ಸೆನ್ಸಾರ್ ಮಂಡಳಿ ಅಧ್ಯಕ್ಷ ನಿಹಲಾನಿಗೆ ಶೀಘ್ರವೇ ಕೊಕ್?

ಕೇಂದ್ರೀಯ ಸೆನ್ಸಾರ್ ಮಂಡಳಿ ಮುಖ್ಯಸ್ಥ ಪಹಲಾಜ್ ನಿಹಲಾನಿ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ನವದೆಹಲಿ, ಜುಲೈ 25: ಅಧಿಕಾರ ವಹಿಸಿಕೊಂಡಾಗಿನಿಂದಲೂ ಒಂದಿಲ್ಲೊಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿರುವ ಕೇಂದ್ರೀಯ ಸೆನ್ಸಾರ್ ಮಂಡಳಿ ಅಧ್ಯಕ್ಷ ಪಹಲಾಜ್ ನಿಹಲಾನಿ ಅವರನ್ನು ಆ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಕೇಂದ್ರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ಅವರನ್ನು ಸೆನ್ಸಾರ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ನಿರ್ಧರಿಸಿದೆ. ಜುಲೈ 28ರಂದು ತಿರುವಂತಪುರದಲ್ಲಿ ನಡೆಯಲಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

Pahlaj Nihalani may lose his job; Which Bollywood biggie will replace him?

ಏತನ್ಮಧ್ಯೆ, ನಿಹಲಾನಿ ಅವರು ಪದಚ್ಯುತಗೊಂಡರೆ, ಅವರ ಸ್ಥಾನಕ್ಕೆ ಯಾರು ನೇಮಕಗೊಳ್ಳಲಿದ್ದಾರೆಂಬ ಕುತೂಹಲವೂ ಗರಿಗೆದರಿದೆ. ಒಂದು ವೇಳೆ, ನಿಹಲಾನಿ ಅವರನ್ನು ಸೆನ್ಸಾರ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ, ಅವರ ಜಾಗಕ್ಕೆ ಬಾಲಿವುಡ್ ನಿರ್ದೇಶಕರಾದ ಮಧುರ್ ಭಂಡಾರ್ಕರ್ ಅಥವಾ ಪ್ರಕಾಶ್ ಝಾ ಅವರನ್ನು ನೇಮಿಸಬಹುದು ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+