ಕದನ ವಿರಾಮಕ್ಕೆ ಒಪ್ಪಿದ್ದೇವೆ: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

ಭಾರತ ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾದ ಬೆನ್ನಲ್ಲೇ ಎರಡೂ ದೇಶಗಳ ನಡುವೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಯುದ್ಧದ ತೀವ್ರತೆ ಹೆಚ್ಚಾಗುತ್ತಿದ್ದ ಸಂದರ್ಭದಲ್ಲೇ ಅಮೆರಿಕ ಮಧ್ಯಪ್ರವೇಶ ಮಾಡಿದ್ದು ಎರಡೂ ದೇಶಗಳ ನಡುವೆ ಮಾತುಕತೆ ನಡೆಸಿದ್ದು ಕದನ ವಿರಾಮ ಘೋಷಣೆ ಮಾಡಲಾಗಿದೆ. ಶನಿವಾರ ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಗೆ ಬರಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ದೃಢಪಡಿಸಿದ್ದಾರೆ.

ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ಬೆನ್ನಲ್ಲೇ ಪಾಕಿಸ್ತಾನ ಭಾರತವನ್ನು ಸಂಪರ್ಕಿಸಿದ್ದು ಎರಡೂ ದೇಶಗಳು ಮಾತುಕತೆ ನಡೆಸಿ ಕದನ ವಿರಾಮಕ್ಕೆ ಒಪ್ಪಿಕೊಂಡವು ಎಂದು ಸರ್ಕಾರ ಶನಿವಾರ ಅಧಿಕೃತ ಮಾಹಿತಿ ನೀಡಿದೆ.

Pakistan indian dgmo ceasefire agreement effective saturday

ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಶನಿವಾರ ಮಧ್ಯಾಹ್ನ 3.30 ಕ್ಕೆ (3.30) ಭಾರತದ ಡಿಜಿಎಂಒ ಅವರಿಗೆ ಕರೆ ಮಾಡಿದರು. ಭೂಮಿ, ಗಾಳಿ ಮತ್ತು ಸಮುದ್ರದಲ್ಲಿ ಎರಡೂ ಕಡೆಯವರು ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಸಂಜೆ 5 ರಿಂದ ಜಾರಿಗೆ ಬರುವಂತೆ ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಯಿತು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದರು.

ಕದನ ವಿರಾಮ ಒಪ್ಪಂದವನ್ನು ಘೋಷಿಸುವ ಸಂಕ್ಷಿಪ್ತ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ಕದನ ವಿರಾಮ ಜಾರಿಗೆ ತರಲು ಎರಡೂ ಕಡೆಯಿಂದಲೂ ಸೂಚನೆಗಳನ್ನು ನೀಡಲಾಗಿದೆ. ಮೇ 12 ರಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಭಾರತವು ಕದನ ವಿರಾಮ ಮತ್ತು ಮಾತುಕತೆಯ ವಿವರಗಳನ್ನು ದೃಢಪಡಿಸುವ ಕೆಲವೇ ನಿಮಿಷಗಳ ಮೊದಲು, ಅಮೆರಿಕ ಅಧ್ಯಕ್ಷ ಟ್ರಂಪ್ ಇದು ಉಭಯ ರಾಷ್ಟ್ರಗಳ ನಡುವಿನ ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು ಕದನ ವಿರಾಮ ಘೋಷಣೆ ಮಾಡಲು ಒಪ್ಪಿಕೊಂಡಿವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+