ್ಯಾಗ್ ಇಲ್ಲವೇ, ಒಂದು ಟ್ವೀಟ್ ಮಾಡಿದರೆ ಸಾಕೇ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಪರ - ವಿರೋಧ ಅಭಿಪ್ರಾಯವೂ ವ್ಯಕ್ತವಾಗಿದೆ.












Click it and Unblock the Notifications