Budget 2025: ಕೇಂದ್ರ ಬಜೆಟ್ 2025 ಮಂಡನೆಗೆ ದಿನಾಂಕ ಘೋಷಣೆ

ನವದೆಹಲಿ, ಜನವರಿ 18: ಕೇಂದ್ರ ಬಜೆಟ್ 2025-26ರ ಮಂಡನೆಗೆ ದಿನಾಂಕ ಘೋಷಣೆಯಾಗಿದೆ. 2024ರ ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಂಡನೆಯಾಗುತ್ತಿರುವ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಆದ್ದರಿಂದ ಬಜೆಟ್‌ ಮೇಲೆ ಜನರು ಸಹ ಅಪಾರವಾದ ನಿರೀಕ್ಷೆಯನ್ನು ಹೊಂದಿದ್ದಾರೆ.

ಜನವರಿ 31ರಂದು ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 1ರ ಶನಿವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025-26 ಮಂಡಿಸಲಿದ್ದಾರೆ.

Parliament Budget Session 2025 From January 31st

ಬಜೆಟ್ ಅಧಿವೇಶನದ ದಿನಾಂಕಗಳು: ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ಬಜೆಟ್ ಅಧಿವೇಶನದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜನವರಿ 31ರ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ.

ಫೆಬ್ರವರಿ 1ರ ಶನಿವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ಮೊಲದ ಹಂತದ ಕಲಾಪ 13 ಫೆಬ್ರವರಿ ತನಕ ನಡೆಯಲಿದೆ. ಮಾರ್ಚ್ 10 ರಿಂದ ಏಪ್ರಿಲ್ 4ರ ತನಕ 2ನೇ ಹಂತದ ಕಲಾಪ ನಡೆಯಲಿದೆ.

ಕೇಂದ್ರ ಬಜೆಟ್ 2025-26ಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ವಿವಿಧ ವಲಯಗಳ ಪ್ರತಿನಿಧಿಗಳೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ಸಭೆಯನ್ನು ನಡೆಸುತ್ತಿದ್ದಾರೆ. ವಿವಿಧ ವಲಯಗಳ ನಿರೀಕ್ಷೆಗಳ ಕುರಿತು ಮಾಹಿತಿಯನ್ನು ಸಂಗ್ರಹ ಮಾಡುತ್ತಿದ್ದಾರೆ.

ಹಣಕಾಸು ಬಜೆಟ್‌ ಜೊತೆಗೆ ರೈಲ್ವೆ ಬಜೆಟ್‌ ಸೇರಿಸಲಾಗಿದೆ. ಆದ್ದರಿಂದ ರೈಲ್ವೆ ಇಲಾಖೆಯ ವಿವಿಧ ಯೋಜನೆಯ ಘೋಷಣೆಗಳು ಸಾಮಾನ್ಯ ಬಜೆಟ್‌ನಲ್ಲಿ ಸೇರಲಿದೆ. ವಿವಿಧ ಕಾರ್ಮಿಕ ಸಂಘಟನೆಗಳು ಸಹ ನಿರ್ಮಲಾ ಸೀತಾರಾಮನ್ ಅವರಿಗೆ ಬಜೆಟ್‌ನ ಬೇಡಿಕೆಗಳ ಕುರಿತು ಮನವಿಗಳನ್ನು ಸಲ್ಲಿಕೆ ಮಾಡಿದ್ದಾರೆ.

ನರೇಂದ್ರ ಮೋದಿ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಇದಾಗಿದೆ. ಆದ್ದರಿಂದ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. 2024ರ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿರುವ ಭರವಸೆಗಳನ್ನು ಈಡೇರಿಸಲು ಬಜೆಟ್‌ನಲ್ಲಿ ಅನುದಾನ ಹಂಚಿಕೆಯಾಗುವ ನಿರೀಕ್ಷೆ ಇದೆ.

ಎನ್‌ಡಿಎ 3.0 ಸರ್ಕಾರ ವಿವಿಧ ಪಕ್ಷಗಳ ಬೆಂಬಲದೊಂದಿಗೆ ರಚನೆಯಾಗಿದೆ. ಆದ್ದರಿಂದ ವಿವಿಧ ಪಕ್ಷಗಳು ಆಡಳಿತವನ್ನು ಹೊಂದಿರುವ ರಾಜ್ಯಗಳಿಗೆ ಬಜೆಟ್‌ನಲ್ಲಿ ಬಂಪರ್ ಕೊಡುಗೆಯನ್ನು ನಿರೀಕ್ಷೆ ಮಾಡಲಾಗಿದೆ. ಆದಾಯ ತೆರಿಗೆಯಲ್ಲಿ ಯಾವ ಬದಲಾವಣೆ ಮಾಡಲಾಗುತ್ತದೆ? ಎಂದು ವೇತನ ಪಡೆಯುವ ಜನರು ಕಾದು ಕುಳಿತಿದ್ದಾರೆ.

ಮೂಲ ಸೌಕರ್ಯ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷೆ ಮಾಡಲಾಗಿದೆ. ಮೋದಿ ಸರ್ಕಾರ ಬಜೆಟ್‌ನಲ್ಲಿ ಹೊಸ ಹೊಸ ಘೋಷಣೆಗಳನ್ನು ಮಾಡುವ ಸಂಪ್ರದಾಯವನ್ನು ಕಡಿಮೆ ಮಾಡಿದೆ. ಸಚಿವಾಲಯಗಳಿಗೆ ಅನುದಾನ ಹಂಚಿಕೆ ಮಾಡುತ್ತದೆ. ಆದ್ದರಿಂದ ಬಜೆಟ್‌ನಲ್ಲಿ ಹೊಸ ಘೋಷಣೆಗಳ ನಿರೀಕ್ಷೆ ಮಾಡಿದರೆ ನಿರಾಸೆ ಖಂಡಿತ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+