Pahalgam Terrorist Attack: ದೆಹಲಿಗೆ ಬರುತ್ತಿದ್ದಂತೆ ತುರ್ತು ಸಭೆ ನಡೆಸಿದ ಮೋದಿ
ನವದೆಹಲಿ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 28 ಪ್ರವಾಸಿಗರು ಮೃತಪಟ್ಟಿದ್ದಾರೆ. ಕರ್ನಾಟಕದ ಇಬ್ಬರು ಸಹ ಸಾವನ್ನಪ್ಪಿದ್ದಾರೆ. ಈ ದಾಳಿ ಕುರಿತು ದೇಶ- ವಿದೇಶದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸೌದಿ ಅರೇಬಿಯಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಈ ದಾಳಿ ಬಳಿಕ ತಮ್ಮ ಪ್ರವಾಸ ಮೊಟಕುಗೊಳಿಸಿ ನವದೆಹಲಿಗೆ ವಾಪಸ್ ಆಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇದ್ದ ವಿಶೇಷ ವಿಮಾನ ಇಂದು ಬೆಳಗ್ಗೆ ನವದೆಹಲಿಗೆ ಆಗಮಿಸಿತು. ವಿಮಾನ ನಿಲ್ದಾಣದಿಂದ ಹೊರ ಬಂದ ನರೇಂದ್ರ ಮೋದಿ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಕುರಿತು ತುರ್ತು ಸಭೆಯನ್ನು ನಡೆಸಿದರು. ರಕ್ಷಣಾ ಕಾರ್ಯಾಚರಣೆ ಕುರಿತು ಮಾಹಿತಿಯನ್ನು ಪಡೆದು, ಸೂಚನೆಗಳನ್ನು ನೀಡಿದರು.

ಈ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮುಂತಾದವರಿದ್ದರು. ಅಜಿತ್ ದೋವಲ್ ದಾಳಿ ನಡೆದ ಬಗೆಯನ್ನು ಪ್ರಧಾನಿ ನರೇಂದ್ರ ಮೋದಿಗೆ ವಿವರಿಸಿದರು. ಬಳಿಕ ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ಮಾಹಿತಿಯನ್ನು ನೀಡಿದರು.
ಎನ್‌ಐಎ ತನಿಖೆ ಆರಂಭ: ಪಹಲ್ಗಾಮ್ ಉಗ್ರರ ದಾಳಿ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯನ್ನು ಆರಂಭಿಸಿದೆ. ಎನ್‌ಐಎ ಅಧಿಕಾರಿಗಳ ತಂಡ ಜಮ್ಮು ಮತ್ತು ಕಾಶ್ಮೀರಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿದ್ದು, ಘಟನೆ ನಡೆದ ಸ್ಥಳದಲ್ಲಿ ಪರಿಶೀಲನೆಯನ್ನು ಕೈಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರದಲ್ಲಿಯೇ ಇದ್ದು, ರಾಜಭವನದಲ್ಲಿ ಮಂಗಳವಾರ ರಾತ್ರಿ ಅಧಿಕಾರಿಗಳ ಸಭೆಯನ್ನು ನಡೆಸಿದರು. ಕಾಶ್ಮೀರ ಕಣಿವೆಯಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಅನಂತನಾಗ್, ಪಹಲ್ಗಾಮ್ ಪ್ರದೇಶದಲ್ಲಿ ಉಗ್ರರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹ ಸೇನಾ ಅಧಿಕಾರಿಗಳ ಜೊತೆ ಇಂದು ಪಹಲ್ಗಾಮ್‌ಗೆ ಭೇಟಿ ನೀಡುವ ಸಾಧ್ಯತೆ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಎಲ್ಲಾ ಪ್ರವಾಸಿಗರ ಶವಗಳಿಗೆ ಶ್ರೀನಗರದಲ್ಲಿ ಅಂತಿಮ ನಮನವನ್ನು ಸಲ್ಲಿಸಲಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಎಲ್ಲಾ ಪ್ರವಾಸಿಗರ ಶವಗಳನ್ನು ಶ್ರೀನಗರಕ್ಕೆ ತರಲಾಗುತ್ತಿದೆ. ಅಲ್ಲಿಂದ ಅವರ ತವರು ರಾಜ್ಯಕ್ಕೆ ಶವಗಳನ್ನು ಕಳುಹಿಸಲು ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡಲು ಈಗಾಗಲೇ ಸಹಾಯವಾಣಿಯನ್ನು ಸಹ ಪ್ರಾರಂಭಿಸಲಾಗಿದೆ. ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮ ಪ್ರತಿನಿಧಿಗಳನ್ನು ಕಾಶ್ಮೀರಕ್ಕೆ ಕಳಿಸಿದ್ದು, ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸಚಿವ ಸಂತೋಷ್ ಲಾಡ್ ಕಾಶ್ಮೀರಕ್ಕೆ: ಕಾಶ್ಮೀರದಲ್ಲಿ ಕನ್ನಡಿಗ ಪ್ರವಾಸಿಗರ ಸುರಕ್ಷತೆ ಕುರಿತು, ಉಗ್ರರ ದಾಳಿಯಲ್ಲಿ ಮೃತಪಟ್ಟ ಇಬ್ಬರ ಶವಗಳನ್ನು ತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಕಳಿಸಲಾಗಿದೆ. ಶ್ರೀನಗರದ ಆಸ್ಪತ್ರೆಗೆ ಭೇಟಿ ನೀಡಿರುವ ಅವರು ಶಿವಮೊಗ್ಗ ಮೂಲದ ಮಂಜುನಾಥ್ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, 'ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.
'ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ' ಎಂದು ತಿಳಿಸಿದ್ದಾರೆ.
'ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ' ಎಂದು ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications