ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದೊಂದಿಗೆ ಪಾಕ್‌ ಉತ್ತಮ ಬಾಂಧವ್ಯ ಬಯಸುತ್ತಿದೆ; ಮೋದಿಗೆ ಪಾಕ್‌ ಪ್ರಧಾನಿ ಪತ್ರ

|
Google Oneindia Kannada News

ನವದೆಹಲಿ, ಮಾರ್ಚ್ 30: ಪಾಕಿಸ್ತಾನ ಹಾಗೂ ಭಾರತದ ನಡುವಿನ ಎಲ್ಲಾ ಸಮಸ್ಯೆಗಳನ್ನು, ಬಹುಮುಖ್ಯವಾಗಿ ಜಮ್ಮು ಹಾಗೂ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಲು ರಚನಾತ್ಮಕ ಆಧಾರಿತ ಸಂವಾದಕ್ಕೆ ಶಕ್ತವಾದ ವಾತಾವರಣ ನಿರ್ಮಿಸಬೇಕಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

"ಪಾಕಿಸ್ತಾನ ದಿನಕ್ಕೆ ಶುಭಾಶಯ ಕೋರಿ ಪತ್ರ ಬರೆದಿದ್ದಕ್ಕೆ ಧನ್ಯವಾದ. ಸ್ವತಂತ್ರ್ಯ, ಸಾರ್ವಭೌಮ ರಾಜ್ಯ ಸೃಷ್ಟಿಯಲ್ಲಿ ನಮ್ಮ ದೇಶದ ಸಂಸ್ಥಾಪಕರಿಗೆ ಗೌರವ ಸಲ್ಲಿಸಿ ಪಾಕ್ ಜನರು ಈ ದಿನವನ್ನು ಸ್ಮರಿಸುತ್ತಾರೆ" ಎಂದು ಖಾನ್ ಪತ್ರದಲ್ಲಿ ವಿವರಿಸಿದ್ದಾರೆ.

ಪಾಕ್ ರಾಷ್ಟ್ರೀಯ ದಿನಕ್ಕೆ ಶುಭ ಕೋರಿ ಇಮ್ರಾನ್‌ ಖಾನ್‌ಗೆ ಮೋದಿ ಪತ್ರಪಾಕ್ ರಾಷ್ಟ್ರೀಯ ದಿನಕ್ಕೆ ಶುಭ ಕೋರಿ ಇಮ್ರಾನ್‌ ಖಾನ್‌ಗೆ ಮೋದಿ ಪತ್ರ

ಇದರೊಂದಿಗೆ, ಪಾಕಿಸ್ತಾನದ ಜನರು ಭಾರತ ಸೇರಿದಂತೆ ಎಲ್ಲಾ ನೆರೆಹೊರೆಯ ರಾಷ್ಟ್ರಗಳೊಂದಿಗೆ ಶಾಂತಿಯುತ, ಸಹಕಾರಿ ಸಂಬಂಧವನ್ನು ಬಯಸುತ್ತಾರೆ. ಹೀಗಾಗಿ ಪಾಕಿಸ್ತಾನ-ಭಾರತ ನಡುವಿನ ಎಲ್ಲಾ ಸಮಸ್ಯೆಗಳನ್ನು, ಅದರಲ್ಲೂ ಜಮ್ಮು ಕಾಶ್ಮೀರ ವಿವಾದವನ್ನು ಬಗೆಹರಿಸಿದರೆ ದಕ್ಷಿಣ ಏಷ್ಯಾದಲ್ಲಿ ಶಾಂತಿ ಕಾಪಾಡಿಕೊಳ್ಳಲು ನೆರವಾಗುತ್ತದೆ ಎಂಬುದನ್ನು ನಾವು ಒಪ್ಪಿದ್ದೇವೆ. ಸಂವಾದಕ್ಕೆ ಸೂಕ್ತ ವೇದಿಕೆ ಹಾಗೂ ಶಕ್ತ ವಾತಾವರಣ ನಿರ್ಮಾಣವಾಗಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Pakistan PM Imran Khan Letter To PM Modi

ಇದೇ ಸಂದರ್ಭ ಕೊರೊನಾ ವಿರುದ್ಧ ಭಾರತ ಹೋರಾಡುತ್ತಿರುವುದರ ರೀತಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದೇ ಮಾರ್ಚ್ 23ರಂದು ನರೇಂದ್ರ ಮೋದಿಯವರು ರಾಷ್ಟ್ರೀಯ ದಿನದ ಸಲುವಾಗಿ ಪಾಕ್‌ಗೆ ಪತ್ರ ಬರೆದಿದ್ದರು. ಪಾಕಿಸ್ತಾನದೊಂದಿಗೆ ಭಾರತವು 'ಹೃತ್ಪೂರ್ವಕ ಬಾಂಧವ್ಯ' ಹೊಂದಲು ಭಾರತ ಬಯಸಿದೆ. ಆದರೆ ಅದು ಸಾಧ್ಯವಾಗಲು ಭಯೋತ್ಪಾದನೆ ರಹಿತವಾದ 'ವಿಶ್ವಾಸಾರ್ಹ ಪರಿಸರ' ಬಹಳ ಅಗತ್ಯವಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

English summary
Pakistan Prime Minister Imran Khan on Tuesday wrote letter to Prime Minister Narendra Modi saying creation of an "enabling environment" is imperative for a constructive dialogue to resolve all outstanding issues between Pakistan and India, in particular the Jammu and Kashmir issue
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X