Parliament Session: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್‌, ರಾಮ ಮಂದಿರ ಚರ್ಚೆ: ಬಿಜೆಪಿಗೆ ಅಗ್ನಿಪರೀಕ್ಷೆ

Parliament Session: ಇಂದಿನಿಂದ (ಜುಲೈ 20) ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಈ ಬಾರಿಯ ಲೋಕಸಭೆಯ ಮುಂಗಾರು ಅಧಿವೇಶನವು ಹಲವು ಕಾರಣಗಳಿಗೆ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಅದರಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆ, ಅಯೋಧ್ಯೆ ರಾಮ ಮಂದಿರಲ್ಲಿನ ಹುಂಡಿ / ದೇಣಿಗೆ ಕಳ್ಳತನ ಪ್ರಕರಣ ಹಾಗೂ ಸಾಮಾಜಿಕ ಹೋರಾಟಗಾರ ಸೊನಾಮ್ ವಾಂಗ್ಚೂಕ್ ಅವರ ಉಪವಾಸ ಸತ್ಯಾಗ್ರಹ ಸೇರಿದಂತೆ ಹಲವು ವಿಷಯಗಳಲ್ಲಿ ಆಡಳಿತರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಸಂಕಷ್ಟವನ್ನು ತಂದೊಡ್ಡಿದೆ. ಈ ಬಾರಿಯ ಮುಂಗಾರು ಅಧಿವೇಶನವು ಕೇಂದ್ರ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾಗಿದೆ.

ಇಂದಿನಿಂದ ಲೋಕಸಭೆಯ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಭಾರೀ ಕೋಲಾಹಲಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಕಾಕ್ರೋಚ್ ಜನತಾ ಪಾರ್ಟಿಯು ಪಾರ್ಲಿಮೆಂಟ್ ಚಲೋಗೆ ಸಹ ಕರೆ ನೀಡಿದೆ. ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20ರಿಂದ ಆಗಸ್ಟ್ 13ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ 19 ದಿನಗಳ ಕಾಲ ಕಲಾಪ ನಡೆಯಲಿದೆ. ಇನ್ನು ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಐದು ಹೊಸ ಹಾಗೂ 2 ಹಳೆಯ ವಿಧೇಯಕಗಳನ್ನು ಮಂಡಿಸುವುದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ ಎಂದು ಹೇಳಲಾಗಿದೆ. ಅದರಲ್ಲಿ ಮುಖ್ಯವಾಗಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಹಾಗೂ ಇದರ ಆಧಾರದ ಮೇಲೆ ಮಹಿಳಾ ಮೀಸಲಾತಿ ವಿಧೇಯಕವೂ ಮಂಡನೆ ಮಾಡುವ ಸಾಧ್ಯತೆ ಇದೆ. ಈ ವಿಧೇಯಕವನ್ನು ಈಗಾಗಲೇ ಕೇಂದ್ರ ಬಿಜೆಪಿ ಲೋಕಸಭೆಯಲ್ಲಿ ಮಂಡನೆ ಮಾಡಿದ್ದರೂ, ವಿಧೇಯಕಕ್ಕೆ ಸೋಲಾಗಿತ್ತು.

Parliament Session

ಇದೀಗ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷಗಳು ಸೋತ ನಂತರ ಹಾಗೂ ಮತ್ತಷ್ಟು ಸಂಸದರು ಬಿಜೆಪಿಗೆ ಬೆಂಬಲ ನೀಡಿರುವುದರಿಂದಾಗಿ ಮತ್ತೊಮ್ಮೆ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಹಾಗೂ ಇದರ ಆಧಾರದ ಮೇಲೆ ಮಹಿಳಾ ಮೀಸಲಾತಿ ವಿಧೇಯಕವೂ ಮಂಡನೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದೆ.

ಕೇಂದ್ರ ಸರ್ಕಾರಕ್ಕೆ ಭಾರೀ ಸಂಕಷ್ಟ

ಇನ್ನು ಈ ಬಾರಿಯ ಅಧಿವೇಶನವು ಹಲವು ಕಾರಣಗಳಿಗೆ ಮಹತ್ವ ಪಡೆದುಕೊಂಡಿದೆ. ಅಯೋಧ್ಯೆಯಲ್ಲಿ ರಾಮಮಂದಿರ ದೇಣಿಗೆ ಕಳ್ಳತನ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ, ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ಹಾಗೂ ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ವಿಷಯಗಳನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ. ಮುಂದುವರಿದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ, 2026 ಮಂಡಿಸಲಿದ್ದಾರೆ. ವಂದೇ ಮಾತರಂ ಅನ್ನು ಅವಮಾನಿಸುವುದು ಹಾಗೂ ಹಾಡಲು ಅಡ್ಡಿ ಮಾಡುವುದು ಇನ್ಮುಂದೆ ಶಿಕ್ಷಾರ್ಹ ಅಪರಾಧವಾಗಲಿದೆ.

ಮಂಡನೆ ಆಗಲಿರುವ ಪ್ರಮುಖ ವಿಧೇಯಕಗಳು

ಈ ಬಾರಿಯ ಅಧಿವೇಶನದಲ್ಲಿ ಸುಪ್ರೀಂ ಜಡ್ಜ್‌ಗಳ ಸಂಖ್ಯೆ ಹೆಚ್ಚಳ, ಜನನ ಮತ್ತು ಮರಣ ವಿಧೇಯಕ, ವಿದೇಶಿ ದೇಣಿಗೆ ನಿಯಂತ್ರಣ, ಆದಾಯ ತೆರಿಗೆ ತಿದ್ದುಪಡಿ, ರಾಷ್ಟ್ರೀಯ ಗೌರವಕ್ಕೆ ಅವಮಾನ ಹಾಗೂ ಸೂಕ್ಷ್ಮ, ಸಣ್ಣ ಮಧ್ಯಮ ಉದ್ಯಮಗಳ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳು ಇವೆ.

ಸಿಜೆಪಿ ಸಂಸತ್‌ ಚಲೋ ಪ್ರತಿಭಟನೆ

ಇನ್ನು ಕಾಕ್ರೋಚ್ ಜನತಾ ಪಾರ್ಟಿಯು ನೀಟ್ ಪರೀಕ್ಷೆಯಲ್ಲಿನ ಅಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಇಂದು ಸಂಸತ್ ಚಲೋಗೂ ಕರೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+