ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ : ರಾಹುಲ್ ಹೇಳಿದ್ದೇನು?

|
Google Oneindia Kannada News

ನವದೆಹಲಿ, ಜನವರಿ 12 : 'ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸಿರುವುದು ಅತ್ಯಂತ ಮಹತ್ವದ ವಿಚಾರ. ಇದರ ಬಗ್ಗೆ ಸಂಬಂಧಪಟ್ಟವರು ತಕ್ಷಣ ಕ್ರಮ ಕೈಗೊಳ್ಳಬೇಕು' ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ದೇಶದ ಎಲ್ಲಾ ನಾಗರಿಕರು ನ್ಯಾಯಾಂಗದ ಮೇಲೆ ಸಾಕಷ್ಟು ನಂಬಿಕೆ ಹೊಂದಿದ್ದಾರೆ. ಅದರಲ್ಲೂ ಸುಪ್ರೀಂಕೋರ್ಟ್‌ ಎಂದರೆ ಅಂತಿಮ ಎನ್ನುವ ವಿಶ್ವಾಸವಿದೆ' ಎಂದರು.

'ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಲೋಪಗಳಿವೆ ಎಂದು ನ್ಯಾಯಮೂರ್ತಿಗಳೇ ಹೇಳಿರುವುದು ಸಾಮಾನ್ಯವಾದ ವಿಚಾರವೇನಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು' ಎಂದು ರಾಹುಲ್ ಗಾಂಧಿ ತಿಳಿಸಿದರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ಕರೆದಿದ್ದು ಏಕೆ?ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ಕರೆದಿದ್ದು ಏಕೆ?

Rahul Gandhi

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿಯಲ್ಲಿ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಹೇಳಿಕೆ ನೀಡಿದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಸಹ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಜೊತೆ ಸಭೆ ನಡೆಸಿದ್ದಾರೆ.

ನ್ಯಾಯಮೂರ್ತಿಗಳ ನಿಗೂಢ ನಡೆ: ಸಿಡಿದೆದ್ದ ಜಡ್ಜ್ ಗಳ ಬಗ್ಗೆ ಜನರೇನಂತಾರೆ?ನ್ಯಾಯಮೂರ್ತಿಗಳ ನಿಗೂಢ ನಡೆ: ಸಿಡಿದೆದ್ದ ಜಡ್ಜ್ ಗಳ ಬಗ್ಗೆ ಜನರೇನಂತಾರೆ?

ನ್ಯಾಯಮೂರ್ತಿಗಳಾದ ಚೆಲಮೇಶ್ವರ, ರಂಜನ್ ಗೊಗೋಯಿ, ಎಂ.ಬಿ.ಲೋಕೂರ್ ಮತ್ತು ಕುರಿಯನ್ ಜೋಸೆಫ್ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ್ದರು. ದೇಶದ ಐತಿಹಾಸದಲ್ಲಿಯೇ ನ್ಯಾಯಮೂರ್ತಿಗಳು ಮಾಧ್ಯಮಗಳನ್ನು ಮುಂದೆ ಬಂದಿದ್ದು ಇದೇ ಮೊದಲು.

English summary
The observations made by the Honourable Judges and the issues raised by them in the letter to the Chief Justice of India have far reaching consequences for the values we hold sacred said AICC president Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X