ಪಾಕ್ ಮೂಲದ ಉಗ್ರ ಸಂಘಟನೆಗಳ ವಿರುದ್ಧ ಕಠಿಣ ಕ್ರಮಕ್ಕೆ 'ಬ್ರಿಕ್ಸ್' ನಿರ್ಣಯ

ಕ್ಸಿಯಾಮೆನ್, ಸೆಪ್ಟೆಂಬರ್ 4: ಚೀನಾದ ಕ್ಸಿಯಾಮೆನ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್‌ ದೇಶಗಳ ಸಮಾವೇಶದಲ್ಲಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸೇರಿದಂತೆ ವಿವಿಧ ಭಯೋತ್ಪಾದನಾ ಸಂಘಟನೆಗಳ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ.

ಇದೇ ಮೊದಲಬಾರಿಗೆ ಬ್ರಿಕ್ಸ್ ಸಮಾವೇಶದಲ್ಲಿ ಪಾಕಿಸ್ತಾನ ಮೂಲದ ಲಷ್ಕರ್‌ ಎ ತಯ್ಯಬಾ, ಜೈಷ್‌ ಎ ಮೊಹಮ್ಮದ್‌, ತೆಹ್ರಿಕ್ ಇ ತಾಲಿಬಾನ್ ಪಾಕಿಸ್ತಾನ್ ಹಾಗೂ ಕುಖ್ಯಾತ ಉಗ್ರ ಸಂಘಟನೆ ಐಸಿಸ್ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ.

Pakistan based terror groups named in BRICS declaration

ಉಗ್ರ ಸಂಘಟನೆ ರಚಿಸುವ ಮತ್ತು ಬೆಂಬಲಿಸುವವರ ಮೇಲೆ ಕ್ರಮ ಕೈಗೊಳ್ಳುವ ನಿರ್ಣಯವನ್ನೂ ಸಮಾವೇಶದಲ್ಲಿ ತೆಗೆದುಕೊಳ್ಳಲಾಗಿದೆ.

ಬ್ರಿಕ್ಸ್ ವಾಣಿಜ್ಯ ಸಮಾವೇಶಕ್ಕೂ ಮೊದಲು, ಪಾಕಿಸ್ತಾನ ವಿಚಾರವನ್ನು ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪ ಮಾಡಬಾರದು ಎಂದು ಚೀನಾ ಹೇಳಿತ್ತು. ಪಾಕಿಸ್ತಾನ ವಿಚಾರ ಪ್ರಸ್ತಾಪಿಸಲು ಇದು ಸೂಕ್ತ ವೇದಿಕೆಯಲ್ಲ ಎಂದು ಚೀನಾ ವಕ್ತಾರರು ಹೇಳಿದ್ದರು. ಆದರೆ ಇದೀಗ ಚೀನಾ ಭಾರತಕ್ಕೆ ಬೆಂಬಲ ಸೂಚಿಸಿದ್ದು, ಸಮ್ಮೇಳನದಲ್ಲಿ ಉಗ್ರ ಸಂಘಟನೆಗಳ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ.

ಉಗ್ರ ಸಂಘಟನೆಗಳಿಂದ ಅಶಾಂತಿ ಹೆಚ್ಚಾಗುತ್ತಿದೆ. ಇದು ಬ್ರಿಕ್ಸ್‌ ರಾಷ್ಟ್ರಗಳ ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗುತ್ತಿದೆ. ಈ ಉಗ್ರ ಸಂಘಟನೆಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು ಎಂದು ಚೀನಾ, ಭಾರತ, ಬ್ರೆಜಿಲ್, ದಕ್ಷಿಣ ಆಫ್ರಿಕಾ ಮತ್ತು ರಷ್ಯಾದ ಅಧ್ಯಕ್ಷರು ನಿರ್ಣಯ ತೆಗೆದುಕೊಂಡಿದ್ದಾರೆ.

ಇನ್ನು 43 ಪುಟಗಳ 'ಕ್ಷಿಯಮೆನ್ ಡಿಕ್ಲರೇಷನ್' (ಕ್ಷಿಯಮೆನ್ ನಿರ್ಣಯ)ದಲ್ಲಿ ಪ್ರಮುಖವಾಗಿ ತಕ್ಷಣ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಹಿಂಸೆಗೆ ಕೊನೆ ಹಾಡಬೇಕು ಎಂಬ ತೀರ್ಮಾನಕ್ಕೆ ಬರಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+