ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ಯಾರಿಸ್ ಉಗ್ರರ ದಾಳಿ : ಭಾರತೀಯರು ಸುರಕ್ಷಿತ

|
Google Oneindia Kannada News

ನವದೆಹಲಿ, ನವೆಂಬರ್ 14 : ಪ್ಯಾರಿಸ್‌ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ. ಪ್ರಾಥಮಿಕವಾಗಿ ಲಭ್ಯವಾದ ಮಾಹಿತಿಗಳ ಪ್ರಕಾರ ಯಾವುದೇ ಭಾರತೀಯರ ಪ್ರಾಣಕ್ಕೆ ಹಾನಿಯಾಗಿಲ್ಲ ಎಂದು ಭಾರತದ ರಾಜತಾಂತ್ರಿಕ ಅಧಿಕಾರಿಗಳು ಟ್ವಿಟ್ ಮಾಡಿದ್ದಾರೆ.

ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 150 ಜನರು ಸಾವನ್ನಪ್ಪಿದ್ದಾರೆ. ಪ್ಯಾರಿಸ್ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ಭಾರತೀಯ ರಾಯಭಾರಿ ಮೋಹನ್ ಕುಮಾರ್ ಟ್ವಿಟ್ ಮಾಡಿದ್ದಾರೆ. [ಪ್ಯಾರಿಸ್ ದಾಳಿ ಚಿತ್ರಗಳು]

paris

ಇದುವರೆಗೆ ಸಿಕ್ಕ ಮಾಹಿತಿಗಳ ಪ್ರಕಾರ ಉಗ್ರರ ದಾಳಿಯಲ್ಲಿ ಯಾವುದೇ ಭಾರತೀಯರ ಪ್ರಾಣಕ್ಕೆ ಹಾನಿಯಾಗಿಲ್ಲ. ನಾವು ಸಹಾಯವಾಣಿ ಆರಂಭಿಸಿದ್ದೇವೆ. ಸಾಮಾಜಿಕ ಜಾಲತಾಣಗಳ ಮೂಲಕವೂ ಭಾರತೀಯ ಸಮುದಾಯದವರನ್ನು ತಲುಪಲು ಪ್ರಯತ್ನಿಸುತ್ತಿದ್ದೇವೆ ಎಂದು ರಾಜತಾಂತ್ರಿಕ ಅಧಿಕಾರಿಗಳು ಹೇಳಿದ್ದಾರೆ. [ಪ್ಯಾರಿಸ್ ದಾಳಿ ಹಿಂದಿರುವವರು ಯಾರು?]

150 ಸಾವು : ಶುಕ್ರವಾರ ತಡರಾತ್ರಿ ಪ್ಯಾರಿಸ್‌ನಲ್ಲಿ ಉಗ್ರರ ದಾಳಿ ನಡೆದಿದೆ. ಸ್ಟೇಡೆ ಡಿ ಫ್ರಾನ್ಸ್ ಕ್ರೀಡಾಂಗಣದಲ್ಲಿ ಫ್ರಾನ್ಸ್ ಮತ್ತು ಜರ್ಮನಿ ನಡುವೆ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ 7 ಬಂದೂಕುಧಾರಿಗಳು ಕ್ರೀಡಾಂಗಣದ ಹೊರಗೆ ಬಾಂಬ್ ಸ್ಫೋಟಿಸಿದ್ದಾರೆ. ನಂತರ ಹತ್ತಿರದ ರೆಸ್ಟೋರೆಂಟ್‌ಗೆ ನುಗ್ಗಿ ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಬಟಾಕ್ಲಾನ್ ಆರ್ಟ್ ಸೆಂಟರ್‌ನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆ ದಾಳಿ ನಡೆಸಿದ ಉಗ್ರರು 100ಕ್ಕೂ ಅಧಿಕ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡು, ನಂತರ ಅವರನ್ನು ಕೊಂದು ಹಾಕಿದ್ದಾರೆ. ಈ ದಾಳಿಯಲ್ಲಿ ಇದುವರೆಗೂ 150 ಜನರು ಸಾವನ್ನಪ್ಪಿದ್ದಾರೆ.

English summary
Paris attack : After a terror attack in Paris Indian ambassador Mohan Kumar said, We hope all Indians are safe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X