ಶಬರಿಮಲೆ ಅಯ್ಯಪ್ಪಸ್ವಾಮಿ ಹುಂಡಿಯಲ್ಲಿ ಪಾಕಿಸ್ತಾನದ ನೋಟು ಪತ್ತೆ!
ತಿರುವನಂತಪುರಂ, ಜುಲೈ 07 : ಇಲ್ಲಿನ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಹುಂಡಿಯಲ್ಲಿ ಪಾಕಿಸ್ತಾನದ 20 ರು. ಮುಖ ಬೆಲೆಯ ನೋಟೊಂದು ಪತ್ತೆಯಾಗಿ ಅಚ್ಚರಿ ಮೂಡಿಸಿದೆ.
ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಹುಂಡಿಯಲ್ಲಿ ಬೇರೆ-ಬೇರೆ ದೇಶಗಳ ನೋಟು ಪತ್ತೆಯಾಗುವುದು ಸಾಮಾನ್ಯವಾದರೂ, ಇದು ಪಾಕಿಸ್ತಾನಕ್ಕೆ ಸೇರಿದ ನೋಟಾದ ಕಾರಣ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರೋ ಕಿಡಿಗೇಡಿಗಳು ಬೇಕಂತಲೇ ಈ ಕೃತ್ಯ ಎಸಗಿದ್ದರೂ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರಾದರೂ ಪ್ರಕರಣವನ್ನು ಕೂಲಂಕಶವಾಗಿ ತನಿಖೆ ಆರಂಭಿಸಿದ್ದಾರೆ.












Click it and Unblock the Notifications