Parliament Special Session: ವಿಶೇಷ ಸಂಸತ್ ಅಧಿವೇಶನ: ಇದು ಮೊದಲು ನಡೆದಿದೆಯೇ? ಯಾವಾಗ?
ದೆಹಲಿ ಸೆಪ್ಟೆಂಬರ್ 14: ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನವನ್ನು ಆಗಸ್ಟ್ 31ರಂದು ಗುರುವಾರ ಕೇಂದ್ರ ಸರ್ಕಾರ ಘೋಷಿಸಿತು. ವಿಶೇಷ ಅಧಿವೇಶನವನ್ನು ಘೋಷಿಸುವಾಗ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅದರ ಕಾರ್ಯಸೂಚಿಯನ್ನು ಬಹಿರಂಗಪಡಿಸಲಿಲ್ಲ ಎಂಬುದು ಗಮನಾರ್ಹ.
ಸೆಪ್ಟೆಂಬರ್ 18 ರಿಂದ 5 ದಿನಗಳ ಕಾಲ ಸಂಸತ್ತಿನ ವಿಶೇಷ 5 ದಿನಗಳ ಅಧಿವೇಶನವನ್ನು ಕೇಂದ್ರ ಸರ್ಕಾರ ಕರೆದಿದೆ. ಈ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದು, ಸರ್ಕಾರ ಸೆಪ್ಟೆಂಬರ್ 18 ರಿಂದ ಸೆಪ್ಟೆಂಬರ್ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ ಎಂದು ಹೇಳಿದ್ದಾರೆ.

ಸಂಸತ್ತಿನ ವಿಶೇಷ ಅಧಿವೇಶನವನ್ನು (17ನೇ ಲೋಕಸಭೆಯ 13ನೇ ಅಧಿವೇಶನ ಮತ್ತು ರಾಜ್ಯಸಭೆಯ 261ನೇ ಅಧಿವೇಶನ) ಸೆಪ್ಟೆಂಬರ್ 18ರಿಂದ 22ರವರೆಗೆ ಐದು ದಿನಗಳ ಕಾಲ ಅಧಿವೇಶನಗಳನ್ನು ನಡೆಸಲಾಗುತ್ತಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಮುನ್ನೋಡುತ್ತಿದ್ದೇವೆ. ಎಂದು ಜೋಶಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಈ ರೀತಿಯ ಸಂಸತ್ತಿನ ವಿಶೇಷ ಅಧಿವೇಶನಗಳು ಈ ಮೊದಲು ನಡೆದಿದೆಯೇ? ಯಾವಾಗ ನಡೆದಿದೆ ಎಂದು ತಿಳಿಯೋಣ.
ಸಂಸತ್ತಿನ ವಿಶೇಷ ಅಧಿವೇಶನಗಳು
*ಭಾರತದ ಸ್ವಾತಂತ್ರ್ಯವನ್ನು ಗುರುತಿಸಲು ಸಂಸತ್ತಿನ ಮೊದಲ ವಿಶೇಷ ಅಧಿವೇಶನವನ್ನು ಆಗಸ್ಟ್ 14 ಮತ್ತು 15 ರಂದು ಕರೆಯಲಾಯಿತು.
*1962 ರಲ್ಲಿ ಭಾರತ-ಚೀನಾ ಯುದ್ಧದ ಸಮಯದಲ್ಲಿ, ಚೀನಾದ ಆಕ್ರಮಣವನ್ನು ಸುದೀರ್ಘವಾಗಿ ಚರ್ಚಿಸಲು ಪ್ರಧಾನಿ ಜವಾಹರಲಾಲ್ ನೆಹರು ನೇತೃತ್ವದಲ್ಲಿ ಮತ್ತೊಂದು ವಿಶೇಷ ಅಧಿವೇಶನವನ್ನು ನವೆಂಬರ್ 8 ಮತ್ತು 9 ರಂದು ಕರೆಯಲಾಯಿತು.
*15 ಆಗಸ್ಟ್ 1972 ರಂದು, ಭಾರತದ ಸ್ವಾತಂತ್ರ್ಯದ ರಜತ ಮಹೋತ್ಸವವನ್ನು ಗುರುತಿಸಲು ವಿಶೇಷ ಅಧಿವೇಶನವನ್ನು ಕರೆಯಲಾಯಿತು.
*'ಕ್ವಿಟ್ ಇಂಡಿಯಾ ಚಳುವಳಿ'ಯ 50 ವರ್ಷಗಳ ವಾರ್ಷಿಕೋತ್ಸವವನ್ನು ಆಚರಿಸಲು 9 ಆಗಸ್ಟ್ 1992 ರಂದು ಮಧ್ಯರಾತ್ರಿಯ ಅಧಿವೇಶನವನ್ನು ಕರೆಯಲಾಯಿತು.
*15 ಆಗಸ್ಟ್ 1997 ರಂದು, ಭಾರತದ ಸ್ವಾತಂತ್ರ್ಯದ 50-ವರ್ಷಗಳನ್ನು ಗುರುತಿಸಲು ಮಧ್ಯರಾತ್ರಿಯ ಅಧಿವೇಶನವನ್ನು ಕರೆಯಲಾಯಿತು.

*30 ಜೂನ್ 2017 ರಂದು, ಮೋದಿ ಸರ್ಕಾರವು ಸರಕು ಮತ್ತು ಸೇವಾ ತೆರಿಗೆಯನ್ನು (GST) ಜಾರಿಗೆ ತರಲು ಎರಡೂ ಸದನಗಳ ಜಂಟಿ ಮಧ್ಯರಾತ್ರಿ ಅಧಿವೇಶನಕ್ಕೆ ಕರೆ ನೀಡಿತು. ಇದು ಸಂಸತ್ತಿನ ಮೊದಲ ವಿಶೇಷ ಅಧಿವೇಶನವಾಗಿದ್ದು, ಮಸೂದೆಯನ್ನು ಚರ್ಚಿಸಲಾಯಿತು. ಹಿಂದಿನ ಎಲ್ಲಾ ಅಧಿವೇಶನಗಳನ್ನು ಐತಿಹಾಸಿಕ ಘಟನೆಗಳನ್ನು ಸ್ಮರಿಸಲು ಕರೆಯಲಾಗುತ್ತಿತ್ತು.
ಇದು ಏಕೆ ಮುಖ್ಯ?
ವಿಶೇಷ ಅಧಿವೇಶನ ಘೋಷಣೆಯಾದ ಒಂದು ದಿನದ ನಂತರ ಪ್ರಸ್ತಾವನೆಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ರಚಿಸಿರುವುದರಿಂದ ಮುಂಬರುವ ವಿಶೇಷ ಅಧಿವೇಶನದಲ್ಲಿ ಸರ್ಕಾರವು 'ಒಂದು ರಾಷ್ಟ್ರ, ಒಂದು ಚುನಾವಣೆ' ವ್ಯವಸ್ಥೆಯನ್ನು ಪ್ರಸ್ತಾಪಿಸಬಹುದು ಎಂಬ ಊಹಾಪೋಹಗಳಿವೆ.
ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನ ಜು.20ರಿಂದ ಪ್ರಾರಂಭವಾಗಿ ಆ.11ರವರೆಗೆ ನಡೆದಿತ್ತು. ಬಿಜೆಪಿಯ ಎನ್‌ಡಿಎ ಒಕ್ಕೂಟ ಮತ್ತು ವಿರೋಧ ಪಕ್ಷ I.N.D.I.A ಬಣದ ನಡುವೆ ಸದನದಲ್ಲಿ ಭಾರೀ ವಾಕ್ಸಮರಗಳು ನಡೆದಿತ್ತು. ಮಣಿಪುರ ಜನಾಂಗೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ಪ್ರತಿಕ್ರಿಯಿಸುವಂತೆ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಪಟ್ಟು ಹಿಡಿದಿತ್ತು. ಇದೇ ವಿಚಾರಕ್ಕೆ I.N.D.I.A ಒಕ್ಕೂಟ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಿತ್ತು.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications