Get Updates
Get notified of breaking news, exclusive insights, and must-see stories!

ಉದ್ಯೋಗಿಗಳಿಗೆ ಗಿಫ್ಟ್: ತೆರಿಗೆ ರಹಿತ ಗ್ರಾಚ್ಯುಟಿ ಮಿತಿ ಏರಿಕೆ!

ನವದೆಹಲಿ, ಮಾರ್ಚ್ 22: ಗ್ರಾಚ್ಯುಟಿ ತಿದ್ದುಪಡಿ ಮಸೂದೆ 2017ಕ್ಕೆ ಅಂಗೀಕಾರ ಸಿಗುವ ಸಂಸತ್ತಿನಲ್ಲಿ ಗುರುವಾರ(ಮಾರ್ಚ್ 22)ದಂದು ಅಂಗೀಕಾರ ಸಿಕ್ಕಿದೆ. ಇದರಿಂದಾಗಿ ಉದ್ಯೋಗಿಗಳಿಗೆ 20 ಲಕ್ಷ ರೂ.ವರೆಗೂ ತೆರಿಗೆ ಮುಕ್ತ ಗ್ರಾಚ್ಯುಟಿ ಪಡೆಯಲು ಅರ್ಹರಾಗಲಿದ್ದಾರೆ.

ಸದ್ಯ ಐದು ಅಥವಾ ಅದಕ್ಕಿಂತ ಹೆಚ್ಚು ಸೇವಾ ಅವಧಿ ಹೊಂದಿರುವ ಉದ್ಯೋಗಿಗಳು ಉದ್ಯೋಗ ತೊರೆದಾಗ, ನಿವೃತ್ತಿ ಹೊಂದಿದಾಗ 10 ಲಕ್ಷ ರೂ. ವರೆಗೂ ತೆರಿಗೆ ಮುಕ್ತವಾಗಿ ಗ್ರಾಚ್ಯುಟಿ ಗಳಿಸಬಹುದಾಗಿತ್ತು. 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಿದ ಬಳಿಕ,ಸಂಘಟಿತ ವಲಯದ ಕೇಂದ್ರ ಸರ್ಕಾರಿ ನೌಕರರಿಗೆ ಗ್ರಾಚ್ಯುಟಿ ಮೊತ್ತದ ಮಿತಿಯನ್ನು 20 ಲಕ್ಷ ರೂ.ಗೆ ಏರಿಸಲಾಗಿದೆ.

ಕೇಂದ್ರ ಸರ್ಕಾರಿ ನೌಕರರ ರೀತಿಯಲ್ಲಿಯೇ ಸಂಘಟಿತ ವಲಯದ ಕಾರ್ಮಿಕರಿಗೂ 20 ಲಕ್ಷ ರೂ. ವರೆಗೂ ತೆರಿಗೆ ಮುಕ್ತವಾಗಿ ಸಿಗಲಿದೆ.

Parliament passes Payment of Gratuity bill tax-free gratuity to Rs 20 lakh

ಗಣಿ, ತೈಲಕ್ಷೇತ್ರ, ಫ್ಯಾಕ್ಟರಿ, ಬಂದರು, ರೈಲ್ವೇ ಕಂಪನಿಗಳು ಮೊದಲಾದ ಕಡೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಅನುಕೂಲ ಒದಗಿಸಲು ಗ್ರಾಚುಟಿ ಪಾವತಿ ಕಾಯ್ದೆ 1972 ನ್ನು ಜಾರಿಗೆ ತರಲಾಗಿದೆ. ಗ್ರಾಚ್ಯುಟಿ ಅಧಿನಿಯಮ 1972ರ ಪ್ರಕಾರ ಉದ್ಯೋಗಿಯ ಹೆಸರು ಸೇರ್ಪಡೆಗೊಂಡಿದ್ದರೆ, ನಿಮ್ಮ ಔದ್ಯೋಗಿಕ ಅನುಭವದ ಜತೆ ಲೆಕ್ಕ ಹಾಕಿ ಗ್ರಾಚ್ಯುಟಿ ನೀಡಲಾಗುತ್ತದೆ.

ಉದ್ಯೋಗದಾತರಿಂದ ಉದ್ಯೋಗಿಗಳಿಗೆ ಸಿಗುವ ಕೊಡುಗೆಗಳಲ್ಲಿ ಗ್ರಾಚುಟಿ ಕೂಡಾ ಒಂದಾಗಿದೆ. ಗ್ರಾಚುಟಿ ಅಧಿನಿಯಮದ ಪ್ರಕಾರ ಉದ್ಯೋಗಿ ನಿವೃತ್ತಿ ಹೊಂದಿದ 1 ತಿಂಗಳ ಒಳಗಾಗಿ ಕಡ್ಡಾಯವಾಗಿ ಗ್ರಾಚ್ಯುಟಿ ಹಣವನ್ನು ಪಾವತಿಸಬೇಕಾಗುತ್ತದೆ. ಉದ್ಯೋಗಿ ತನ್ನ ವೃತ್ತಿ ಬದುಕಿನಲ್ಲಿ ಹಲವಾರು ಬಾರಿ ಉದ್ಯೋಗ ಬದಲಾಯಿಸಬೇಕಾಗುತ್ತದೆ. ಗ್ರಾಚುಟಿ ಪಡೆದು ಉದ್ಯೋಗ ತೊರೆಯಬಹುದಾಗಿದೆ.

ಇದರಂತೆ, 10 ಅಥವಾ ಅದಕ್ಕಿಂತ ಹೆಚ್ಚು ಮಂದಿ ಕೆಲಸ ಮಾಡುವ ಸಂಸ್ಥೆಗಳಲ್ಲಿನ ಕಾರ್ಮಿಕರು ಕನಿಷ್ಟ 5 ವರ್ಷ ಕೆಲಸ ಮಾಡಿದಲ್ಲಿ ಗ್ರಾಚುಟಿ ಪಡೆಯಲು ಅರ್ಹರಾಗಿರುತ್ತಾರೆ. ಸೇವೆಯನ್ನು ಮಾಡುವ ಪ್ರತಿ ವರ್ಷಕ್ಕೆ 15 ದಿನಗಳ ವೇತನವನ್ನು ಗ್ರಾಚುಟಿ ಎಂದು ಲೆಕ್ಕಹಾಕಲಾಗುವುದು. 2010 ರಲ್ಲಿ ಗ್ರಾಚುಟಿ ಗರಿಷ್ಟ ಮೊತ್ತವನ್ನು 10 ಲಕ್ಷ ರೂ. ನಿಗದಿ ಮಾಡಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+