ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್ ಮುಂಗಾರು ಅಧಿವೇಶನ; ಚರ್ಚೆಗೆ ಸರ್ವಪಕ್ಷಗಳು ಅಣಿ

|
Google Oneindia Kannada News

ನವದೆಹಲಿ, ಜುಲೈ 19: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸದ್ಯಕ್ಕೆ ದೇಶದಲ್ಲಿನ ಸಮಸ್ಯೆಗಳಾದ ಇಂಧನ ಬೆಲೆ ಏರಿಕೆ, ಕೊರೊನಾ ನಿರ್ವಹಣೆ, ರೈತರ ಪ್ರತಿಭಟನೆ, ಲಸಿಕೆಯ ಕೊರತೆಯಂಥ ವಿಚಾರಗಳನ್ನು ಚರ್ಚೆ ಮಾಡುವ ಸಾಧ್ಯತೆಯಿದೆ.

ಜುಲೈ 19ರಿಂದ 17ನೇ ಲೋಕಸಭೆಯ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಆಗಸ್ಟ್‌ 13ರಂದು ಮುಕ್ತಾಯವಾಗಲಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆ ನಡೆದ ನಂತರ ನಡೆಸಲಾಗುತ್ತಿರುವ ಮೊದಲ ಮುಂಗಾರು ಅಧಿವೇಶನ ಇದಾಗಿದೆ.

ಕಳೆದ ವರ್ಷ ಕೊರೊನಾ ಕಾರಣವಾಗಿ ಸೆಪ್ಟೆಂಬರ್‌ನಲ್ಲಿ ಮುಂಗಾರು ಅಧಿವೇಶನ ಹಮ್ಮಿಕೊಳ್ಳಲಾಗಿತ್ತು.

Parliaments Monsoon Session To Start From Today

ಮುಂಗಾರು ಅಧಿವೇಶನದ 19 ಕಲಾಪಗಳಲ್ಲಿ ದೇಶದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು. ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಮಧ್ಯಾಹ್ನ 1ರಿಂದ ಸಂಜೆ 6ರವರೆಗೆ ಕಲಾಪಗಳು ನಡೆಯಲಿವೆ.

ಅಧಿವೇಶನಕ್ಕೂ ಮುನ್ನ ಭಾನುವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ 33 ಪಕ್ಷಗಳ 40ಕ್ಕೂ ಹೆಚ್ಚು ನಾಯಕರು ಭಾಗವಹಿಸಿ ಕಲಾಪದಲ್ಲಿ ಯಾವ ವಿಷಯಗಳ ಕುರಿತು ಬಗ್ಗೆ ಚರ್ಚಿಸಬೇಕು ಎಂಬುದರ ಸಲಹೆ ನೀಡಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳು ಸೇರಿದಂತೆ ಎಲ್ಲ ಸದಸ್ಯರ ಸಲಹೆಗಳು ಮೌಲ್ಯಯುತವಾಗಿವೆ. ಸರ್ವ ಸದಸ್ಯರ ಅಭಿಪ್ರಾಯದಂತೆ ಕಲಾಪ ನಡೆಯಲಿದೆ ಎಂದು ಭರವಸೆ ನೀಡಿದ್ದಾರೆ.

ಅಧಿವೇಶನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಅಧಿವೇಶನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಜನರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಪಕ್ಷಗಳು ಸೌಹಾರ್ದಯುತವಾಗಿ ಮಾತನಾಡಬೇಕು ಹಾಗೂ ಅದಕ್ಕೆ ಪ್ರತಿಕ್ರಿಯೆ ನಡೆಯಲು ಸರ್ಕಾರಕ್ಕೆ ಅವಕಾಶ ನೀಡಬೇಕು. ಅಂಥ ವಾತಾವರಣ ಸೃಷ್ಟಿಸುವುದು ಎಲ್ಲರ ಜವಾಬ್ದಾರಿ ಎಂದಿದ್ದಾರೆ.

ಸಭೆ ನಂತರ ಮಾತನಾಡಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, "ಲೋಕಸಭೆ ಮಳೆಗಾಲದ ಅಧಿವೇಶನದಲ್ಲಿ 20ಕ್ಕೂ ಹೆಚ್ಚು ವಿಧೇಯಕಗಳು ಮಂಡನೆ ಆಗಲಿದ್ದು, ಪ್ರತಿಪಕ್ಷಗಳು ತರುವ ಯಾವುದೇ ಬಗೆಯ ಚರ್ಚೆಗೆ ಸರ್ಕಾರ ಸಿದ್ಧವಿದೆ. ವಿಶ್ವದಲ್ಲೇ ಅತೀ ದೊಡ್ಡ ಕೊರೊನಾ ಲಸಿಕೆ ಅಭಿಯಾನ ನಡೆಸಿದ್ದೇವೆ. ಈಗಾಗಲೇ 40 ಕೋಟಿಯಷ್ಟು ಲಸಕೆ ನೀಡಿದ್ದೇವೆ. ಎಲ್ಲರಿಗೂ ಲಸಿಕೆ ಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕೊರೊನಾ ನಿಯಂತ್ರಿಸಲು ಯಶಸ್ವಿಯಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ" ಎಂದು ಹೇಳಿದ್ದರು.

English summary
Parliament is set to start monsoon session from today. Discussions on raging issues of corona, farmers protest, fuel prices hike may discussed
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X