MPs Suspended: ಲೋಕಸಭೆಯಿಂದ 47 ಸಂಸದರನ್ನು ಅಮಾನತುಗೊಳಿಸಿದ ಸ್ವೀಕರ್:‌ ಕಾರಣವೇನು?

ದೆಹಲಿ,ಡಿಸೆಂಬರ್‌ 18: ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ 47 ಮಂದಿ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಲಾಗಿದೆ.

ಲೋಕಸಭೆಯಲ್ಲಿ ಉಂಟಾದ ಭದ್ರತಾ ಲೋಕದ ಕುರಿತು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು, ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆಯ ವೇಳೆ ಸಂಸದರು ಸದನದೊಳಗೆ ಫಲಕಗಳನ್ನು ಪ್ರದರ್ಶಿಸಿದ್ದರಿಂದ ಸ್ವೀಕರ್‌ 33 ಸಂಸದರನ್ನ ಅಮಾನತುಗೊಳಿಸಿದ್ದಾರೆ.

Parliament security breach issue: Over 47 Opposition MPs Suspended From Lok Sabha Amid Protests

ಲೋಕಸಭೆಯಲ್ಲಿ ಭದ್ರತಾ ಲೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಂದ ಹೇಳಿಕೆಗಳನ್ನು ನೀಡುವಂತೆ ಪ್ರತಿಪಕ್ಷಗಳು ಕಳೆದ ವಾರದಿಂದ ಒತ್ತಾಯಿಸುತ್ತಿವೆ ಹಾಗೂ ಸದಸ್ಯರು ಕಲಾಪಗಳಿಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಸತತವಾಗಿ ವಿಪಕ್ಷಗಳ ಸಂಸದರನ್ನ ಅಮಾನತು ಮಾಡಲಾಗಿದೆ.

ಗೌರವ್ ಗೊಗೊಯ್, ಎ ರಾಜಾ, ಕಲ್ಯಾಣ್ ಬ್ಯಾನರ್ಜಿ, ದಯಾನಿಧಿ ಮುರಸೋಲಿ ಮಾರನ್, ಕೆ ಜಯಕುಮಾರ್, ವಿಜಯ್ ವಸಂತ್, ಪ್ರತಿಮಾ ಮೊಂಡಲ್, ಸೌಗತ ರಾಯ್ ಮತ್ತು ಸತಾಬ್ದಿ ರಾಯ್ ಸೇರಿದಂತೆ ಇತರ ನಾಯಕರು ಸೋಮವಾರ ಅಮಾನತುಗೊಂಡಿದ್ದಾರೆ.

13 ಸಂಸದರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಸೋಮವಾರ ಕಲಾಪಕ್ಕೆ ಅಡ್ಡಿ ಪಡಿಸಿದ 30ಕ್ಕೂ ಹೆಚ್ಚು ವಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸದನದಲ್ಲಿ ಗೃಹ ಸಚಿವರು ಉತ್ತರಕ್ಕೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷದವರಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಂಸತ್​​ನಲ್ಲಿ ನಡೆದ ಭದ್ರತಾ ಲೋಪ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ವಿಷಾದನೀಯ. ಸದನದ ಬಾವಿಗೆ ನುಗ್ಗಿ ಘೋಷಣೆ ಕೂಗುವುದು ಸದನದ ಘನತೆಗೆ ವಿರುದ್ಧವಾಗಿದೆ ಎಂದು ಅಮಾನತುಗೊಳಿಸಿದ್ದಾರೆ.

ಈ ವಿಚಾರವಾಗಿ ಕಾಂಗ್ರೆಸ್‌ ಸಂಸದ ಅಧೀರ್‌ ರಂಜನ್‌ ಚೌಧರಿ ಮಾತನಾಡಿ, ವಿರೋಧ ಪಕ್ಷದವರ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಸರ್ವಾಧಿಕಾರಿ ರೀತಿ ವರ್ತಿಸುತ್ತಿದ್ದು, ಸಂಸತ್ತನ್ನು ಬಿಜೆಪಿ ತನ್ನ ಕೇಂದ್ರ ಕಚೇರಿ ಎಂದು ಭಾವಿಸಿದೆ. ಅಧಿವೇಶನ ಆರಂಭವಾದಾಗಿನಿಂದಲೂ ವಿಪಕ್ಷಗಳು ಸುಗಮ ಕಲಾಪಕ್ಕೆ ಸಹಕಾರ ಕೊಟ್ಟರೂ ಈ ರೀತಿ ಮಾಡುತ್ತಿರುವುದು ಖಂಡನೀಯ. ಸುದೀರ್ಘ ಚರ್ಚೆಗೆ ಆಗ್ರಹಿಸಿದ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಿರುವುದು ಖಂಡನೀಯ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಕಾಂಗ್ರೆಸ್​ ಸಂಸದ ಅಧೀರ್​ ರಂಜನ್​ ಚೌಧರಿ ಕಿಡಿಕಾರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+