ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀನಗರದಲ್ಲಿ ಉಗ್ರರ ದಾಳಿಗೆ ಸಿಆರ್ ಪಿಆಫ್ ಯೋಧ ಬಲಿ

|
Google Oneindia Kannada News

ಜಮ್ಮು, ಆಗಸ್ಟ್ 15: ಶ್ರೀನಗರದಲ್ಲಿ ಉಗ್ರರ ದಾಳಿಗೆ ಸಿಆರ್ ಪಿಆಫ್ ಯೋಧನೊಬ್ಬ ಮೃತಪಟ್ಟಿದ್ದಾನೆ. ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಸಿಆರ್ ಪಿಆಫ್ ಯೋಧರು ಗಾಯಗೊಂಡಿದ್ದು, ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ.

ದೇಶದ ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.

ಪೂಂಛ್ ಜಿಲ್ಲೆಯ ಶಾಫು ಕಂಡಿ ಪ್ರದೇಶದಲ್ಲಿ ಪಾಕ್ ಸೇನೆ ಗುಂಡು ಹಾಗೂ ಶೆಲ್ ದಾಳಿ ನಡೆಸಿದೆ. ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಸಣ್ಣ ಶಸ್ತ್ರಾಸ್ತ್ರಗಳು ಹಾಗೂ ಆಟೊಮೆಟಿಕ್ ಗಳನ್ನು ಬಳಸಿ ಪಾಕ್ ಸೇನೆ ದಾಳಿ ನಡೆಸಿದೆ. ಭಾರತೀಯ ಸೇನೆ ಯೋಧರು ಸಹ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಸೇನೆ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ತಿಳಿಸಿದ್ದಾರೆ.[ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ : ಮೋದಿ]

Pakistan unprovoked firing in Poonch, Indian forces retaliate

ಪಾಕಿಸ್ತಾನದ ಭಾರಿ ಶೆಲ್ಲಿಂಗ್ ಹಾಗೂ ಗುಂಡಿನ ದಾಳಿಗೆ 50 ವರ್ಷದ ಕಾಸಂ ಜಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಶೆಲ್ ತಗುಲಿದ್ದು, ಪೂಂಛ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತದ ಆರು ಹಳ್ಳಿಗಳು ಹಾಗೂ ಶಾಪೂರ್, ಕಸ್ಬಾ ಹಾಗೂ ಗಾತ್ರಿಯನ್ ನಲ್ಲಿರುವ ಗಡಿ ಔಟ್ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆಯು ದಾಳಿ ನಡೆಸಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ. ಪಾಕ್ ಸೇನೆಯ ಶೆಲ್ಲಿಂಗ್ ಹಾಗೂ ಗುಂಡಿನ ದಾಳಿ ಮುಂದುವರಿದಿದೆ. ಭಾರತ ಸೇನೆಯು ಪ್ರತಿದಾಳಿ ನಡೆಸಿದೆ.[#NationSalutesArmy ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗ್ತಿರೋದು ಯಾಕೆ?]

ಅಮರನಾಥ್ ಯಾತ್ರಿಕರ ಮೇಲೆ ದಾಳಿ:
ಮೂವರು ನಡೆಸಿದ ಗ್ರೆನೇಡ್ ದಾಳಿಗೆ ದೇವಾಲಯದ ಸಮೀಪವೇ 11 ಮಂದಿ ಅಮರನಾಥ್ ಯಾತ್ರಿಗಳು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಾಹನದಲ್ಲಿ ತಪ್ಪಿಸಿಕೊಂಡು ಹೋಗಲು ಯತ್ನಿಸುತ್ತಿದ್ದ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪ್ರತಿ ವರ್ಷ ಆಗಸ್ಟ್ 14-15ರಂದು ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸುತ್ತಿದೆ. 1990ರ ದಶಕದಿಂದಲೂ ಈ ರೀತಿ ದಾಳಿ ನಡೆಸುತ್ತಿದೆ.

English summary
Ahead of the 70th Independence Day celebrations in the country, Unprovoked firing at Indian positions near the Line of Control by Pakistani troops.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X