ಪ್ಯಾನ್, ಆಧಾರ್ ಜೋಡಣೆಯ ಗಡುವು ಮತ್ತಷ್ಟು ವಿಸ್ತರಣೆ
ನವದೆಹಲಿ, ಜೂನ್ 24 : ಪ್ಯಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂದು ಕೇಂದ್ರ ಸರ್ಕಾರ ಹೇಳಿತ್ತು. ಜೋಡಣೆ ಮಾಡಲು ಇದ್ದ ಗಡುವನ್ನು ಸರ್ಕಾರ 2021ರ ಮಾರ್ಚ್ 31ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
Recommended Video
ಪ್ಯಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಲು 2020ರ ಮಾರ್ಚ್ 31ರ ಗಡುವು ನೀಡಲಾಗಿತ್ತು. ಬಳಿಕ ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ಅದನ್ನು ಜೂನ್ 30ರ ತನಕ ವಿಸ್ತರಣೆ ಮಾಡಲಾಗಿತ್ತು.
ಬುಧವಾರ ಕೇಂದ್ರ ಸರ್ಕಾರ 2021ರ ಮಾರ್ಚ್ 31ರ ತನಕ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡಲು ಗಡುವು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಹಲವು ಬಾರಿ ಗಡುವು ವಿಸ್ತರಣೆಯಾಗಿತ್ತು. ಈ ಇನ್ನೂ ಹೆಚ್ಚು ಸಮಯವನ್ನು ನೀಡಿ ಆದೇಶಿಸಲಾಗಿದೆ.

ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿತ್ತು. 2020ರ ಜನವರಿ ವರೆಗಿನ ಅಂಕಿ ಅಂಶಗಳಂತೆ 30.75 ಕೋಟಿಗೂ ಹೆಚ್ಚು ಜನರು ಪ್ಯಾನ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಿದ್ದಾರೆ.
ಆದಾಯ ತೆರಿಗೆ ಇ-ಫೈಲಿಂಗ್ ವೆಬ್‌ಸೈಟ್‌ನಲ್ಲಿ ಜನರು ಬಳಕೆದಾರರಾಗಿ ಹೆಸರು ನೋಂದಣಿ ಮಾಡಿಸಿದ್ದರೆ ಆಧಾರ್ ಮತ್ತು ಪ್ಯಾನ್ ಲಿಂಕ್ ಆಗಿರುತ್ತದೆ. ನೋಂದಣಿ ಆಗಿರದಿದ್ದರೆ ಅದೇ ವೆಬ್‌ಸೈಟ್‌ನಲ್ಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಜೋಡಣೆ ಮಾಡಬಹುದಾಗಿದೆ.












Click it and Unblock the Notifications