ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

Parliament Monsoon Session 2021 Live : ಉಭಯ ಕಲಾಪದಲ್ಲಿ ಗದ್ದಲ ಗಲಾಟೆ

|
Google Oneindia Kannada News

ನವದೆಹಲಿ, ಜುಲೈ 23: ಜುಲೈ 19ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಕಲಾಪ ಗದ್ದಲ ಗಲಾಟೆಗೆ ಬಲಿಯಾಗಿದೆ. ದೇಶದಲ್ಲಿನ ಪ್ರಮುಖ ಸಮಸ್ಯೆಗಳಾದ ಇಂಧನ ಬೆಲೆ ಏರಿಕೆ, ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಿರ್ವಹಣೆ, ರೈತರ ಪ್ರತಿಭಟನೆ, ಲಸಿಕೆಯ ಕೊರತೆಗಿಂತ ಪೆಗಾಸಸ್ ಬೇಹುಗಾರಿ ವಿಷಯ ಉಭಯ ಸದನಗಳಲ್ಲಿ ಸದ್ದು ಗದ್ದಲಕ್ಕೆ ಕಾರಣವಾಗಿದೆ.

ಜುಲೈ 19ರಿಂದ 17ನೇ ಲೋಕಸಭೆಯ ಮುಂಗಾರು ಅಧಿವೇಶನ ಆರಂಭಗೊಂಡಿದ್ದು, ಆಗಸ್ಟ್‌ 13ರವರೆಗೂ ನಡೆಯಲಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಂತರ ನಡೆಸಲಾಗುತ್ತಿರುವ ಮೊದಲ ಮುಂಗಾರು ಅಧಿವೇಶನವಾಗಿದೆ.

ಪೆಗಾಸಸ್ ಬೇಹುಗಾರಿಕೆ ವರದಿ, ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಿರ್ವಹಣೆ, ಲಸಿಕೆ ಪೂರೈಕೆ, ಇಂಧನ ಬೆಲೆ ಏರಿಕೆ, ವಿವಾದಿತ ಕೃಷಿ ಕಾಯ್ದೆಗಳ ರದ್ದು ವಿಚಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತೀವ್ರ ಚರ್ಚೆಯ ವಿಷಯವಾಗಿವೆ. ಮುಂಗಾರು ಅಧಿವೇಶನದ ಕ್ಷಣಕ್ಷಣದ ಮಾಹಿತಿಯನ್ನು ಇಲ್ಲಿ ಓದಿ.

Parliament Monsoon Session 2021 Live Updates and Highlights in kannada

Newest FirstOldest First
4:55 PM, 28 Jul

ಸಂಸತ್ತಿನಲ್ಲಿ ಅಸ್ವಸ್ಥಗೊಂಡ ಟಿಎಂಸಿ ಸಂಸದ ಶಾಂತಾ ಛೆಟ್ರಿ ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
5:05 PM, 23 Jul

ರಾಜ್ಯಸಭೆಯಲ್ಲಿ ಪೆಗಾಸಸ್ ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಗದ್ದಲ ಹೆಚ್ಚಾದ ಹಿನ್ನೆಲೆ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
3:50 PM, 23 Jul

ಪಟ್ಟಿಯಲ್ಲಿ ಕಾಣಿಸಿಕೊಂಡ ಜನರ ಫೋನ್‌ಗಳನ್ನು ಟ್ಯಾಪ್ ಮಾಡುವುದು ಅನಿವಾರ್ಯವಲ್ಲ ಎಂದು 'ಪೆಗಾಸಸ್ ಪ್ರಾಜೆಕ್ಟ್' ವರದಿಯನ್ನು ಪ್ರಕಟಿಸಿದವರೇ ಹೇಳುತ್ತಿದ್ದಾರೆ. ರಾಹುಲ್ ಗಾಂಧಿಯನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ ಮತ್ತು ಅವರ ಆರೋಪಗಳಿಗೆ ಯಾವುದೇ ವಾಸ್ತವಿಕ ಆಧಾರಗಳಿಲ್ಲ: ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ
12:58 PM, 23 Jul

ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.
12:57 PM, 23 Jul

ಮುಂಗಾರುಅಧಿವೇಶನದ ಅಂತ್ಯದವರೆಗೆ ಕಲಾಪಕ್ಕೆ ಹಾಜರಾಗದಂತೆ ಅಮಾನತುಗೊಳಿಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ನಿಮಗೆ ಟಿಎಂಸಿ ಸಂಸದ ಸಂತನು ಸೇನ್) ತಿಳಿದಿರುವಂತೆ, ಸದನದಿಂದ ಹೊರಹೋಗಲು ನಾವು ವಿನಂತಿಸುತ್ತೇವೆ: ರಾಜ್ಯಸಭೆಯ ಉಪ ಸಭಾಪತಿ ಹರಿವಂಶಿ
12:43 PM, 23 Jul

ಕೊರೊನಾವೈರಸ್ ಲಸಿಕೆ ಉತ್ಪಾದಿಸುವ ವಾಣಿಜ್ಯ ಕಂಪನಿಗಳ ಜೊತೆಗೆ ಒಪ್ಪಂದದಲ್ಲಿ ಯಾವುದೇ ರೀತಿ ವಿಳಂಬ ನೀತಿ ಅನುಸರಿಸಿಲ್ಲ. ಲಸಿಕೆ ಪೂರೈಕೆಗೂ ಮೊದಲು ಮುಂಗಡ ಹಣವನ್ನು ಪಾವತಿ ಮಾಡಲಾಗಿದೆ: ಲೋಕಸಭೆಯಲ್ಲಿ ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿಕೆ.
12:41 PM, 23 Jul

ದೇಶದಲ್ಲಿ ಕೊರೊನಾವೈರಸ್ ಲಸಿಕೆ ಖರೀದಿ ಮತ್ತು ಪೂರೈಕೆ ಹಾಗೂ ವಿತರಣೆ ಅಭಿಯಾನಕ್ಕಾಗಿ ಈವರೆಗೂ 9,725.15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ: ಲೋಕಸಭೆಯಲ್ಲಿ ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿಕೆ.
Advertisement
12:39 PM, 23 Jul

ಭಾರತದಲ್ಲಿ 2021ರ ಆಗಸ್ಟ್ ತಿಂಗಳಾಂತ್ಯದ ವೇಳೆಗೆ 135 ಕೋಟಿ ಡೋಸ್ ಲಸಿಕೆಯ ಲಭ್ಯತೆ ಇರಲಿದೆ: ಲೋಕಸಭೆಯಲ್ಲಿ ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿಕೆ.
12:35 PM, 23 Jul

ಕೊರೊನಾವೈರಸ್ ಲಸಿಕೆ ಸರಬರಾಜಿನ ಬಗ್ಗೆ ಫೈಜರ್ ಕಂಪನಿ ಜೊತೆಗೆ ಭಾರತೀಯ ಸರ್ಕಾರವು ಮಾತುಕತೆ ನಡೆಸಿದೆ: ಲೋಕಸಭೆಯಲ್ಲಿ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಪ್ರತಿಕ್ರಿಯೆ.
12:27 PM, 23 Jul

ಪೆಗಾಸಸ್ ಬೇಹುಗಾರಿಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ಕೋಲಾಹಲ ಸೃಷ್ಟಿಯಾದ ಹಿನ್ನೆಲೆ ಜುಲೈ 26ರ ಸೋಮವಾರಕ್ಕೆ ಕಲಾಪವನ್ನು ಮುಂದೂಡಿಕೆ ಮಾಡಲಾಗಿದೆ.
12:24 PM, 23 Jul

ಗುರುವಾರ ಟಿಎಂಸಿ ಸಂಸದ ಸಂತನು ಸೇನ್, ಐಟಿ ಸಚಿವ ಅಶ್ವಿನಿ ವೈಷ್ಣವ್ ಕೈಯಿಂದ ಕಾಗದಗಳನ್ನು ಕಸಿದುಕೊಂಡು ಸದನದಲ್ಲಿ ಹರಿದು ಹಾಕಿದ ಘಟನೆಯ ಕುರಿತು ರಾಜ್ಯಸಭೆಯ ಸದನ ಮುಖಂಡ ಪಿಯೂಷ್ ಗೋಯಲ್ ಮಧ್ಯಾಹ್ನ 12.15ಕ್ಕೆ ವಿರೋಧ ಪಕ್ಷದ ಸಭೆ ನಡೆಸಿದರು.
12:14 PM, 23 Jul

ಮೇಲ್ಮನೆ ಕಲಾಪ ಆರಂಭವಾಗುತ್ತಿದ್ದಂತೆ ಉಪ ಸಭಾಪತಿ ಹರಿವಂಶ್ ಕೂಡಾ ಕಲಾಪದಿಂದ ಹೊರ ನಡೆಯುವಂತೆ ಟಿಎಂಸಿ ಸಂಸದ ಸಂತಾನು ಸೇನ್ ರಿಗೆ ಸೂಚನೆ ನೀಡಿದರು. ಗದ್ದಲ ಗಲಾಟೆ ಹೆಚ್ಚಾದ ಹಿನ್ನೆಲೆ ಮತ್ತೆ ಸದನವನ್ನು ಅರ್ಧಗಂಟೆಗಳ ಕಾಲ ಮುಂದೂಡಲಾಯಿತು.
Advertisement
12:11 PM, 23 Jul

"ಸದನದಲ್ಲಿ ನಡೆದ ಘಟನೆಗಳ ಬಗ್ಗೆ ನನಗೆ ತುಂಬಾ ನೋವಾಗುತ್ತದೆ. ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರ ಕೈಯಲ್ಲಿರುವ ಪತ್ರಗಳನ್ನು ಕಸಿದು ಹರಿದು ಹಾಕುವಷ್ಟು ಕೆಳಮಟ್ಟಕ್ಕೆ ಇಳಿದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಇಂಥ ನಡುವಳಿಕೆಯು ಸಂಸದೀಯ ಪ್ರಜಾಪ್ರಭುತ್ವದ ಮೇಲಿನ ದಾಳಿ ಆಗಿರುತ್ತದೆ," ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.
12:06 PM, 23 Jul

ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತಾನು ಸೇನ್ ರನ್ನು ಅಮಾನತುಗೊಳಿಸಲಾಗಿದೆ. ಆಗಸ್ಟ್ 13ರವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ದೂರ ಇರುವಂತೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಸೂಚನೆ ನೀಡಿದ್ದಾರೆ.
11:39 AM, 23 Jul

ಟಿಎಂಸಿ ಸಂಸದ ದೆರೆಕ್ ಒಬ್ರಿಯನ್ ಗುರುವಾರದ ಘಟನೆ ಬಗ್ಗೆ ರಾಜ್ಯಸಭೆಯಲ್ಲಿ ಉಲ್ಲೇಖಿಸುತ್ತಿದ್ದಂತೆ ಗದ್ದಲ ಗಲಾಟೆ ಶುರುವಾಯಿತು. ಸಂತಾನು ಸೇನ್, ದಯವಿಟ್ಟು ಸದನದಿಂದ ಹೊರ ನಡೆದು, ಸುಗಮವಾಗಿ ಕಲಾಪ ನಡೆಸುವುದಕ್ಕೆ ಅವಕಾಶ ನೀಡಿ ಎಂದು ರಾಜ್ಯಸಭೆ ಸಭಾಪತಿಗಳು ಹೇಳಿದರು. ಮಧ್ಯಾಹ್ನ 12 ಗಂಟೆಗೆ ಸದನವನ್ನು ಮುಂದೂಡಲಾಯಿತು.
11:03 AM, 23 Jul

ಇಸ್ರೇಲ್ ಪೆಗಾಸಸ್ ಅನ್ನು ಒಂದು ಆಯುಧ ಎನ್ನುತ್ತಿದ್ದು, ಆ ಶಸ್ತ್ರಾಸ್ತ್ರವನ್ನು ಭಯೋತ್ಪಾದಕರು ಮತ್ತು ಉಗ್ರರ ವಿರುದ್ಧ ಬಳಸಬೇಕಿದೆ. ಆದರೆ ನಮ್ಮ ಪ್ರಧಾನಮಂತ್ರಿ ಮತ್ತು ಗೃಹ ಸಚಿವರು ಅದೇ ಆಯುಧವನ್ನು ರಾಜ್ಯ ಮತ್ತು ಸಂಸ್ಥೆಗಳ ವಿರುದ್ಧ ಬಳಕೆ ಮಾಡಿಕೊಳ್ಳುತ್ತಿವೆ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ
10:57 AM, 23 Jul

ಪೆಗಾಸಸ್ ಯೋಜನೆ ವಿರುದ್ಧ ಸಂಸತ್ತಿನಲ್ಲಿ ಗಾಂಧಿ ಪ್ರತಿಮೆ ಬಳಿ ಡಿಎಂಕೆ ಮತ್ತು ಶಿವಸೇನೆ ಸಂಸದರ ಪ್ರತಿಭಟನೆ.
4:08 PM, 22 Jul

ಲೋಕಸಭೆ ಅಧಿವೇಶನ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ.
2:09 PM, 22 Jul

ರಾಜ್ಯಸಭೆಯಲ್ಲಿ ಪೆಗಾಸಸ್ ಬೇಹುಗಾರಿಕೆ ವರದಿ ಬಗ್ಗೆ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಮಾತು ಆರಂಭಿಸುತ್ತಿದ್ದಂತೆ ವಿರೋಧ ಪಕ್ಷಗಳ ಸಂಸದರು ಗದ್ದಲ ಸೃಷ್ಟಿಸಿದರು. ಪ್ರತಿಪಕ್ಷಗಳ ಗದ್ದಲ ಗಲಾಟೆ ಹೆಚ್ಚಾದ ಹಿನ್ನೆಲೆ ರಾಜ್ಯಸಭೆ ಕಲಾಪವನ್ನು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು.
2:08 PM, 22 Jul

ಲೋಕಸಭೆಯಲ್ಲಿ ಗದ್ದಲ ಗಲಾಟೆಯಿಂದಾಗಿ ಸಂಜೆ 4 ಗಂಟೆಗೆ ಕಲಾಪ ಮುಂದೂಡಿಕೆ.
1:05 PM, 22 Jul

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಮ್ಮ ಸಹೋದ್ಯೋಗಿ ಸಂಸದರೊಂದಿಗೆ ಸೇರಿಕೊಂಡು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿರುವ ಭಾರತೀಯ ಕ್ರೀಡಾಪಟುಗಳಿಗೆ ಜೈ ಹಿಂದ್ ಘೋಷಣೆ ಮೂಲಕ ವಿಜಯದ ಸಂಕೇತವನ್ನು ತೋರಿಸಿದ್ದಾರೆ.
12:37 PM, 22 Jul

ಸಂಸತ್ ಎದುರಿಗೆ ಕೃಷಿ ಕಾಯ್ದೆ ವಿರುದ್ಧ ಶಿರೋಮಣಿ ಅಕಾಲಿ ದಳ ಸಂಸದರ ಪ್ರತಿಭಟನೆ.
12:31 PM, 22 Jul

ಲೋಕಸಭೆಯಲ್ಲಿ ಗದ್ದಲ ಕೋಲಾಹಲ ಸೃಷ್ಟಿಯಾದ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ.
12:12 PM, 22 Jul

ರಾಜ್ಯಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ.
11:49 AM, 22 Jul

ಕೃಷಿ ಕಾಯ್ದೆಗಳು ರೈತರ ಪರವಾಗಿದ್ದು ಲಾಭದಾಯಕವಾಗಿವೆ. ನಾವು ಈ ಕಾಯ್ದೆಗಳ ಬಗ್ಗೆ ಚರ್ಚಿಸಿದ್ದೇವೆ. ಕಾನೂನಾತ್ಮಕವಾಗಿ ಈ ಕಾಯ್ದೆಗಳಲ್ಲಿ ಲೋಪದೋಷಗಳಿದ್ದರೆ ಅದನ್ನು ಪ್ರಸ್ತಾಪಿಸಲಿ, ಅದರ ಕುರಿತು ಚರ್ಚಿಸೋಣ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್.
11:26 AM, 22 Jul

ಲೋಕಸಭೆಯಲ್ಲಿ ಗದ್ದಲ ಕೋಲಾಹಲ ಸೃಷ್ಟಿಯಾದ ಹಿನ್ನೆಲೆ ಮಧ್ಯಾಹ್ನ 12 ಗಂಟೆಗೆ ಕಲಾಪ ಮುಂದೂಡಿಕೆ.
11:12 AM, 22 Jul

ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಸಂಸತ್ ಎದುರಿನ ಗಾಂಧಿ ಪ್ರತಿಮೆ ಬಳಿ ಪಕ್ಷದ ಸದಸ್ಯರ ಜೊತೆಗೂಡಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರತಿಭಟನೆ.
11:08 AM, 22 Jul

ರಾಜ್ಯಸಭೆಯಲ್ಲಿ ಗದ್ದಲ ಹೆಚ್ಚಾದ ಹಿನ್ನೆಲೆ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಮುಂದೂಡಿಕೆ ಮಾಡಲಾಗಿದೆ.
10:57 AM, 22 Jul

ಕೃಷಿ ಕಾಯ್ದೆಗಳನ್ನು ವಿರೋಧಿಸಿ ನವದೆಹಲಿಯ ಜಂತರ್ ಮಂತರ್ ಬಳಿ ಸಾವಿರಾರು ಸಂಖ್ಯೆಯಲ್ಲಿ ರೈತರಿಂದ ಪ್ರತಿಭಟನೆ.
6:16 PM, 20 Jul

ರಾಜ್ಯಸಭೆ ಕಲಾಪ ಜುಲೈ 22ಕ್ಕೆ ಮುಂದೂಡಿಕೆ.
READ MORE

English summary
Monsoon Session of Parliament 2021 Live Updates in Kannada: The session, slated to conclude on August 13, will have a total of 19 sittings with both houses. Check live updates and highlights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X